ಮಳೆ ಅನಾಹುತಗಳ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ರಾಮನಗರದ ಅಧಿಕಾರಿಗಳಿಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸೂಚನೆ

ರಾಮನಗರ, ಜುಲೈ, 29: ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವೆಡೆ ಅಪಾರ ಹಾನಿ ಸಂಭವಿಸುತ್ತಲೇ ಇವೆ. ಈ ಹಿನ್ನೆಲೆ ರಾಮನಗರ ಜಿಲ್ಲೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಳೆ ಅವಘಡಗಳನ್ನು ಪರಿಣಾಮಕಾರಿ ಎದುರಿಸಿಲು ಸಿದ್ಧತೆಗಳನ್ನು ಮಾಡಿಕೊಂಡು ಸನ್ನದ್ದರಾಗಿರಬೇಕು ಎಂದು ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ ಅವರು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ವಿಷಯಗಳು ಹಾಗೂ ಮಳೆ ಅವಾಂತರ ತಡೆಗಟ್ಟಲು ಕೈಗೊಳ್ಳಬೇಕಾದ ಸಿದ್ಧತೆಗಳ ಅವಲೋಕನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೆರೆ ವಿಪತ್ತು ನಿರ್ವಹಣೆಯಲ್ಲಿ ಯಾವುದೇ ಅಧಿಕಾರಿಗಳು ನಿರ್ಲಕ್ಷ್ವ ವಹಿಸದೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

Take precautionary measures to prevent rain disasters in Ramanagara

‌‌ನೆರೆ ಪೀಡಿತ ಪ್ರದೇಶಗಳಿಗೆ ಬೇಟಿ

ಜಿಲ್ಲೆಯಲ್ಲಿ ಈ ಹಿಂದೆ ಭಾರೀ ಮಳೆ ಹಾಗೂ ನೆರೆ ಹಾವಳಿಯಿಂದ ಬಹಳಷ್ಟು ತೊಂದರೆಯಾಗಿದ್ದ ಪ್ರದೇಶಗಳನ್ನು ಖುದ್ದು ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಅಧಿಕಾರಿಗಳಿಗೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಮಳೆ ಹೆಚ್ಚು ಬೀಳುವ ಪ್ರದೇಶಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲು ಸೂಚಿಸಿದರು.

ಸಭೆಗೂ ಮುನ್ನ ರಾಮನಗರದಲ್ಲಿ ಕಳೆದ ಸಾಲಿನಲ್ಲಿ ಪ್ರವಾಹ ಪೀಡಿತವಾದ ಭಕ್ಷೀಕೆರೆ ಮತ್ತು ಗೌಸಿಯಾ ನಗರ ಬಳಿ ಇರುವ ಕಾಲುವೆ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ತಗ್ಗು ಪ್ರದೇಶದ ಮನೆಗಳಿಗೆ ಎಚ್ಚರಿಕೆ ನೀಡಬೇಕು, ಚರಂಡಿ, ಚಾನಲ್‌ಗಳಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು. ಯಾವುದೇ ದುರಸ್ಥಿಯಿದ್ದಲ್ಲಿ ಪರಿಶೀಲಿಸಿ ಅಗತ್ಯ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡಾಟಾ ಎಂಟ್ರಿ ತಪ್ಪಾದರೆ ಕಾನೂನು ಕ್ರಮ

ಬೆಳೆ ನಷ್ಟ ಪರಿಹಾರಕ್ಕೆ ಇ-ಕೆವೈಸಿಯನ್ನು ಅಪ್‌ಲೋಡ್ ಮಾಡುವಾಗ ಡಾಟಾ ಎಂಟ್ರಿ ಆಪರೇಟರ್‌ಗಳು ತಪ್ಪಾಗಿ ನಮೂದಿಸಿದರೆ ಪರಿಹಾರ ಮೊತ್ತವು ಬೇರೆಯವರ ಖಾತೆಗೆ ಹೋಗುತ್ತದೆ. ಆದ್ದರಿಂದ ಡಾಟಾ ಎಂಟ್ರಿ ಆಪರೇಟರ್‌ಗಳು ಸರಿಯಾಗಿ ಇ-ಕೆವೈಸಿಗಳನ್ನು ಅಪ್‌ಲೋಡ್ ಮಾಡಬೇಕು. ತಪ್ಪಾದರೆ ತಹಶೀಲ್ದಾರರು ಹಾಗೂ ಡಾಟಾ ಎಂಟ್ರಿ ಆಪರೇಟರ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಂಚನಬೆಲೆ ಡ್ಯಾಂ ಸುತ್ತಮುತ್ತ ಹಾಗೂ ಅರ್ಕಾವತಿ ನದಿಯ ಪಾತ್ರಗಳಲ್ಲಿ ತೊಂದರೆಗೀಡಾಗುವ ಸನ್ನಿವೇಶ ಎದುರಾಗಬಹುದು. ಆದ್ದರಿಂದ ಇಲ್ಲಿನ ಜನರ ಸ್ಥಳಾಂತರಕ್ಕೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಅಸಾಧ್ಯ. ಯಾವುದೇ ಸಿದ್ದತೆ ಮಾಡಿಕೊಳ್ಳದೆ ನಿರ್ಲಕ್ಷ್ಯ ವಹಿಸುವಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+