'ನಮ್ಗೆ ಬಸ್ ಬೇಕು ಸರ್... ಬಸ್ ಇಲ್ದೆ ಕಾಲೇಜಿಗೆ ಹೇಗೆ ಹೋಗೋದು' ರಾಮನಗರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ರಾಮನಗರ ಜನವರಿ 18: 'ನಮ್ಗೆ ಬಸ್ ಬೇಕು ಸರ್... ಬಸ್ ಇಲ್ದೆ ಕಾಲೇಜಿಗೆ ಹೇಗೆ ಹೋಗೋದು' ಎಂದು ರಾಮನಗರ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ರಾಮನಗರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಬೆಂಗಳೂರು ಕಡೆಗೆ ಹೋಗಲು ನಿತ್ಯ ಎರಡು ಗಂಟೆಗೂ ಹೆಚ್ಚು ಸಮಯ ವಿದ್ಯಾರ್ಥಿಗಳು ಕಾಯಬೇಕು. ಇಂದು ಬೆಳ್ಳಂಬೆಳಿಗ್ಗೆ ಕಾಲೇಜಿಗೆ ಹೋಗಬೇಕಾಗಿದ್ದ ವಿದ್ಯಾರ್ಥಿಗಳು ಬಸ್ ಇಲ್ದೆ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇದರಿಂದ ವಿದ್ಯಾರ್ಥಿಗಳು ಆಕ್ರೋಶಗೊಂಡು ಬಸ್ ವ್ಯವಸ್ಥೆಗೆ ಒತ್ತಾಯಿಸಿ ಪ್ರತಿಭಟನೆ ಮಾಡಿದ್ದಾರೆ. ಕಾಲೇಜಿಗೆ ತೆರಳಲು ಸಮರ್ಪಕವಾಗಿ ಬಸ್ ಇಲ್ಲದೆ ನಿತ್ಯ ವಿದ್ಯಾರ್ಥಿಗಳು ಅವರಿವರ ಬಳಿ ಡ್ರಾಪ್ ಕೇಳುವಂತ ಪರಿಸ್ಥಿತಿ ಇದೆ. ಹೀಗಾಗಿ ವಿದ್ಯಾರ್ಥಿಗಳು ಇಂದು ರಾಮನಗರ ಬಸ್ ನಿಲ್ದಾಣದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಿದರು.

ಈಗಾಲೇ ಬಸ್ ವ್ಯವಸ್ಥೆ ಸರಿಪಡಿಸುವಂತೆ ಹತ್ತಾರು ಬಾರಿ ಪ್ರತಿಭಟನೆ ನಡೆಸಿದ್ದರು ಎಚ್ಚರವಾಗದ ಸಾರಿಗೆ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದರು. ಜಿಲ್ಲಾ ಉಸ್ತುವಾರಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮಸ್ಯೆ ಬಗೆಹರಿಸುವ ಮಾತು ನೀಡಿ ತಿಂಗಳು ಕಳೆದರು ಪರಿಹಾರ ನೀಡಿಲ್ಲ. ಬಸ್ ಸಮಸ್ಯೆ ಇಂದಿಗೂ ಇದೆ ಎಂದು ವಿದ್ಯಾರ್ಥಿಗಳು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು.
ಇದರಿಂದಾಗಿ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಕೆಲವು ಬಸ್ ನಿರ್ವಾಹಕರು ವಿದ್ಯಾರ್ಥಿಗಳಿಗೆ ಬಸ್ ಹತ್ತಲು ಅವಕಾಶ ಕೊಡುವುದಿಲ್ಲ. ಇದರಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.

ಈ ವೇಳೆ ರಸ್ತೆ ತಡೆ ಮಾಡಿದ್ದಕ್ಕೆ ರಾಮನಗರ ಸಂಚಾರಿ ಠಾಣೆ ಪಿಎಸ್ಐ ಗರಂ ಆದರು. ನಿಮ್ಮ ಸಮಸ್ಯೆ ಬಗೆಹರಿಸೋಣ ಆದರೆ ರಸ್ತೆ ತಡೆ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಖಾಕಿ ಕಟ್ಟುನಿಟ್ಟು ಮಾಡಿತು. ಕೊನೆಗೆ ವಿದ್ಯಾರ್ಥಿಗಳು ಪಿಎಸ್ಐ ಮಾತಿಗೆ ಒಪ್ಪಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ











Click it and Unblock the Notifications