ನಿತ್ಯಾನಂದ ಸ್ವಾಮಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ರಾಮನಗರ ಆಗಸ್ಟ 20: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಬಹಳ ದಿನಗಳಿಂದ ಕಾಣೆಯಾಗಿದ್ದಾರೆ. ಇದೀಗ ರಾಮನಗರದ ಸ್ಥಳೀಯ ನ್ಯಾಯಾಲಯವು 2010 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತ್ಯಾನಂದ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಈ ವಾರಂಟ್ ಹೊರಡಿಸಿದೆ. ಈ ಹಿಂದೆಯೂ ನಿತ್ಯಾನಂದನ ವಿರುದ್ಧ ವಾರೆಂಟ್ ಜಾರಿಯಾಗಿದ್ದರೂ ಆತನನ್ನು ಬಂಧಿಸಲು ಅಥವಾ ಆತ ಎಲ್ಲಿದ್ದಾನೆ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗಿಲ್ಲ.
ಈ ಪ್ರಕರಣದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಚಾರಣೆ ನಡೆಸಲಾಗಿದ್ದು, ಮೂವರು ಸಾಕ್ಷಿಗಳ ವಿಚಾರಣೆಯನ್ನೂ ನಡೆಸಲಾಗಿದೆ. ಆದರೆ, ಪ್ರಮುಖ ಆರೋಪಿ ನಿತ್ಯಾನಂದ ಕೋರ್ಟ್ ಮುಂದೆ ಗೈರುಹಾಜರಾದ ಕಾರಣ ಕಳೆದ ಮೂರು ವರ್ಷಗಳಿಂದ ವಿಚಾರಣೆ ಬಾಕಿ ಉಳಿದಿತ್ತು. 2019 ರಿಂದಲೂ ನಿತ್ಯಾನಂದನಿಗೆ ಹಲವು ಬಾರಿ ಸಮನ್ಸ್‌ಗಳನ್ನು ನೀಡಲಾಗಿದೆ. ಆದರೆ, ಅವರು ಒಂದೇ ಒಂದು ಸಮನ್ಸ್‌ಗೆ ಪ್ರತಿಕ್ರಿಯಿಸಿಲ್ಲ. ಇದೀಗ ನ್ಯಾಯಾಲಯ ಹೊರಡಿಸಿರುವ ವಾರಂಟ್ ಸೆ.23ರವರೆಗೆ ಚಾಲ್ತಿಯಲ್ಲಿದೆ. ಅಂದರೆ ಸೆ.23ರೊಳಗೆ ಪೊಲೀಸರು ನಿತ್ಯಾನಂದನನ್ನು ಬಂಧಿಸಿ ಹಾಜರುಪಡಿಸಬೇಕು.
Recommended Video

ಜಾಮೀನು ರದ್ದು
2010ರಲ್ಲಿ ನಿತ್ಯಾನಂದನ ಚಾಲಕ ಲೆನಿನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿತ್ತು. ಇದೇ ಪ್ರಕರಣದಲ್ಲಿ ನಿತ್ಯಾನಂದನನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. 2020 ರ, ನಿತ್ಯಾನಂದ ದೇಶದಿಂದ ಪರಾರಿಯಾಗಿದ್ದಾನೆ ಎಂದು ಲೆನಿನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಈ ಅರ್ಜಿಯ ಆಧಾರದ ಮೇಲೆ ನಿತ್ಯಾನಂದನ ಜಾಮೀನು ರದ್ದುಗೊಳಿಸಲಾಗಿದೆ.
ನಿತ್ಯಾನಂದ ದೇಶ ಬಿಟ್ಟು ಓಡಿ ಹೋಗಿ ಕೈಲಾಸ ಎಂಬ ಹೆಸರಿನ ದ್ವೀಪದಲ್ಲಿ ಆಶ್ರಮ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಆತ ಎಲ್ಲಿದ್ದಾನೆ ಎಂಬುದು ಇನ್ನೂ ದೃಢಪಟ್ಟಿಲ್ಲ. ಅತ್ಯಾಚಾರ ಪ್ರಕರಣದಲ್ಲಿ, ರಾಮನಗರ ಸೆಷನ್ಸ್ ನ್ಯಾಯಾಲಯವು ಹಲವಾರು ಸಮನ್ಸ್ ಜಾರಿಗೊಳಿಸಿತು. ಆದರೆ, 2019 ರಿಂದ ನಿತ್ಯಾನಂದ ಯಾವುದೇ ಸಮನ್ಸ್‌ಗೆ ಉತ್ತರಿಸಲಿಲ್ಲ ಅಥವಾ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications