ರಾಮನಗರ ಜೆಡಿಎಸ್ ಕಾರ್ಯಕರ್ತರಿಂದ ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ
ರಾಮನಗರ, ಮೇ. 17: ಸ್ಪಷ್ಟ ಬಹುಮತವಿದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ಸರ್ಕಾರ ರಚನೆಗೆ ಅವಕಾಶ ನೀಡದ ರಾಜ್ಯಪಾಲರ ವಿರುದ್ದ ರಾಮನಗರ ಹಾಗೂ ಚನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಮನಗರ ಐಜೂರು ವೃತ್ತದ ಬಳಿ ಜಮಾಯಿಸಿದ ಕಾರ್ಯಕರ್ತರು ಸ್ವಲ್ಪ ಸಮಯ ಬೆಂಗಳೂರು-ಮೈಸೂರು ಹೈದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಮತ್ತೊಂದೆಡೆ ಚನ್ನಪಟ್ಟಣದಲ್ಲೂ ಕೂಡ ಗಾಂಧಿ ಭವನದಿಂದ ಸಾವಿರಾರು ಸಂಖ್ಯೆಯ ಜೆಡಿಎಸ್ ಕಾರ್ಯಕರ್ತರು ಮೆರವಣಿಗೆ ನಡೆಸಿ ಬಿಜೆಪಿ, ಹಾಗೂ ರಾಜ್ಯಪಾಲರ ವಿರುದ್ದ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಚನ್ನಪಟ್ಟಣ ಜೆಡಿಎಸ್ ಅಧ್ಯಕ್ಷ ಜಯಮುತ್ತು, 'ಕುಮಾರಸ್ವಾಮಿ ಅವರಿಗೆ ಸರ್ಕಾರ ರಚಿಸುವ ಬಹುಮತವಿದ್ದರೂ ರಾಜ್ಯಪಾಲರು ಬಿಜೆಪಿ ಏಜೆಂಟ್ ರಂತೆ ವರ್ತನೆ ಮಾಡುತ್ತಿದ್ದು ಕೂಡಲೇ ತಮ್ಮ ವರ್ತನೆ ಬದಲಿಸಿ ಕುಮಾರಸ್ವಾಮಿ ಅವರಿಗೆ ಸರ್ಕಾರ ರಚಿಸುವ ಅವಕಾಶ ನೀಡಬೇಕು ಇಲ್ಲವಾದಲ್ಲಿ ಮುಂದೆ ನಡೆಯುವ ಅನಾಹುತಗಳಿಗೆ ರಾಜ್ಯಪಾಲರೇ ಹೊಣೆ' ಎಂದು ಎಚ್ಚರಿಕೆ ನೀಡಿದರು.

ರಾಜ್ಯಪಾಲರ ಕ್ರಮ ವಿರೋಧಿಸಿ ನಾಳೆ ದೇಶದಾದ್ಯಂತ ಪ್ರತಿಭಟನೆ ಮಾಡುವಂತೆ ಕಾಂಗ್ರೆಸ್ ಕರೆ ನೀಡಿದ್ದು, ನಾಳೆ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರು ದೇಶದಾದ್ಯಂತ ಕರ್ನಾಟಕದ ರಾಜ್ಯಪಾಲರ ಕ್ರಮದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ.












Click it and Unblock the Notifications