ಬಿಜೆಪಿ ಸರ್ಕಾರ ಭಾವನಾತ್ಮಕವಾಗಿ ಜನರ ದಾರಿ ತಪ್ಪಿಸುತ್ತಿದೆ: ಎಚ್.ಡಿ.ಕುಮಾರಸ್ವಾಮಿ
ಚನ್ನಪಟ್ಟಣ, ಮಾರ್ಚ್ 20: ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಅಭಿವೃದ್ಧಿ ಬೇಕಾಗಿಲ್ಲ, ಅಧಿಕಾರಕ್ಕಾಗಿ ಅಮಾಯಕ ಮಕ್ಕಳು ಮತ್ತು ನಾಗರೀಕರನ್ನು ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರದ ಬಗ್ಗೆ ಚನ್ನಪಟ್ಟಣದ ಕದರಮಂಗಲ ಗ್ರಾಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ.ಕುಮಾರಸ್ವಾಮಿಯವರು ಸರ್ಕಾರದ ಮುಂದೆ ಟನ್ ಗಟ್ಟಲೇ ಸಮಸ್ಯೆಗಳು ಇದ್ದಾವೆ, ಅವುಗಳನ್ನ ಸರಿಪಡಿಸಲಿ, ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತಾದ ಎಂದು ಪ್ರಶ್ನೆ ಮಾಡಿದರು.
ನಾನು ಬೆಳಗ್ಗೆ ಆರ್ಟ್ಸ್ ಅಂಡ್ ಕಲ್ಚರ್ ಎಂಬ ಬುಕ್ ಓದಿದೆ, ಅದು ಕಾರಿನಲ್ಲಿಯೇ ಇದೇ. ಅದರಲ್ಲಿ ಮೊದಲನೇಯ ಪ್ರಶ್ನೆ ನಾನ್ಯಾರು, ಎಲ್ಲಿಂದ ಬಂದೆ ಅಂದರೆ ಅದಕ್ಕೆ ಉತ್ತರವಿಲ್ಲ
ಇರೋವರೆಗೂ ನಮ್ಮ ಹಣೆಬರಹ ಏನು, ಹೋದ್ಮೆಲೆ ಏನು ಗೊತ್ತಿಲ್ಲ, ಯಾರಿಗೂ ಯಾವುದೂ ಶಾಶ್ವತ ಅಲ್ಲ
ಈ ಭೂಮಿ ಹೇಗೆ ಉದ್ಭವ ಆಯ್ತು ಎಂದು ನಮಗೆ ನಿಮಗೆ ಗೊತ್ತ?
ಬಿಜೆಪಿಯ ರಾಜ್ಯ - ಕೇಂದ್ರ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಅರಿವಿಲ್ಲ, ಅದನ್ನ ಬಗೆಹರಿಸುವುದು ಅವರಿಗೆ ಬೇಕಿಲ್ಲ, ದೇಶದಲ್ಲಿ ಭಾವನಾತ್ಮಕವಾಗಿ ವಿಚಾರಗಳು ನಡೆಯುತ್ತಿವೆ. ಜನ ಸತ್ತರೇನು, ಹಸಿವಾದರೇನು, ಮಕ್ಕಳಿಗೆ ವಿದ್ಯಾಭ್ಯಾಸ ಇಲ್ಲದಿದ್ದರೇನು ಅದ್ಯಾವುದು ಚಿಂತೆ ಇಲ್ಲ. ಅಧಿಕಾರಕ್ಕಾಗಿ ಅಮಾಯಕರನ್ನ ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ದೇಶದಲ್ಲಿ ಇತ್ತೀಚಿಗೆ ಭಾವನಾತ್ಮಕ ವಿಚಾರಗಳು ದೊಡ್ಡದಾಗಿ ಪ್ರಚಾರ ಪಡೆಯುತ್ತಿವೆ. ಇದಕ್ಕೂ ಒಂದು