ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಳೆಯೊಳಗೆ ವರದಿ ನೀಡುವಂತೆ ಡಿಸಿಎಂ ಅಶ್ವಥ್ ನಾರಾಯಣ ಸೂಚನೆ!

|
Google Oneindia Kannada News

ಬೆಂಗಳೂರು, ಫೆ. 21: ರಾಮನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲದ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿ ನಾಳೆ (ಫೆ.22) ಯೊಳಗೆ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಾ.ಸಿ.ಎನ್.‌ ಅಶ್ವಥ್ ನಾರಾಯಣ ಅವರು ಸೂಚಿಸಿದ್ದಾರೆ.

ರಾಮನಗರ ಜಿಲ್ಲೆಗೆ ನದಿ ಮೂಲಗಳಿಂದ ಕುಡಿಯುವ ನೀರಿನ ಪೂರೈಕೆಗಾಗಿ ಹಮ್ಮಿಕೊಂಡಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಬೆಂಗಳೂರಿನಲ್ಲಿ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆ ಎಷ್ಟು ಗ್ರಾಮಗಳಿಗೆ ಈಗಾಗಲೇ ಪೈಪುಗಳ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ, ಎಷ್ಟು ಗ್ರಾಮಗಳಿಗೆ ಇಲ್ಲ ಎಂಬುದರ ಕುರಿತು ಸಮಗ್ರ ವರದಿ ಕೇಳಿದ್ದಾರೆ.

ಒಟ್ಟಾರೆ ಮುಂದಿನ ಐವತ್ತು ವರ್ಷಗಳ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಿ ವರದಿ ನೀಡುವಂತೆ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ

ಬಹುಗ್ರಾಮ ಕುಡಿಯುವ ನೀರಿನ ಯೋಜನೆ

ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯರಾಮ್‌, ಗ್ರಾಮೀಣ ನೀರು ಸರಬರಾಜು ಇಲಾಖೆಯ ಮುಖ್ಯ ಎಂಜಿನಿಯರ್‌ ಒಳಿಯಾಚೆ, ಮುಖ್ಯ ಎಂಜಿನಿಯರ್ ಮಹೇಶ ಮುಂತಾದ ಉನ್ನತ ಅಧಿಕಾರಿಗಳ ಜತೆ ಮಹತ್ವದ ಚರ್ಚೆ ನಡೆಸಿದ ಉಪ ಮುಖ್ಯಮಂತ್ರಿ; ಜಿಲ್ಲೆಯಲ್ಲಿ ನದಿ ಮೂಲಗಳಿಂದ ನೀರು ತಂದು ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಪ್ರತಿ ಗ್ರಾಮಕ್ಕೆ ಕುಡಿಯುವ ನೀರು

ಪ್ರತಿ ಗ್ರಾಮಕ್ಕೆ ಕುಡಿಯುವ ನೀರು

1,800 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ ಪ್ರತಿ ಗ್ರಾಮಕ್ಕೂ ಕುಡಿಯುವ ನೀರೊದಿಗಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಎಲ್ಲ ತಾಲ್ಲೂಕುಗಳಿಗೂ ನೀರು ಲಭ್ಯವಾಗಲಿದೆ. ಈಗಾಗಲೇ ಕಾವೇರಿ ನದಿಯಿಂದ ನೀರು ತರುವ ಯೋಜನೆಯು ಪ್ರಗತಿಯಲ್ಲಿದೆ. ಅದೇ ರೀತಿ ಎತ್ತಿಹೊಳೆ ಯೋಜನೆಯಿಂದಲೂ ನಮಗೆ ನೀರು ಲಭ್ಯವಾಗಲಿದೆ. ಆ ಯೋಜನೆಗಳು ಮುಗಿಯುವ ಹೊತ್ತಿಗೆ ಜಿಲ್ಲೆಯಲ್ಲಿ ಪ್ರತಿಹಳ್ಳಿಗೂ ನೀರು ಸರಬರಾಜು ಮಾಡುವ ಪೈಪ್‌ಲೇನ್ ಜಾಲವನ್ನು ರೂಪಿಸಿರಬೇಕು. ಹೀಗಾಗಿ ಎಲ್ಲ ಕಾಮಗಾರಿಗಳನ್ನು ವೇಗಗತಿಯಲ್ಲಿ ಮುಗಿಸಬೇಕು. ಭೂ ಸ್ವಾಧೀನ, ಪರಿಹಾರ ನೀಡಿಕೆ ಕೆಲಸಗಳು ಬಾಕಿ ಇದ್ದರೆ ಶೀಘ್ರವೇ ಮುಗಿಸಬೇಕು ಎಂದು ತಾಕೀತು ಮಾಡಿದರು.

ಮಾಗಡಿ ಕ್ಷೇತ್ರಕ್ಕೆ 0.21 ಟಿಎಂಸಿ

ಮಾಗಡಿ ಕ್ಷೇತ್ರಕ್ಕೆ 0.21 ಟಿಎಂಸಿ

ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಮಾಗಡಿ ವಿಧಾನಸಭೆ ಕ್ಷೇತ್ರಕ್ಕೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಮೂಲಕ ನೀರೊದಿಗಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಆ ಬಗ್ಗೆಯೂ ಉಪ ಮುಖ್ಯಮಂತ್ರಿ ಉನ್ನತ ಅಧಿಕಾರಿಗಳು ಹಾಗೂ ಕ್ಷೇತ್ರದ ಶಾಸಕ ಮಂಜುನಾಥ್‌ ಅವರೊಂದಿಗೆ ಚರ್ಚೆ ನಡೆಸಿದರು.

ಭವಿಷ್ಯ ಗಮನದಲ್ಲಿಟ್ಟು ಯೋಜನೆ

ಭವಿಷ್ಯ ಗಮನದಲ್ಲಿಟ್ಟು ಯೋಜನೆ

2011ರ ಜನಗಣತಿ ಪ್ರಕಾರ ಮಾಗಡಿ ತಾಲ್ಲೂಕಿನಲ್ಲಿ 1.75 ಲಕ್ಷ ಜನಸಂಖ್ಯೆ ಇತ್ತು. ಈಗ 2 ಲಕ್ಷ ದಾಟಿರುವ ಸಾಧ್ಯತೆ ಇದೆ. 2055ಕ್ಕೆ ಎಷ್ಟು ಜನಸಂಖ್ಯೆ ಆಗುತ್ತದೋ ಅಷ್ಟನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ನೀರಾವರಿ ಯೋಜನೆಯನ್ನು ರೂಪಿಸಬೇಕು. ತಾಲ್ಲೂಕಿಗೆ ಮಂಚನಬೆಲೆ ಜಲಾಶಯದಿಂದ 0.91 ಟಿಎಂಸಿ, ವೈ.ಜಿ.ಗುಡ್ಡದಿಂದ 0.02 ಟಿಎಂಸಿ ನೀರು ಲಭ್ಯವಾಗಲಿದೆ. ಒಟ್ಟು 81 ಗ್ರಾಮಗಳಿಗೆ 0.21 ಟಿಎಂಸಿ ನೀರು ಸರಬರಾಜು ಮಾಡುವ ಯೋಜನೆ ಇದಾಗಿದೆ. ಯಾವ ಕಾರಣಕ್ಕೂ ಕಾಮಗಾರಿಗಳು ತಡವಾಗಬಾರದು. ಯಾವುದೇ ಸಮಸ್ಯೆ ಎದುರಾದರೂ ನನ್ನ ಗಮನಕ್ಕೆ ತನ್ನಿ ಎಂದು ಉಪ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

English summary
Rs. 1,800 crore Scheme for Providing 0.21 TMC Drinking Water to All Villages in the Ramanagar District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X