• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮನಗರ: ಕೂಟಗಲ್ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಜೆಡಿಎಸ್ ಪಾಲು

By ರಾಮನಗರ ಪ್ರತಿನಿಧಿ
|

ರಾಮನಗರ, ಜೂನ್ 22: ತಾಲ್ಲೂಕಿನ ಕೂಟಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಭಾಗ್ಯಲಕ್ಷ್ಮಿ ಗುಡ್ಡತಿಮ್ಮಯ್ಯ ಮತ್ತು ಉಪಾಧ್ಯಕ್ಷರಾಗಿ ಮಮತಾ ಸಿದ್ದರಾಜು ಇಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಕೂಟಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಶಶಿಕಲಾ ಶಿವಣ್ಣ ಮತ್ತು ಉಪಾಧ್ಯಕ್ಷರಾಗಿದ್ದ ತಾಯಕ್ಕ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಿತು.

ಅಧ್ಯಕ್ಷ ಸ್ಥಾನ ಮತ್ತು ಉಪಾಧ್ಯಕ್ಷ ಸ್ಥಾನಗಳು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿತ್ತು. ಅಂಕನಹಳ್ಳಿ ಮತ ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾಗ್ಯಲಕ್ಷ್ಮಿ ಗುಡ್ಡತಿಮ್ಮಯ್ಯ ಅಧ್ಯಕ್ಷ ಸ್ಥಾನಕ್ಕೆ ಮತ್ತು ಕೂಟಗಲ್ ಮತ ಕ್ಷೇತ್ರದಿಂದ ಆಯ್ಕೆಯಾಗಿದ್ದ ಮಮತಾ ಸಿದ್ದರಾಜು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.

ಇವರನ್ನು ಹೊರತುಪಡಿಸಿ ಬೇರೆ ಯಾವ ಸದಸ್ಯರು ಸಹ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸದ ಕಾರಣ ಭಾಗ್ಯಲಕ್ಷ್ಮಿ ಗುಡ್ಡತಿಮ್ಮಯ್ಯ ಅಧ್ಯಕ್ಷರಾಗಿ, ಮಮತಾ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಸಭೆಯಲ್ಲಿ ಘೋಷಿಸಿದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸನ್ನ ಕುಮಾರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. 19 ಸದಸ್ಯ ಬಲವುಳ್ಳ ಕೂಟಗಲ್ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಚುನಾವಣಾ ಸಭೆಯಲ್ಲಿ 18 ಸದಸ್ಯರು ಭಾಗವಹಿಸಿದ್ದರು. ಒಬ್ಬರು ಗೈರಾಗಿದ್ದರು.

ನೂತನವಾಗಿ ಅಧ್ಯಕ್ಷೆಯಾಗಿ ಆಯ್ಕೆಯಾದ ಭಾಗ್ಯಲಕ್ಷ್ಮಿ ಗುಡ್ಡತಿಮ್ಮಯ್ಯ, ಉಪಾಧ್ಯಕ್ಷರಾಗಿ ಆಯ್ಕೆಯಾದ ಮಮತಾ ಅವರನ್ನು ಮಾಗಡಿ ಕ್ಷೇತ್ರದ ಶಾಸಕ ಎ.ಮಂಜುನಾಥ್ ಅಭಿನಂದಿಸಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bhagyalakshmi Guddathimmaiah and Mamata Siddaraju of JDS has been unanimously elected as the President and Vice President of Kutagal Gram Panchayat of Ramanagara district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more