"ಅಪ್ಪ ಬೇಕು" ಎನ್ನುತ್ತಲೇ ತಂದೆ ಚಿತೆಗೆ ಅಗ್ನಿಸ್ಪರ್ಶ ಮಾಡಿದ ರಮೇಶ್ ಮಗ
ರಾಮನಗರ, ಅಕ್ಟೋಬರ್ 13: ಮಾಜಿ ಡಿಸಿಎಂ- ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ ಅವರ ಆಪ್ತ, ಆದಾಯ ತೆರಿಗೆ ಅಧಿಕಾರಿಗಳ ದಾಳಿಗೆ ಹೆದರಿ ನೇಣಿಗೆ ಶರಣಾದ ರಮೇಶ್ ಅಂತ್ಯಸಂಸ್ಕಾರ ಭಾನುವಾರ ಸ್ವಗ್ರಾಮ ಮೆಳೇಹಳ್ಳಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನೇರವೇರಿತು.
ರಮೇಶ್ ಅಂತ್ಯಕ್ರಿಯೆ ವಿದಾಯದ ವೇಳೆ ಅವರ ಮಗ ಮೋಹಿತ್, "ಅಪ್ಪ ಬೇಕು, ಅಪ್ಪ ಬೇಕು" ಎಂದು ಕಣ್ಣೀರಿಟ್ಟ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಡಾ.ಜಿ. ಪರಮೇಶ್ವರ ಅವರನ್ನು ತಬ್ಬಿ, ಅಪ್ಪ ಬೇಕು, ಅಪ್ಪ ಬೇಕು ಎಂದು ಮೋಹಿತ್ ಗೋಳಾಡುತ್ತಿದ್ದ. ಇನ್ನು ಮುಂದೆ ನಮಗೆ ಯಾರು ದಿಕ್ಕು ಸಾಹೇಬರೇ ಎಂದು ಗೋಳಾಡುತ್ತಿದ್ದ ರಮೇಶ್ ಪತ್ನಿ ಸೌಮ್ಯಾ, ಪಿಳಿ ಪಿಳಿ ಕಣ್ಣು ಬಿಡುತ್ತಾ ಏನು ನಡೆಯುತ್ತಿದೆ ಎಂದು ಕುತೂಹಲದಿಂದ ನೋಡುತ್ತಿದ್ದ ಮಗು ಶ್ರೇಯಾ ಸ್ಥಿತಿ ನೋಡಿದರೆ ಎಂಥವರಿಗೂ ಕರುಳು ಹಿಂಡುವಂತೆ ಇತ್ತು.

ಡಾ. ಜಿ. ಪರಮೇಶ್ವರ, ಮಾಜಿ ಶಾಸಕ ಬಾಲಕೃಷ್ಣ, ಮಾಗಡಿ ಶಾಸಕ ಎ. ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು ಮತ್ತು ಎರಡು ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ಡಾ. ಜಿ. ಪರಮೇಶ್ವರ ನಿರಾಕರಿಸಿದರು. ಮೆಳೇಹಳ್ಳಿಯ ರಮೇಶ್ ನಿವಾಸದಿಂದ ಅಂತಿಮ ಯಾತ್ರೆ ನಡೆಯಿತು. ಅವರದೇ ಜಮೀನಿನಲ್ಲಿ ರಮೇಶ್ ಅಂತ್ಯಕ್ರಿಯೆ ನಡೆಯಿತು.
ಇದಕ್ಕೂ ಮುನ್ನ ಮಾತನಾಡಿದ ರಮೇಶ್ ಸಹೋದರ ಸತೀಶ್, ಆದಾಯ ತೆರಿಗೆ ಇಲಾಖೆ ವಿರುದ್ಧ ಕಿಡಿಕಾರಿದರು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮನೆಗೆ ಹೋಗಿ ವಿಚಾರಣೆ ನಡೆಸಿದರೂ ಇಲ್ಲವೆಂದು ಸುಳ್ಳು ಹೇಳಿದ್ದಾರೆ. ಮನೆಗೆ ತೆರಳಿರುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಐ. ಟಿ. ಅಧಿಕಾರಿಗಳ ವಿರುದ್ಧ ದೂರು ದಾಖಲಿಸುತ್ತೇವೆ ಎಂದು ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications