ರಾಮನಗರ ಚುನಾವಣೆ ಫಲಿತಾಂಶ 2023: ನಿಖಿಲ್ ಕುಮಾರಸ್ವಾಮಿ ಭವಿಷ್ಯ ನಿರ್ಧಾರ
ಜೆಡಿಎಸ್ ಭದ್ರಕೋಟೆ ಎಂದು ಕರೆಯಲ್ಪಡುವ ರಾಮನಗರದಲ್ಲಿ ಚುನಾವಣಾ ಮತಎಣಿಕೆ ಪ್ರಕ್ರಿಯೆ ಸ್ವಲ್ಪ ಹೊತ್ತಿನಲ್ಲಿ ಆರಂಭಗೊಳ್ಳಲಿದೆ. ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದೆ. ರಾಮನಗರದ ಸರ್ಕಾರೀ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೌಂಟಿಂಗ್ ನಡೆಯಲಿದೆ, ಪ್ರಮುಖವಾಗಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯದ ಬಗ್ಗೆ ಎಲ್ಲರ ಗಮನ ನೆಟ್ಟಿದೆ.
ಕಣದಲ್ಲಿ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ, ಬಿಜೆಪಿಯಿಂದ ಗೌತಂ ಗೌಡ, ಕಾಂಗ್ರೆಸ್ಸಿನಿಂದ್ ಇಕ್ಬಾಲ್ ಹುಸೇನ್ ಸೇರಿದಂತೆ ಹಲವರು ಕಣದಲ್ಲಿದ್ದಾರೆ. ರಾಮನಗರ ಕ್ಷೇತ್ರದಲ್ಲಿ ಒಟ್ಟು ಶೇ. 84.89 ಮತದಾನವಾಗಿತ್ತು. ಕ್ಷೇತ್ರದಲ್ಲಿ ಅಂದಾಜು 20 ಸುತ್ತಿನ ಮತ ಏಣಕೆ ಕಾರ್ಯ ನಡೆಯಲಿದೆ.

ರಾಮನಗರದಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಕುಟುಂಬ ರಾಜಕೀಯವಾಗಿ ಬೇರೂರಿದೆ. ಹೀಗಾಗಿನೇ ರಾಮನಗರ ಕ್ಷೇತ್ರವನ್ನು ದೇವೇಗೌಡರ ಕುಟುಂಬದ ಭದ್ರಕೋಟೆ ಎಂದು ಕರೆಯಲಾಗುತ್ತದೆ. ಈ ಹಿಂದೆ ಗೌಡ್ರು ಇದೇ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಬಳಿಕ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಇದೇ ಕ್ಷೇತ್ರದಿಂದ ಮತದಾನ ಪ್ರಭುಗಳ ಮನ ಗೆದ್ದಿದ್ದರು.
2018ರ ಚುನಾವಣೆಯಲ್ಲಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಬೀಗಿದ್ದರು. ಇದೀಗ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಈ ಬಾರಿ ಇದೇ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ಅವರಿಗಾಗಿ ಈ ಬಾರಿ ಕ್ಷೇತ್ರ ತ್ಯಾಗ ಮಾಡಿದ್ದಾರೆ.
ಇವರ ವಿರುದ್ಧ ಕಳೆದ ಬಾರಿ ಸೋಲನ್ನು ಕಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಈ ಬಾರಿಯೂ ಸ್ಪರ್ಧೆ ಮಾಡುತ್ತಿದ್ದು, ಜೊತೆಗೆ, ಬಿಜೆಪಿ ಅಭ್ಯರ್ಥಿಯೂ ಕಣದಲ್ಲಿ ಇರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯದಲ್ಲಿ ರಾಮನಗರ ಹೈವೋಲ್ಟೇಜ್ ಕ್ಷೇತ್ರವಾಗಿದೆ.












Click it and Unblock the Notifications