ರಾಮನಗರ ಜಿಲ್ಲೆಯಲ್ಲಿ ಶಕ್ತಿ ಯೋಜನೆ ಸೌಲಭ್ಯ ಪಡೆಯಲಿರುವ ಮಹಿಳೆಯರ ಸಂಖ್ಯೆ ಇಷ್ಟಿದೆ, ಇಲ್ಲಿದೆ ವಿವರ
ರಾಮನಗರ, ಜೂನ್, 11: ಇಂದು ಬಹುನಿರೀಕ್ಷಿತ ಶಕ್ತಿ ಯೋಜನೆ ಚಾಲನೆಗೆ ರೇಷ್ಮೆನಾಡು ರಾಮನಗರ ಜಿಲ್ಲೆಯ ಸಾರಿಗೆ ಇಲಾಖೆ ಸಜ್ಜಾಗಿದ್ದು, ಜಿಲ್ಲೆ ವ್ಯಾಪ್ತಿಯ ಎಲ್ಲಾ ಘಟಕಗಳಲಗಲೂ ಏಕಕಾಲಕ್ಕೆ ಯೋಜನೆಗೆ ಜಾಲನೆ ದೊರೆಯಲಿದೆ. ಸುಮಾರು 65 ಸಾವಿರ ಮಹಿಳಾ ಪ್ರಯಾಣಿಕರು ಇದರ ಸದುಪಯೋಗ ಪಡೆಯಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಮನಗರದ ಜಿಲ್ಲಾ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರ ಮಹಿಳೆಯರ ಉಚಿತ ಪ್ರಯಾಣದ "ಶಕ್ತಿ " ಯೋಜನೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಪ್ರಧಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಜಾಲನೆ ನೀಡುವ ವೇಳೆ ಜಿಲ್ಲೆಯಲ್ಲೂ ಈ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

ಜಿಲ್ಲೆಯ ವ್ಯಾಪ್ತಿಯ 6 ಸಾರಿಗೆ ಘಟಕಗಳಲ್ಲಿ ಮಹಿಳಾ ಉಚಿತ ಪ್ರಯಾಣದ "ಶಕ್ತಿ" ಯೋಜನೆಗೆ ಜಾಲನೆ ನೀಡಲಿದ್ದು. ಜಿಲ್ಲೆಯ ಒಟ್ಟು 6 ವಿಭಾಗಗಳಿಂದ ಒಟ್ಟು 429 ಬಸ್‌ಗಳ ಸಂಚಾರ ಮಾಡುತ್ತಿವೆ. ಜಿಲ್ಲೆಯಲ್ಲಿ ಪ್ರತಿದಿನ 1ಲಕ್ಷದ 34 ಸಾವಿರ ಪ್ರಯಾಣಿಕರು ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡುತ್ತಿದ್ದು, ಅದರಲ್ಲಿ ಸುಮಾರು 65 ಸಾವಿರ ಮಹಿಳೆಯರು ನಿತ್ಯ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಎಂದು KSRTC ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಮಾಹಿತಿ ನೀಡಿದರು.
ಇಂದಿನಿಂದ ಸರ್ಕಾರ ಜಾರಿಗೆ ತರುತ್ತಿರುವ ಮಹಿಳೆಯರ ಉಚಿತ ಪ್ರಯಾಣದ "ಶಕ್ತಿ" ಯೋಜನೆಯ ಸೌಲಭ್ಯವನ್ನು ಜಿಲ್ಲೆಯ 65 ಸಾವಿರ ಮಹಿಳೆ ಪ್ರಯಾಣಿಕರು ಪಡೆಯಲಿದ್ದಾರೆ. ಅಲ್ಲದೇ ಮಹಿಳಾ ಪ್ರಯಾಣಿಕರಂತೆ ಶಾಲಾ, ಕಾಲೇಜುಗಳಿಗೆ ತೆರಳುವ ಹೆಣ್ಣು ಮಕ್ಕಳಿಗೂ ಕೂಡ ಒದಿ ಅನುಕೊಲ ಆಗುತ್ತದೆ ಕೆಎಸ್ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಮಾಧ್ಯಮಗಳೊಂದಿಗೆ ಅಭಿಪ್ರಾಯ ಹಂಚಿಕೊಂಡರು.
