ಕನಕಪುರದ ಮರಳೇಗವಿ ಮಠಕ್ಕೆ ಆರ್.ಆರ್. ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಭೇಟಿ
ರಾಮನಗರ, ಅಕ್ಟೋಬರ್ 13: ಬೆಂಗಳೂರಿನ ಆರ್.ಆರ್. ನಗರ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಜಿಲ್ಲೆಯ ಕನಕಪುರದ ಮರಳೇಗವಿ ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಣತಿಯಂತೆ ಕನಕಪುರದ ಮರಳೇಗವಿ ಮಠಕ್ಕೆ ತಂದೆ ಹನುಮಂತರಾಯಪ್ಪ ಜೊತೆ ಆಗಮಿಸಿದ ಕುಸುಮಾ ಹನುಮಂತರಾಯಪ್ಪ ಅವರು ಮುಮ್ಮಡಿ ಶಿವರುದ್ರ ಮಹಾಸ್ವಾಮಿಯವರ ಆಶೀರ್ವಾದ ಪಡೆದು ಕೆಲ ಕಾಲ ಚರ್ಚೆ ನಡೆಸಿದರು.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮರಳೇಗವಿ ಮಠ ಜಿಲ್ಲೆಯಲ್ಲೇ ಅತ್ಯಂತ ಶಕ್ತಿಶಾಲಿ ಮಠ ಎಂದು ಖ್ಯಾತಿ ಪಡೆದಿದೆ. ಪ್ರತಿ ಚುನಾವಣೆಯಲ್ಲಿ ಡಿಕೆಶಿ ಸಹೋದರರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯುವುದು ವಾಡಿಕೆ. ಅಲ್ಲದೇ ಬೆಂಗಳೂರಿನ ಸೆರಗಿನಲ್ಲಿರುವ ಮರಳೇಗವಿ ಮಠ ಬೆಂಗಳೂರಿನಲ್ಲಿ ನೆಲೆಸಿರುವ ಲಿಂಗಾಯತ ಸಮುದಾಯದಲ್ಲಿ ತನ್ನ ಪ್ರಭಾವವನ್ನು ಹೊಂದಿದೆ ಎನ್ನಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರು ಇಂದು ಮಠಕ್ಕೆ ಭೇಟಿ ನೀಡುವ ಮೂಲಕ ಚುನಾವಣೆಯ ಗೆಲುವಿಗೆ ಗುರುಗಳ ಆಶೀರ್ವಾದ ಪಡೆದಿದ್ದಾರೆ.












Click it and Unblock the Notifications