ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ ಮಾಡುತ್ತಿರುವುದು ರೈತರಿಗಾಗಿ, ವ್ಯಾಪಾರಿಗಳಿಗಲ್ಲ: ಡಿಸಿಎಂ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಫೆಬ್ರವರಿ 22: ರಾಮನಗರ ಜಿಲ್ಲಾ ಕೇಂದ್ರದಲ್ಲಿದ್ದ ರೇಷ್ಮೆ ಮಾರುಕಟ್ಟೆಯನ್ನು ಚನ್ನಪಟ್ಟಣಕ್ಕೆ ಸ್ಥಳಾಂತರ ಮಾಡುವುದಕ್ಕೆ ಯಾವುದೇ ರಾಜಕೀಯ ಕಾರಣವಿಲ್ಲ. ಅಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಮಾಡುತ್ತಿರುವುದು ರೈತರಿಗಾಗಿಯೇ ಹೊರತು ದಲ್ಲಾಳಿಗಳಿಗಾಗಿ ಅಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದರು.

ರಾಮನಗರದಲ್ಲಿ ಸೋಮವಾರ ಕನ್ನಿಕಾ ಪರಮೇಶ್ವರಿ ದೇವಾಲಯದ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಮನಗರದಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡಲು ಕೆಲ ಅಡ್ಡಿಗಳಿದ್ದವು. ಈಗಿನ ಮಾರುಕಟ್ಟೆ ಪಕ್ಕದ ಜಮೀನು ಬಿಕ್ಕಟ್ಟು ನ್ಯಾಯಾಲಯದಲ್ಲಿದೆ.

ಆದ್ದರಿಂದ ಎಲ್ಲರಿಗೂ ತಿಳಿದಂತೆ ರಾಮನಗರ ರೇಷ್ಮೆಗೂಡು ಮಾರುಕಟ್ಟೆ ಜಗತ್ತಿನಲ್ಲಿಯೇ ಪ್ರಸಿದ್ಧವಾದದ್ದು, ಹೀಗಾಗಿ ಇದನ್ನು ವಿಸ್ತರಿಸಿ ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಎಂಬ ಉದ್ದೇಶ ಸರಕಾರಕ್ಕೆ ಇತ್ತು. ಆದರೆ ಕೆಲ ಅಡ್ಡಿಗಳು ಎದುರಾದ ಕಾರಣ ಚನ್ನಪಟ್ಟಣ ಬಳಿ ವಿಶಾಲ ಜಾಗದಲ್ಲಿ ಮಾರುಕಟ್ಟೆ ಬರುತ್ತಿದೆ ಎಂದರು.

Ramanagara: The High-Tech Silk Market Is Building For Farmers, Not Traders: DCM

ಮೀಸಲು ಬಗ್ಗೆ ಸಾರ್ವಜನಿಕ ಚರ್ಚೆ ಬೇಡ
ಪಂಚಮಸಾಲಿ ಮೀಸಲಿಗೆ ಸಂಬಂಧಿಸಿದಂತೆ ಸರಕಾರ ಎಲ್ಲ ರೀತಿಯಲ್ಲೂ ಪರಿಶೀಲನೆ ಮಾಡುತ್ತಿದೆ. ಎಲ್ಲರ ಬೇಡಿಕೆಗಳನ್ನು ಗಮನದಲ್ಲಿ ಇಟ್ಟುಕೊಂಡು ನ್ಯಾಯಸಮ್ಮತವಾದ ರೀತಿಯಲ್ಲಿ ಸರಕಾರ ನಿರ್ಧಾರ ಕೈಗೊಳ್ಳಲಿದೆ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದು ಬೇಡ ಎಂದು ಡಿಸಿಎಂ ಅಶ್ವಥ್ ನಾರಾಯಣ ಹೇಳಿದರು.

Recommended Video

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ | Oneindia Kannada

ಖಾಸಗಿ ಶಿಕ್ಷಣ ಸಂಸ್ಥೆಗಳ ಪರವಾಗಿ ನಾಳೆ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಪುಟ್ಟಣ್ಣ ಅವರ ಪ್ರತಿಭಟನೆ ಸರಕಾರದ ವಿರುದ್ಧ ಎಂದು ಅರ್ಥೈಸಬಾರದು. ಅವರು ತಮ್ಮ ಮತದಾರರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳ ಬಗ್ಗೆ ಸರಕಾರದ ಗಮನ ಸೆಳೆಯುತ್ತಿದ್ದಾರೆ ಎಂದರು.

English summary
There is no political reason for shifting the silk market to Channapattana,the new market was being built for the farmers and not for the brokers, DCM Dr CN Ashwaththa Narayana said that.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X