ರಾಮನಗರ ಸಾರಿಗೆ ಇಲಾಖೆ ವ್ಯಾಪ್ತಿಯ ರಾಮನಗರ ಸಾರಿಗೆ ಘಟಕ, ಚನ್ನಪಟ್ಟಣ ಸಾರಿಗೆ ಘಟಕ, ಮಾಗಡಿ ಸಾರಿಗೆ ಘಟಕ, ಕನಕಪುರ ಸಾರಿಗೆ ಘಟಕ, ಆರೋಹಳ್ಳಿ ಸಾರಿಗೆ ಘಟಕ, ಹಾಗೂ ಆನೇಕಲ್ ಸಾರಿಗೆ ಘಟಕಗಳಲ್ಲಿ "ಶಕ್ತಿ" ಯೋಜನೆಗೆ ಚಾಲನೆ ದೊರೆಯಲಿದೆ ಎಂದು ತಿಳಿದುಬಂದಿದೆ.
ಶಕ್ತಿ ಯೋಜನೆಗೆ ಚಾಲನೆ ನೀಡಲಿರುವ ಸಿಎಂ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಐತಿಹಾಸಿಕ ಗೆಲುವಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿರುವ ಗ್ಯಾರಂಟಿ ಘೋಷಣೆ ಶಕ್ತಿ ಯೋಜನೆಗೆ ಇಂದು (ಭಾನುವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಶಕ್ತಿ ಯೋಜನೆಗೆ ಭಾನುವಾರ ಬೆಳಿಗ್ಗೆ 11ಕ್ಕೆ ವಿಧಾನಸೌಧದ ಪೂರ್ವದ್ವಾರದ ಮುಭಾಗ ಸಿಎಂ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿಸಲಿದ್ದು, ಮಧ್ಯಾಹ್ನ 1 ರಿಂದಲೇ ರಾಜ್ಯದ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಸಂಚರಿಸುವ ಅವಕಾಶವನ್ನ ಕಲ್ಪಿಸಲಾಗಿದೆ.
ಇನ್ನೂ ಕಾರ್ಯಕ್ರಮದಲ್ಲಿ ಬಿಎಂಟಿಸಿಯ ಎರಡು ಬಸ್‌ಗಳಿಗೆ ಚಾಲನೆ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಕೇತಿಕವಾಗಿ ಆಯ್ದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ. ಉಚಿತ ಪ್ರಯಾಣ- ನಮ್ಮ ಪ್ರಮಾಣ ಎಂದು ರಾಜ್ಯ ಸರಕಾರ ಈ ಯೋಜನೆಯನ್ನು ಬಣ್ಣಿಸಿಕೊಂಡಿದ್ದು, ರಾಜ್ಯದ ಹಳ್ಳಿ ಹಳ್ಳಿಯ ಪ್ರತೀ ಮನೆಯ ಮಹಿಳೆಗೂ ಈ ಯೋಜನೆ ತಲುಪಲು, ಯೋಜನೆ ಜಾರಿಯನ್ನು ಹಬ್ಬದಂತೆ ಆಚರಿಸಲು ನಿರ್ಧರಿಸಲಾಗಿದೆ.
ಉಚಿತ ಬಸ್ ಪ್ರಯಾಣದ ವೇಳೆ ಮಹಿಳೆಯರು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಅಥವಾ ಇನ್ನಿತರೆ ಸೂಕ್ತ ದಾಖಲೆಗಳನ್ನು ತೋರಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಇನ್ನೂ ಶಕ್ತಿ ಯೋಜನೆಗೆ ಚಾಲನೆ ವೇಳೆ ಡಿಸಿಎಂ ಡಿಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತ ಮತ್ತಿತರರು ರಾಜಕೀಯ ಗಣ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಲಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications