ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಪರಿಚಯ

|
Google Oneindia Kannada News

ರಾಮನಗರ, ನವೆಂಬರ್ 07 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ರಾಮನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಎರಡನೇ ಬಾರಿಗೆ ಅವರು ಶಾಸಕಿಯಾಗಿ ಆಯ್ಕೆಯಾಗಿದ್ದಾರೆ.

ರಾಮನಗರ ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರು 1,25,043 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಪತಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದು, ಇಬ್ಬರೂ ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ.

ರಾಮನಗರ ಕ್ಷೇತ್ರದ ಮೊದಲ ಮಹಿಳಾ ಶಾಸಕಿ ಅನಿತಾ ಕುಮಾರಸ್ವಾಮಿರಾಮನಗರ ಕ್ಷೇತ್ರದ ಮೊದಲ ಮಹಿಳಾ ಶಾಸಕಿ ಅನಿತಾ ಕುಮಾರಸ್ವಾಮಿ

55 ವರ್ಷದ ಅನಿತಾ ಕುಮಾರಸ್ವಾಮಿ ಅವರು ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಬೆಂಗಳೂರು ಇನ್ಸಿಟಿಟ್ಯೂಟ್ ಆಫ್‌ ಟೆಕ್ನಾಲಜಿ ಕಾಲೇಜಿನಿಂದ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.

ಮತಎಣಿಕೆಗೂ ಮುನ್ನವೇ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಜಯಭೇರಿಮತಎಣಿಕೆಗೂ ಮುನ್ನವೇ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಜಯಭೇರಿ

Ramanagara MLA Anitha Kumaraswamy profile

2008ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಮಧುಗಿರಿ ಕ್ಷೇತ್ರದಿಂದ ಸ್ಪರ್ಧಿಸಿ ಅವರು ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿದ್ದರು. 2ನೇ ಬಾರಿಗೆ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.

ರಾಮನಗರ ಉಪ ಚುನಾವಣೆ ಫಲಿತಾಂಶ : ಅನಿತಾ ಭರ್ಜರಿ ಗೆಲುವುರಾಮನಗರ ಉಪ ಚುನಾವಣೆ ಫಲಿತಾಂಶ : ಅನಿತಾ ಭರ್ಜರಿ ಗೆಲುವು

2013ರ ವಿಧಾನಸಭೆ ಚುನಾವಣೆಯಲ್ಲಿ ಅವರು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. 2018ರಲ್ಲಿ ಪತಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾದ ರಾಮನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ದಾಖಲೆಯ ಮತಗಳೊಂದಿಗೆ ಜಯಗಳಿಸಿದ್ದಾರೆ.

ರಾಜಕೀಯದ ಹೊರತಾಗಿ ಉದ್ಯಮದಲ್ಲಿಯೂ ಅವರು ತೊಡಗಿಸಿಕೊಂಡಿದ್ದಾರೆ. ಕಸ್ತೂರಿ ವಾಹಿನಿಯ ಮಾಲೀಕರು ಹೌದು.

* ಅನಿತಾ ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಳಗವಾರ ಗ್ರಾಮದವರು

* ತಂದೆ ಡಾ.ಸೀತಾರಾಮ್, ತಾಯಿ ವಿಮಲಾ

* 1986 ಮಾರ್ಚ್ 13ರಂದು ಎಚ್.ಡಿ.ಕುಮಾರಸ್ವಾಮಿ ಅವರನ್ನು ವಿವಾಹವಾಗಿದ್ದಾರೆ

English summary
Karnataka Chief Minister H.D.Kumaraswamy wife Anitha Kumaraswamy elected as MLA of Ramanagara in the by election 2018. First time she won an election in 2008 in Madhugiri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X