ನಿತ್ಯಾನಂದ ಸ್ವಾಮಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ರಾಮನಗರ, ಸೆಪ್ಟೆಂಬರ್.07: ರಾಮನಗರ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಬಿಡದಿ ನಿತ್ಯಾನಂದ ಸ್ವಾಮಿ ವಿರುದ್ಧ ಅತ್ಯಾಚಾರ ಹಾಗೂ ರಾಸಲೀಲೆ ಪ್ರಕರಣದ ವಿಚಾರಣೆ ಕೈಗೆತ್ತಿಗೊಂಡಿದ್ದು, ವಿಚಾರಣೆಗೆ ಹಾಜರಾಗದೆ ಪದೇ ಪದೆ ಗೈರಾಗುತ್ತಿರುವ ನಿತ್ಯಾನಂದ ಸ್ವಾಮಿ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ರಾಮನಗರ ಜಿಲ್ಲಾ ನ್ಯಾಯಲಯದ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಗೋಪಾಲ್ಕೃಷ್ಣ ರೈ ಪೀಠ ವಾರೆಂಟ್ ಆದೇಶ ಹೊರಡಿಸಿದೆ. ಈಗಾಗಲೇ ಪ್ರಕರಣವನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದರೂ ಸಹ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗದೆ ವಿಚಾರಣೆಗೆ ಹಿನ್ನಡೆ ಉಂಟು ಮಾಡುತ್ತಿದ್ದಾರೆಂದು ಸರ್ಕಾರಿ ಪರ ವಕೀಲ ವಡವಡಗಿ ಆಕ್ಷೇಪಣೆ ಸಲ್ಲಿಸಿದರು.
ಇದನ್ನ ಮಾನ್ಯ ಮಾಡಿದ ನ್ಯಾಯಾಧೀಶರು ಮುಂದಿನ ವಿಚಾರಣೆಗೆ ಆರೋಪಿಗಳು ತಪ್ಪಿಸಿಕೊಳ್ಳದಂತೆ ಹಾಜರಾಗಲು ತಾಕೀತು ಮಾಡಿದರು. ನ್ಯಾಯಾಲಯದ ಎಚ್ಚರಿಕೆಯನ್ನು ಕಡೆಗಣಿಸಿ ನಿತ್ಯಾನಂದ ಕಳೆದ ಮೂರು ವಿಚಾರಣೆಗೆ ಹಾಜರಾಗಿರಲಿಲ್ಲ.

ಇನ್ನು ನಿತ್ಯಾನಂದ ಸ್ವಾಮಿಯ ಮಾಜಿ ಕಾರು ಚಾಲಕ ಹಾಗೂ ಪ್ರಮುಖ ಸಾಕ್ಷಿ ಲೆನಿನ್ ಕುರುಪ್ಪನ್ ನ ವಿಚಾರಣೆ ವೇಳೆ ಹಾಜರಾಗಬೇಕಿದ್ದ ನಿತ್ಯಾನಂದ ಪ್ರಕರಣದ ವಿಚಾರಣೆಯನ್ನು ನಿಧಾನಗೊಳಿಸಲು ತಪ್ಪಿಸಿಕೊಂಡಿದ್ದರು.
ನಿತ್ಯಾನಂದ ಗೈರಿನ ನಡುವೆ ಲೆನಿನ್ ವಿಚಾರಣೆಯನ್ನು ಎರಡು ದಿನ ಇನ್ ಕ್ಯಾಮೆರಾ ಪ್ರೊಸೆಡಿಂಗ್ ಮೂಲಕ ನಡೆಸಿ, ಮುಂದಿನ ವಿಚಾರಣೆಯನ್ನು ಇದೇ ಸೆಪ್ಟೆಂಬರ್ ತಿಂಗಳ 14ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications