ನಮ್ಮ ಕ್ಷೇತ್ರಕ್ಕೆ ಗೃಹ ಸಚಿವರು ಬಂದಿದ್ದರು: ವಿಜಯೇಂದ್ರ ಪಟ್ಟಾಭಿಷೇಕಕ್ಕೆ ಗೈರಾದ ಬಗ್ಗೆ ಎಸ್.ಟಿ ಸೋಮಶೇಖರ್ ಸ್ಪಷ್ಟನೆ
ರಾಮನಗರ, ನವೆಂಬರ್ 15: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಆಯ್ಕೆಯಾಗಿದ್ದು, ಇಂದು ಪದಗ್ರಹಣ ನೆರವೇರಿದದೆ. ಬಿ.ವೈ ವಿಜಯೇಂದ್ರ ಪಟ್ಟಾಭಿಷೇಕಕ್ಕೆ ಬಿಜೆಪಿ ಪ್ರಮುಖ ಮುಖಂಡರು ಗೈರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಎಸ್.ಟಿ.ಸೋಮಶೇಖರ್ ತಾವು ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಕುಂಬಳಗೂಡು ಪೊಲೀಸ್ ಠಾಣೆ ಉದ್ಘಾಟನೆಗೆ ಮೊದಲೇ ಪ್ಲ್ಯಾನ್ ಆಗಿತ್ತು. ಹೀಗಾಗಿ ವಿಜೆಯೇಂದ್ರ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಮೊದಲು ನವೆಂಬರ್16 ರಂದು ಪೊಲೀಸ್ ಠಾಣೆ ಉದ್ಘಾಟನೆ ಎಂದಿದ್ದರು. ಬಳಿಕ ನವೆಂಬರ್ 15ಕ್ಕೆ ಕಾರ್ಯಕ್ರಮ ಎಂದು ಗೃಹಸಚಿವರು ತಿಳಿಸಿದ್ದರು. ಹೀಗಾಗಿ ವಿಜೇಯೆಂದ್ರ ಅವರ ಕಾರ್ಯಕ್ರಮಕ್ಕೆ ಹೋಗಿಲ್ಲ ಎಂದರು.

ನಮ್ಮ ಕ್ಷೇತ್ರಕ್ಕೆ ಇಂದು ಗೃಹ ಸಚಿವರು ಬರುತ್ತಿದ್ದಾರೆ, ಹೀಗಾಗಿ ಇಲ್ಲಿದ್ದೇನೆ. ಸಚಿವರ ಕಾರ್ಯಕ್ರಮ ಮುಗಿದ ಬಳಿಕ ನಾನು ಪಕ್ಷದ ಕಾರ್ಯಕ್ರಮಕ್ಕೆ ಹೋಗುತ್ತೇನೆ. ನಾನು ಬಿಜೆಪಿಯಿಂದ ದೂರ ಉಳಿಯುತ್ತಿಲ್ಲ. ನನ್ನ ಕ್ಷೇತ್ರದ ಕೆಲಸ ಮಾಡುತ್ತೇನೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜೇಯೆಂದ್ರ ಆಯ್ಕೆ ಸರಿಯಾಗಿದೆ. ಇಂದಿನ ಪರಿಸ್ಥಿತಿಗೆ ಅವರ ಆಯ್ಕೆ ನೂರಕ್ಕೆ ನೂರರಷ್ಟು ಸರಿ ಇದೆ ಎಂದರು.
ಈ ಹಿಂದೆ ವಿಜೆಯೆಂದ್ರ ಅವರು ರಾಜ್ಯ ಉಪಾಧ್ಯಕ್ಷರಾಗಿದ್ದರು. ಅವರಿಗೆ ಅನುಭವ ಇದೆ. ಎಲ್ಲ ಜಿಲ್ಲೆಯ ನಾಯಕರ ಅವರಿಗೆ ಪರಿಚಯ ಇದೆ. ಹೀಗಾಗಿ ಮುಂದಿನ ಚುನಾವಣೆಗೆ ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.

ನೂತನ ಅಧ್ಯಕ್ಷರಾದ ಬಿವೈ ವಿಜಯೇಂದ್ರರ ಪದಗ್ರಹಣ ಕಾರ್ಯಕ್ರಮಕ್ಕೆ ಹಿರಿಯ ಬಿಜೆಪಿ ನಾಯಕರಾದ ಆರ್. ಅಶೋಕ್, ಅಶ್ವಥ್ ನಾರಾಯಣ, ಸಿಟಿ ರವಿ, ವಿ. ಸೋಮಣ್ಣ, ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಲಿಂಬಾಳಿ, ಎಸ್‌ಟಿ ಸೋಮಶೇಖರ್, ಡಾ.ಕೆ. ಸುಧಾಕರ್ ಮುಂತಾದ ಹಿರಿಯ ನಾಯಕರು ಗೈರಾಗಿದ್ದಾರೆ.












Click it and Unblock the Notifications