ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಹಿಂಸೆ: ಖಡಕ್ ಎಚ್ಚರಿಕೆ ಕೊಟ್ಟ ನಿಖಿಲ್
ರಾಮನಗರ, ಡಿಸೆಂಬರ್ 07: ರಾಮನಗರ ಜಿಲ್ಲೆಯ ಚನ್ನಪಟ್ಟಣದ ಉಪ ಚುನಾವಣೆ ಬಳಿಕ ಕ್ಷೇತ್ರದಲ್ಲಿ ದ್ವೇಷದ ರಾಜಕೀಯ ಆರಂಭವಾಗಿದೆ. ನವೆಂಬರ್ 13ರಂದು ಉಪ ಚುನಾವಣೆ ನಡೆದು, ನವೆಂಬರ್ 23ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಿತ್ತು. ಕಾಂಗ್ರೆಸ್‌ನ ಸಿ. ಪಿ. ಯೋಗೇಶ್ವರ 25,413 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಚುನಾವಣೆ ಇಡೀ ರಾಜ್ಯದಲ್ಲಿ ಕುತೂಹಲಕ್ಕೆ ಕಾರಣವಾಗಿತ್ತು. ಉಪ ಚುನಾವಣೆ ಸೋಲುವ ಮೂಲಕ ರಾಮನಗರ ಜಿಲ್ಲೆ ಜೆಡಿಎಸ್ ಮುಕ್ತವಾಗಿತ್ತು.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 87,229 ಮತಗಳನ್ನು ಪಡೆದು ಸಿ. ಪಿ. ಯೋಗೇಶ್ವರ ವಿರುದ್ಧ ಸೋಲು ಕಂಡಿದ್ದರು. ಈ ಸೋಲಿನಿಂದಾಗಿ ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ತೀವ್ರ ಹಿನ್ನಡೆ ಆಗಿತ್ತು.

ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶನಿವಾರ ಫೇಸ್ ಬುಕ್ ಪೋಸ್ಟ್ ಒಂದನ್ನು ಹಾಕಿದ್ದಾರೆ. ಉಪ ಚುನಾವಣೆ ಬಳಿಕ ಚನ್ನಪಟ್ಟಣದಲ್ಲಿ ದ್ವೇಷ ರಾಜಕಾರಣ ನಡೆಯುತ್ತಿದೆ ಎಂದು ಹೇಳಿದ್ದು, ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.
ಫೇಸ್‌ಬುಕ್ ಪೋಸ್ಟ್‌ನಲ್ಲಿ ಅವರು, 'ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ' ಎಂದು ಹೇಳಿದ್ದಾರೆ.
'ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ ಪಕ್ಷಗಳ ಕಾರ್ಯಕರ್ತರು, ಮುಖಂಡರಿಗೆ ಕಿರುಕುಳ ನೀಡುವುದು ಅಕ್ಷಮ್ಯ. ಪ್ರಜಾಪ್ರಭುತ್ವದಲ್ಲಿ ಇಂಥ ನಡೆ ಒಳ್ಳೆಯದಲ್ಲ, ಅದನ್ನು ಸಹಿಸುವ ಪ್ರಶ್ನೆಯೂ ಇಲ್ಲ' ಎಂದು ನಿಖಿಲ್ ತಿಳಿಸಿದ್ದಾರೆ.
'ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡು ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಕೈಕಟ್ಟಿ ಕೂರುವ ಜಾಯಮಾನ ನಮ್ಮದಲ್ಲ. ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ, ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುವ ಯಾವುದೇ ಇಲಾಖೆಯ ಅಧಿಕಾರಿಗಳು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ' ಎಂದು ಎಚ್ಚರಿಸಿದ್ದಾರೆ.
'ಕಾಂಗ್ರೆಸ್ ಪಕ್ಷದ ಈ ಹೊಸ ಶಾಸಕ ಕ್ಷೇತ್ರದ ಕೆಲಸ ಮಾಡಬೇಕು, ಕೊಟ್ಟ ಭರವಸೆಗಳನ್ನು ಮೊದಲು ಈಡೇರಿಸಬೇಕು. ಅದು ಬಿಟ್ಟು ಜೆಡಿಎಸ್ ಕಾರ್ಯಕರ್ತರನ್ನು ಮುಗಿಸುತ್ತೇನೆ, ದಮನ ಮಾಡುತ್ತೇನೆ ಎನ್ನುವುದು ಅಹಂಕಾರ. ನಮ್ಮ ಕಾರ್ಯಕರ್ತರನ್ನು ರಕ್ಷಣೆ ಮಾಡಿಕೊಳ್ಳುವುದು ನಮಗೆ ಗೊತ್ತಿದೆ' ಎಂದು ಪೋಸ್ಟ್‌ನಲ್ಲಿ ನಿಖಿಲ್ ತಿಳಿಸಿದ್ದಾರೆ.
'ನಾನು ನ್ಯಾಯದಲ್ಲಿ ನಂಬಿಕೆ ಇರಿಸಿದ್ದೇನೆ. ಚನ್ನಪಟ್ಟಣ ಹಾಗೂ ರಾಜ್ಯದ ಜನತೆಯ ಪರವಾಗಿ ಸದಾ ಇರುತ್ತೇನೆ. ಅವರಿಗಾಗಿ ದುಡಿಯುತ್ತೇನೆ. ಹೆದರಿಸಿ, ಬೆದರಿಸುವ ರಾಜಕೀಯಕ್ಕೆ ಬಗ್ಗಲ್ಲ. ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಇಂಥ ಗೊಡ್ಡು ಬೆದರಿಕೆಗಳಿಗೆ ಜಗ್ಗುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾನಿದ್ದೇನೆ, ಇಡೀ ಪಕ್ಷವಿದೆ. ಒಟ್ಟಾಗಿ ಹೋರಾಟ ಮಾಡೋಣ. ಸೋತಿದ್ದೇವೆಯೇ ಹೊರತು ಸತ್ತಿಲ್ಲ' ಎಂದು ಪೋಸ್ಟ್ ಹಾಕಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಜೆಡಿಎಸ್ ಪಕ್ಷ ಗೆದ್ದಿತ್ತು. ಎಚ್. ಡಿ. ಕುಮಾರಸ್ವಾಮಿ 96592 ಮತಗಳನ್ನು ಪಡೆದು ಬಿಜೆಪಿಯ ಸಿ. ಪಿ. ಯೋಗೇಶ್ವರ (80677 ಮತ) ಸೋಲಿಸಿದ್ದರು. 2024ರ ಲೋಕಸಭೆ ಚುನಾವಣೆಗೆ ಮಂಡ್ಯದಿಂದ ಕಣಕ್ಕಿಳಿದು ಗೆಲುವು ಸಾಧಿಸಿದ ಎಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆದ್ದರಿಂದ ಉಪ ಚುನಾವಣೆ ಎದುರಾಗಿತ್ತು.
ಉಪ ಚುನಾವಣೆ ಘೋಷಣೆಯಾಗುವಾಗ ಸಿ. ಪಿ. ಯೋಗೇಶ್ವರ ಬಿಜೆಪಿಯಲ್ಲಿಯೇ ಇದ್ದರು. ಅವರೇ ಉಪ ಚುನಾವಣೆಗೆ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಎಂದು ಅಂದಾಜಿಸಲಾಗಿತ್ತು. ಆದರೆ ನಾಮಪತ್ರ ಸಲ್ಲಿಕೆಗೆ ಮೂರು ದಿನ ಇರುವಾಗ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಆಗ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿತ್ತು.
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್‌ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ












Click it and Unblock the Notifications