ಅಪಘಾತದಿಂದ ಗಾಯಗೊಂಡಿದ್ದ ಎಎಸ್ಐ ಚಿಕಿತ್ಸೆ ಫಲಕಾರಿಯಾಗದೆ ಸಾವು

ರಾಮನಗರ, ಜನವರಿ 07: ಚನ್ನಪಟ್ಟಣದಲ್ಲಿ ಶನಿವಾರ ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾಲು‌ ಮುರಿದು‌ ಗಂಭೀರವಾಗಿ‌ ಗಾಯಗೊಂಡು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಎಸ್ಐ ಮಲ್ಲೇಶ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಚನ್ನಪಟ್ಟಣದ ಪೂರ್ವ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಮಲ್ಲೇಶ್ ಅವರು ಠಾಣೆಯ ಎದುರಿಗೆ ಇರುವ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿತ್ತು.

ಬೆಂಗಳೂರು ಕಡೆಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಎಎಸ್ಐ ಮಲ್ಲೇಶ್ ಅವರ ಎಡಗಾಲು ಸಂಪೂರ್ಣವಾಗಿ ತುಂಡಾಗಿ ತೀವ್ರ ರಕ್ತಸ್ರಾವವಾಗಿತ್ತು. ಹೆಚ್ಚಿನ‌ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ನಾಲ್ಕು ದಿನಗಳ‌ ಕಾಲ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

The ASI Died Of Ineffective Treatment

ಮೂಲತಃ ಚನ್ನಪಟ್ಟಣ ತಾಲ್ಲೂಕಿನ‌ ದಶವಾರ ಗ್ರಾಮದವರಾಗಿದ್ದ ಮಲ್ಲೇಶ್ ರಾಮನಗರದಲ್ಲಿಯೇ ವಾಸವಾಗಿದ್ದರು. ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರಿದ್ದಾರೆ.

The ASI Died Of Ineffective Treatment

ಘಟನೆ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಖಾಸಗಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಚಾಲಕನನ್ನು ಬಂಧಿಸಿ ತನಿಖೆ‌ ಮುಂದುವರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+