ಅಂತಿಮ ಇರುತ್ತದೆ, ಯಾರಿಗೂ ಶಾಶ್ವತ ಅಲ್ಲ. ರಾಜ ಮಹಾರಾಜರ ಕಾಲದಿಂದಲೂ ನೋಡಿದ್ದೇವೆ, ಅವುಗಳು ಉಳಿದವಾ, ಎಲ್ಲವೂ ನಶಿಸಿಹೋಗಿವೆ. ಇದಕ್ಕೂ ಒಂದು ಅಂತ್ಯವಿದೆ ಕಾಯಬೇಕಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಪಾವಗಡ ಬಸ್ ದುರಂತ, ಶೀಘ್ರವಾಗಿ ಸರ್ಕಾರ ಸ್ಪಂದಿಸಬೇಕು
ಇವತ್ತು ರಾಜ್ಯದಲ್ಲಿ ಮೂರು ಕಡೆ ಅವಘಡ ನಡೆದಿವೆ. ತುಮಕೂರಿನ ಪಾವಗಡದಲ್ಲಿ ಬಸ್ ಅನಾಹುತವಾಗಿದೆ. ಆಕ್ಸಿಡೆಂಟ್‌ನಲ್ಲಿ ಎಂಟು ಮಂದಿ ಸಾವಿಗೀಡಾಗಿದ್ದಾರೆ. ಬಡ ಮಂದಿ ಬಸ್ ಅವಘಡದಲ್ಲಿ ಸಾವಿಗೀಡಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡು ಚಿಂತಾಜನಕವಾಗಿದ್ದಾರೆ. ಸರ್ಕಾರ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಕಳುಹಿಸಲು ಮಾಜಿ ಸಿಎಂ ಎಚ್ಡಿಕೆ ಒತ್ತಾಯಿಸಿದರು.
ಸಾರಿಗೆ ಸಚಿವರು ಹಾಗೂ ಸರ್ಕಾರ ಮಾಹಿತಿ ಪಡೆದು, ಪರಿಹಾರ ನೀಡುವ ಕಾರ್ಯವಾಗಬೇಕು. ಪಾವಗಡ ಅತ್ಯಂತ ಬರಗಾಲ ಇರುವ ತಾಲೂಕು, ಬಸ್ ಅವಘಡದಲ್ಲಿ ಕೂಲಿನಾಲಿ ಮಾಡುವ ಜನರಿದ್ದಾರೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ನೀಡಬೇಕಾದುದು ರಾಜ್ಯ ಸರ್ಕಾರದ ಕರ್ತವ್ಯ ದುರಂತದಲ್ಲಿ ವಿದ್ಯಾರ್ಥಿಗಳೇ ಸಾವಿಗೀಡಾಗಿದ್ದಾರೆ. ಬಸ್ ಅವಘಡದಲ್ಲಿ ಯಾರ ತಪ್ಪಿದೆ ಪರಿಶೀಲನೆ ನಡೆಯಬೇಕು ಎಂದು ಮಾಜಿ ಸಿಎಂ ಹೆಚ್ಡಿಕೆ ಸರ್ಕಾರವನ್ನು ಒತ್ತಾಯಿಸಿದರು.
ಸರ್ಕಾರದ ಸಾರಿಗೆ ವ್ಯವಸ್ಥೆ ಸರಿಯಿಲ್ಲ. ಸಾರಿಗೆ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ನಾನು 2006ರಲ್ಲಿ ಸಿಎಂ ಆಗಿದ್ದಾಗ ಸಾರಿಗೆ ಸಂಸ್ಥೆ ಲಾಭದಲ್ಲಿತ್ತು, ನಂತರದ ದಿನಗಳಲ್ಲಿ ಸಾರಿಗೆ ವ್ಯವಸ್ಥೆ ಹದಗೆಟ್ಟಿದೆ. ಕಳೆದ 10 ವರ್ಷಗಳಲ್ಲಿ ಏನೆಲ್ಲಾ ಅನಾಹುತವಾಗಿದೆ ಚರ್ಚೆ ಮಾಡಲು ಹೋಗಲ್ಲ.
ಕೋವಿಡ್ ಬಳಿಕ ಸಾರಿಗೆ ಇಲಾಖೆ ಕೆಟ್ಟ ಪರಿಸ್ಥಿತಿ ಎದುರಿಸುತ್ತಿದೆ. ಯಾರೋ ಪ್ರತಿಭಟನೆ ಮಾಡಿಸಿ ಸಾರಿಗೆ ನೌಕರರನ್ನ ಬೀದಿಪಾಲು ಮಾಡಿದರು. ಸಾರಿಗೆ ನೌಕರರು ಇದೀಗ ಕಣ್ಣೀರು ಹಾಕುತ್ತಿದ್ದಾರೆ. ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಶಿಕ್ಷೆ ಅನುಭವಿಸಬಾರದು ಎಂದು ಮಾಜಿ ಸಿಎಂ ಹೆಚ್ಡಿಕೆ ಸರ್ಕಾರಕ್ಕೆ ಸಲಹೆ ನೀಡಿದರು.
ಇನ್ನೂ ಉಡುಪಿ ಹಾಗೂ ಬಳ್ಳಾರಿಯಲ್ಲಿ ಆಕ್ಸಿಜನ್ ಪ್ಲ್ಯಾಂಟ್ ಅವಘಡವಾಗಿದೆ. ಅಲ್ಲಿ ಸ್ಥಳ ಪರಿಶೀಲನೆ ಮಾಡಿ ಅವಘಡ ನಡೆಯದಂತೆ ಎಚ್ಚರಿಕೆ ವಹಿಸಬೇಕಿದೆ ಈ ಅನಾಹುತದಲ್ಲಿ ನೊಂದವರಿಗೆ ನೆರವು ಸಿಗಬೇಕು ಎಂದು ಮಾಜಿ ಸಿಎಂ ಹೆಚ್ಡಿಕೆ ಒತ್ತಾಯಿಸಿದರು.
ಚನ್ನಪಟ್ಟಣ ಕ್ಷೇತ್ರದಲ್ಲಿ ಹೆಚ್ವಾಗಿರುವ ಆರೋಪ ಮತ್ತು ಪ್ರತ್ಯಾರೋಪಗಳಿಗೆ ವಿರಾಮ ನೀಡಿರುವುದಾಗಿ ಮಾಜಿ ಸಿಎಂ ಹೆಚ್ಡಿಕೆ ಘೋಷಣೆ ಮಾಡಿದರು ವಿಧಾನ ಪತಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಬಗ್ಗೆ ನಾನು ಚರ್ಚೆ ಮಾಡಲು ಹೋಗಲ್ಲ, ಅವರು ಏನು ಬೇಕಾದರೂ ಹೇಳಿಕೊಂಡು ಹೋಗಲಿ, ನಾನು ಅವರ ಬಗ್ಗೆ ಮಾತನಾಡಿ ನಾನ್ಯಾಕೆ ಅವರಿಗೆ ಪ್ರಚಾರ ನೀಡಲಿ, ಎಲ್ಲವನ್ನು ಗಮನಿಸುತ್ತಿರುವ ಕ್ಷೇತ್ರದ ಜನರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಮಾಗಡಿ ತಹಶೀಲ್ದಾರ್ ವರ್ಗಾವಣೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ನಡುವಿನ ಕಿತ್ತಾಟಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಎಚ್ಡಿಕೆ, ಇಂತಹ ವಿಚಾರಗಳಿಗೆ ಪ್ರಾಮುಖ್ಯತೆ ಕೊಟ್ಟು ಸಮಸ್ಯೆ ಇರುವಂತಹ ಕಡೆಗೆ ಯಾರು ಪ್ರಾಮುಖ್ಯತೆ ನೀಡದ ಪರಿಸ್ಥಿತಿ ಇಂದು ಕಾಣುತ್ತಿದ್ದೇವೆ. ಆದ್ದರಿಂದ ಮುಂದಿನ ದಿನಗಳಲ್ಲಿ ಜನ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.












Click it and Unblock the Notifications