• search
 • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋವಿಡ್ 2ನೇ ಅಲೆ; ರಾಮನಗರ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ

By ರಾಮನಗರ ಪ್ರತಿನಿಧಿ
|

ರಾಮನಗರ, ಮಾರ್ಚ್ 29: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಸೆಕ್ಷನ್ 144 ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮುಂದಿನ ಆದೇಶದವರೆಗೆ Disaster Management act 2005 ಹಾಗೂ ಸಿ. ಆರ್. ಪಿ. ಸಿ. ಸೆಕ್ಷನ್ 144ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಬಂಧನೆ ಹಾಗೂ ನಿಷೇಧಾಜ್ಞೆಯನ್ನು ಜಾರಿಗೂಳಿಸಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ. ಆದೇಶ ಹೊರಡಿಸಿದ್ದಾರೆ.

ಕೋವಿಡ್ 19: ಯಾವ ರಾಜ್ಯಗಳಲ್ಲಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಕೋವಿಡ್ 19: ಯಾವ ರಾಜ್ಯಗಳಲ್ಲಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಷಬ್-ಎ-ಬರತ್, ಗುಡ್‌ ಫ್ರೈಡೇ ಇತ್ಯಾದಿ ಹಬ್ಬಗಳ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು ಸಾರ್ವಜನಿಕ ಮೈದಾನ / ಸಾರ್ವಜನಿಕ ಉದ್ಯಾನ ವನಗಳಲ್ಲಿ ಮಾರುಕಟ್ಟೆಗಳಲ್ಲಿ ಧಾರ್ಮಿಕ ಸ್ಥಳಗಳು ಸೇರಿದಂತೆ ಇತ್ಯದಿ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ಆಚರಿಸುವುದನ್ನು ಮತ್ತು ಆಯೋಜಿಸುವುದನ್ನು ನಿಷೇಧಿಸಿದೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಪ್ರಕರಣಗಳು ಪತ್ತೆ ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಪ್ರಕರಣಗಳು ಪತ್ತೆ

ಧಾರ್ಮಿಕ ಉತ್ಸವಗಳೊಂದಿಗೆ ಜಾತ್ರೆಗಳು, ಮೇಳಗಳನ್ನು ನಿಷೇಧಿಸಿದೆ ಮತ್ತು ಎಲ್ಲಾ ರಿತೀಯ ಧಾರ್ಮಿಕ ಕಾರ್ಯಕ್ರಮಗಳನ್ನು ಸಾಮೂಹಿಕವಾಗಿ ಗುಂಪು ಸೇರದೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೇಂದ್ರ ಹಾಗೂ ರಾಜ್ಯ ಮತ್ತು ಜಿಲ್ಲಾಡಳಿತ ವತಿಯಿಂದ ಕೋವಿಡ್-19 ತಡೆಗಟ್ಟುವ ಸಂಬಂಧ ಹೊರಡಿಸಿರುವ ನಿಯಮ ಮತ್ತು ನಿಬಂಧನೆಗೆ ಒಳಪಟ್ಟು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸಾಂಕೇತಿಕವಾಗಿ ಆಚರಣೆ ಮಾಡಲು ಸೂಚಸಲಾಗಿದೆ.

ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ; ಮಕ್ಕಳಲ್ಲಿ ಹೆಚ್ಚು ಪ್ರಕರಣ ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ; ಮಕ್ಕಳಲ್ಲಿ ಹೆಚ್ಚು ಪ್ರಕರಣ

ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು ಉಲ್ಲಂಘಿಸಿದಲ್ಲಿ ಸರ್ಕಾರದ ಆದೇಶ ಸಂಖ್ಯೆ HFW 146 CGM 2020, ದಿನಾಂಕ 24/03/2021ರ ಆದೇಶದಲ್ಲಿ ಸೂಚಿಸಿರುವಂತೆ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದೆ.

   ಎಲ್ಲೆಲ್ಲೂ GO BACK MODI ಘೋಷಣೆ! | Oneindia Kannada

   ಯಾವುದೇ ವ್ಯಕ್ತಿಯು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60 ರ ಜೊತೆಗೆ ಭಾರತೀಯ ದಂಡ ಸಂಹಿತೆಯ ಕಲಂ 188 ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ರಾಮನಗರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

   English summary
   Ramanagara deputy commissioner Dr. K. Rakesh Kumar imposed section 144 to control second Covid 19 wave.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X