ಸಾರಿಗೆ ನೌಕರರ ಮುಷ್ಕರ; ರಾಮನಗರದಲ್ಲಿ ಸರ್ಕಾರಿ ಬಸ್‌ಗೆ ಕಲ್ಲು

ರಾಮನಗರ, ಡಿಸೆಂಬರ್ 11 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಬಸ್ ಸಂಚಾರವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ.

ಶುಕ್ರವಾರ ಬೆಳಗ್ಗೆಯಿಂದ ನೌಕರರು ಮಷ್ಕರ ಆರಂಭಿಸಿದ್ದಾರೆ. ನೌಕರರ ಮುಷ್ಕರದ ನಡುವೆಯೇ ಕೆಲವು ಬಸ್ ಸಂಚಾರ ನಡೆಸುತ್ತಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ಗೆ ರಾಮನಗರದಲ್ಲಿ ಕಲ್ಲು ತೂರಲಾಗಿದೆ.

ಸಾರಿಗೆ ನೌಕರರ ಮುಷ್ಕರದ ನಡುವೆಯೂ ಬಸ್ ಸಂಚಾರ ನಡೆಸುತ್ತಿತ್ತು. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಮುದುಗೆರೆ ಗ್ರಾಮದಲ್ಲಿ ಮೈಸೂರಿನಿಂದ ಬರುತ್ತಿದ್ದ ಬಸ್‌ಗೆ ಕಲ್ಲು ತೂರಲಾಗಿದ್ದು, ಬಸ್ ಮುಂಭಾಗದ ಗಾಜು ಪುಡಿಯಾಗಿದೆ.

Stones Pelted For Mysuru Bengaluru KSRTC Bus

ಅಪರಿಚಿತರು ಬಸ್ಸಿಗೆ ಕಲ್ಲು ತೂರಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೈಸೂರು ಡಿಪೋದಿಂದ ಹೊರಟಿದ್ದ ಬಸ್ ಬೆಂಗಳೂರಿಗೆ ಬರುತ್ತಿತ್ತು.

ಸಾರಿಗೆ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ರಾಜ್ಯದ 4 ಸಾರಿಗೆ ಸಂಸ್ಥೆಗಳ ನೌಕರರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಇದರಿಂದಾಗಿ ವಿವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಬಸ್‌ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿದೆ. ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದಾಗಿದೆ.

ಸಚಿವರ ಹೇಳಿಕೆ; ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ನೌಕರರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಇಂದು ಮಧ್ಯಾಹ್ನ ಸಾರಿಗೆ ನಿಗಮಗಳ ಯೂನಿಯನ್ ಲೀಡರ್‌ಗಳ ಸಭೆ ಕರೆದಿದ್ದೇನೆ. ಬೇಡಿಕೆಗಳ ಬಗ್ಗೆ ಸಹಾನುಭೂತಿಯಿಂದ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸಿದ್ಧವಿದ್ದೇವೆ" ಎಂದು ಹೇಳಿದರು.

"ಕೋವಿಡ್ ನಂತಹ ಸಂಕಷ್ಟದ ಕಾಲದಲ್ಲಿಯೂ ನವೆಂಬತ್‌ ತನಕದ ವೇತನವನ್ನು ಬಾಕಿ ಉಳಿಸಿಕೊಳ್ಳದೇ ಪಾವತಿ ಮಾಡಲಾಗಿದೆ. ಗುರುವಾರವೇ ಯೂನಿಯನ್ ಲೀಡರ್‌ಗಳ ಸಭೆ ಕರೆಯಲಾಗಿತ್ತು. ಆದರೆ, ಅವರು ಬರಲಿಲ್ಲ" ಎಂದರು.

ಬೆಂಗಳೂರಿನ ಸರ್ಜಾಪುರ ಮುಖ್ಯರಸ್ತೆ ಬಳಿ 3 ಹಾಗೂ 4 BHK ಐಷಾರಾಮಿ ಅಪಾರ್ಟ್ಮೆಂಟ್. ಹೆಚ್ಚಿನ ವಿವರಗಳಿಗೆ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+