ಮಾಜಿ ಸಿಎಂ HDK ಬೇಗ ಗುಣಮುಖರಾಗಲೆಂದು ಚನ್ನಪಟ್ಟಣದ ಆಂಜನೇಯನಿಗೆ 101 ಈಡುಗಾಯಿ ಹೊಡೆದ ಅಭಿಮಾನಿಗಳು
ರಾಮನಗರ, ಆಗಸ್ಟ್, 31: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಹಿನ್ನೆಲೆ ಅವರು ಬೇಗ ಗುಣಮುಖರಾಗಿ ಬರಲೆಂದು ಜೆಡಿಎಸ್ ಕಾರ್ಯಕರ್ತರು ಚನ್ನಪಟ್ಟಣದ ಪುರಾಣ ಪ್ರಸಿದ್ಧ ಕೆಂಗಲ್ ಶ್ರೀ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಎಚ್.ಡಿ.ಕುಮಾರಸ್ವಾಮಿ ಬೇಗ ಗುಣಮುಖರಾಗಲಿ ಎಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಆಂಜನೇಯನ ದೇವಾಲಯದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಎಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳು ತುಪ್ಪ ದಾನ ಮಾಡಿ, 101 ತೆಂಗಿನ ಕಾಯಿಗಳನ್ನು ಹೊಡೆದು ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರಿನಲ್ಲಿ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಿದರು.

ಜೆಡಿಎಸ್ ಮುಖಂಡ ಗೋವಿಂದಹಳ್ಳಿ ನಾಗರಾಜ್ ನೇತೃತ್ವದಲ್ಲಿ ಚನ್ನಪಟ್ಟಣದ ನೂರಾರು ಜೆಡಿಎಸ್ ಕಾರ್ಯಕರ್ತರು ಆಂಜನೇಯನಿಗೆ ಪೂಜೆ ಸಲ್ಲಿಸಿ ಕುಮಾರಣ್ಣ ಆದಷ್ಯ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥನೆ ಮಾಡಿದರು. ಈ ವಿಶೇಷ ಪೂಜೆಯಲ್ಲಿ ಬಿಜೆಪಿ ಮುಖಂಡ ವಿ.ಬಿ.ಚಂದ್ರು ಕೂಡ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.
ಉರುಳು ಸೇವೆ ಮಾಡಿದ ಎಚ್.ಡಿ.ಕೆ ಅಭಿಮಾನಿಗಳು
ಮತ್ತೊಂದೆಡೆ ರಾಮನಗರದ ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲೂ ಕೂಡ ಜೆಡಿಎಸ್ ಮುಖಂಡರು ಹಾಗೂ ಎಚ್.ಡಿ.ಕೆ ಅಭಿಮಾನಿಗಳು ಉರುಳು ಸೇವೆ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿ ಗಮನ ಸೆಳೆದಿದ್ದಾರೆ.












Click it and Unblock the Notifications