• search
 • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ಸೋಂಕಿನಿಂದ ಡಿಕೆಶಿ ಗುಣಮುಖರಾಗಲಿ ಎಂದು ವಿಶೇಷ ಪೂಜೆ

By ರಾಮನಗರ ಪ್ರತಿನಿಧಿ
|

ರಾಮನಗರ, ಆಗಸ್ಟ್ 28: ಮಹಾಮಾರಿ ಕೊರೊನಾ ಸೋಂಕಿಗೆ ತುತ್ತಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಶೀಘ್ರ ಗುಣಮುಖರಾಗುವಂತೆ ದರ್ಗಾ ಮತ್ತು ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

   ಕರ್ನಾಟಕದಲ್ಲಿ ಪ್ರತಿಮೆ ರಾಜಕಾರಣ ನಡೆಯಬಾರದು‘ - MLA Laxmi hebbalkar | Oneindia Kannada

   ರಾಮನಗರ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಡಿ.ಕೆ ಶಿವಕುಮಾರ್ ಅಭಿಮಾನಿಗಳು ಮತ್ತು ಮುಸ್ಲಿಂ ಮುಖಂಡರು ನಗರದ ಫಿರನ್ಷಾ ವಾಲಿ ದರ್ಗಾ ಮತ್ತು ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

   'ಕಳ್ಳನ ಮನಸ್ಸು ಹುಳ್ಳಗೆ' ಎಂದು ಡಿಕೆಶಿಗೆ ಟಾಂಗ್ ಕೊಟ್ಟ ಸಿ.ಪಿ ಯೋಗೇಶ್ವರ್

   ಮೊದಲಿಗೆ ನಗರದ‌ ಶಕ್ತಿ ದೇವತೆ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನ ಕಾಯಿ ಒಡೆದು ಡಿಕೆಶಿಯವರು ಗುಣಮುಖರಾಗುವಂತೆ ಪ್ರಾರ್ಥನೆ ಸಲ್ಲಿಸಿದರು ನಂತರ ಇತಿಹಾಸ ಪ್ರಸಿದ್ಧ ದರ್ಗಾದಲ್ಲಿ ಮುಸ್ಲಿಂ ಮುಖಂಡರು ವಿಶೇಷ ಪ್ರಾರ್ಥನೆ ಸಲ್ಲಿಸಿ ಡಿಕೆಶಿಯವರ ಆರೋಗ್ಯ ನೀಡುವಂತೆ ಪ್ರಾರ್ಥನೆ ಸಲ್ಲಿಸಿದರು.

   ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡರು, ದೇವಾಲಯ ಮತ್ತು ದರ್ಗಾಗಳಲ್ಲಿ ಪೂಜೆ ಸಲ್ಲಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೊರೊನಾ ಸೋಂಕಿನಿಂದ ಗುಣಮುಖರಾಗಲಿ ಹಾಗೂ ದೇಶವನ್ನು ಕಾಡುತ್ತಿರುವ ಕೊರೊನಾ ಸೋಂಕಿನ ಸಂಕಷ್ಟ ದೂರವಾಗಲಿ ಎಂದು ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾಗಿ ತಿಳಿಸಿದರು.

   English summary
   KPCC President DK Sivakumar Special prayers were offered at the Darga's and Temples for make a speedy recovery.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X