ಎಸ್ಆರ್ಎಸ್ ಟ್ರಾವೆಲ್ಸ್ ಮಾಲೀಕ ರಾಜಶೇಖರ್ ಕೊರೊನಾಗೆ ಬಲಿ
ರಾಮನಗರ, ಮೇ 22: ದೇಶದ ಸಾರಿಗೆ ಉದ್ಯಮಕ್ಕೆ ಅಪಾರ ಕೊಡುಗೆ ನೀಡಿದ್ದ ಎಸ್ಆರ್ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೆ.ಟಿ ರಾಜಶೇಖರ್ (78) ಶುಕ್ರವಾರ ನಿಧನರಾದರು.
ರಾಮನಗರ ಜಿಲ್ಲೆ ಮಾಗಡಿ ಮೂಲದ ಕೆ.ಟಿ ರಾಜಶೇಖರ್, 1943ರ ಸೆ.17ರಂದು ಜನಿಸಿದ್ದರು. ಡಿಪ್ಲೊಮಾ ಇನ್ ಆಟೋಮೊಬೈಲ್ ವ್ಯಾಸಂಗ ಮಾಡಿದ ಅವರು, ಹಲವು ಉದ್ಯೋಗದ ನಂತರ ದೇಶದ ಪ್ರಮುಖ ಸಾರಿಗೆ ಸಂಸ್ಥೆಗಳಲ್ಲಿ ಒಂದಾಗಿರುವ ಎಸ್ಎಆರ್ಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆಯನ್ನು 1971ರಲ್ಲಿ ಸ್ಥಾಪಿಸಿದರು.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕೆ.ಟಿ.ರಾಜಶೇಖರ್ ಇಳಿವಯಸ್ಸಿನಲ್ಲೂ ಚಟುವಟಿಕೆಯಿಂದ ಇರುತ್ತಿದ್ದರು. ಕಳೆದ 10 ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಶುಕ್ರವಾರ (ಮೇ 21) ಬೆಳಿಗ್ಗೆ ಮೃತರಾದರು.

ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿದ್ದ ಕೆ.ಟಿ ರಾಜಶೇಖರ್, ಆರಂಭದಲ್ಲಿ ಟೂರಿಸ್ಟ್ ಬುಕ್ಕಿಂಗ್ ಏಜೆಂಟ್, ಟ್ರಾವೆಲ್ ಏಜೆಂಟ್ ಹೀಗೆ ಹಲವು ರೀತಿಯ ಕೆಲಸಗಳನ್ನು ಮಾಡಿದ್ದರು.
ಕೇವಲ ಒಂದು ಬಸ್ ಮೂಲಕ ಆರಂಭಿಸಿದ್ದ ಎಸ್ಎಆರ್ಸ್ ಸಂಸ್ಥೆ ಇದೀಗ 3 ಸಾವಿರಕ್ಕೂ ಹೆಚ್ಚಿನ ಬಸ್ಗಳನ್ನು ಹೊಂದಿದೆ. ನಾಲ್ಕು ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿ, ನೂರಾರು ಕೋಟಿ ರೂಪಾಯಿಗೂ ಅಧಿಕ ವಹಿವಾಟು ನಡೆಸುತ್ತಿದೆ.
ಬೆಂಗಳೂರು ಎಸ್ಎಆರ್ಸ್ನ ಕೇಂದ್ರ ಕಚೇರಿಯಾಗಿದ್ದರೂ ತಮಿಳುನಾಡಿನ ಚೆನ್ನೈ, ಮಹಾರಾಷ್ಟ್ರದ ಮುಂಬೈ, ಆಂಧ್ರಪ್ರದೇಶದ ವಿಜಯವಾಡ ಸೇರಿ ದೇಶದ ಇನ್ನಿತರ ನಗರಗಳಲ್ಲಿ ಶಾಖೆಗಳನ್ನು ಹೊಂದಿದೆ. ಇದೀಗ ಎಸ್ಎಆರ್ಎಸ್ ಸಂಸ್ಥೆ 50ನೇ ವರ್ಷಕ್ಕೆ ಕಾಲಿಟ್ಟಿದ್ದು ಇದೇ ವೇಳೆ ತನ್ನ ಮಾಲೀಕನನ್ನು ಕಳೆದುಕೊಂಡಿದೆ.
Recommended Video
ಕೆ.ಟಿ.ರಾಜಶೇಖರ್ ಮಗಳು ಮೇಘ ಮತ್ತು ಅಳಿಯ ದೀಪಕ್ ಅವರನ್ನು ಅಗಲಿದ್ದಾರೆ. ಎಸ್ಆರ್ಎಸ್ ಟ್ರಾವೆಲ್ಸ್ ಸಂಸ್ಥೆ ಮುನ್ನಡೆಸಲು ಮಗಳು ಮತ್ತು ಅಳಿಯ, ರಾಜಶೇಖರ್ ಅವರಿಗೆ ನೆರವಾಗುತ್ತಿದ್ದರು. ಎಸ್ಎಆರ್ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆಗೆ ಹಲವು ಪ್ರಶಸ್ತಿಗಳು ಲಭಿಸಿದ್ದವು. ಇನ್ಫೋಸಿಸ್, ಅಪೋಲೋ, ಐಬಿಎಂ, ಡೆಲ್ ಸೇರಿ ಇನ್ನಿತರ ಸಂಸ್ಥೆಗಳು ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಎಸ್ಆರ್ಎಸ್ ಸಂಸ್ಥೆ ಭಾಜನವಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications