ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಕೇಂದ್ರ ಬಜೆಟ್ ರಾಷ್ಟ್ರದ ಆರ್ಥಿಕ ಸುಧಾರಣೆಗೆ ಪೂರಕವಾಗಿದೆ''

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಫೆಬ್ರವರಿ 1: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ರಾಷ್ಟ್ರದ ಆರ್ಥಿಕ ಸುಧಾರೆಗೆ ಪೂರಕವಾಗಿದೆ ಎಂದು ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ‌ಸಿಪಿ ಯೋಗೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ 16.50 ಲಕ್ಷ ಕೋಟಿ ನಿಗದಿ ಮಾಡಲಾಗಿದೆ. ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸುವವರಿಗೆ ತೆರಿಗೆ ರಿಯಾಯಿತಿ ನೀಡಿರುವುದು ಸ್ವಾಗತಾರ್ಹ. ಅಲ್ಲದೇ ಬೆಂಗಳೂರು ಮೆಟ್ರೋ ಯೋಜನೆಗೆ 14,778 ಕೋಟಿ ಪ್ರಕಟಿಸಲಾಗಿದೆ ಎಂದರು.

ಕೇಂದ್ರ ಬಜೆಟ್ 2021: ಕಾಂಗ್ರೆಸ್ಸಿನ ಆರ್.ವಿ ದೇಶಪಾಂಡೆ ಹೇಳಿದ್ದೇನು?ಕೇಂದ್ರ ಬಜೆಟ್ 2021: ಕಾಂಗ್ರೆಸ್ಸಿನ ಆರ್.ವಿ ದೇಶಪಾಂಡೆ ಹೇಳಿದ್ದೇನು?

ರಾಷ್ಟ್ರದ ರಸ್ತೆ ಸಂಪರ್ಕ ಜಾಲಕ್ಕೆ "ಭಾರತ ಮಾಲಾ' ಯೋಜನೆಯಲ್ಲಿ 3.30 ಲಕ್ಷ ಕೋಟಿ ರೂಪಾಯಿ ನೀಡಲಾಗಿದೆ. ಅಂತೆಯೇ ಆರೋಗ್ಯ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ, ನಗರ ಸ್ವಚ್ಛ ಅಭಿಯಾನಕ್ಕೆ 1.41 ಲಕ್ಷ ಕೋಟಿ ರೂಪಾಯಿ ನೀಡಲಾಗಿದೆ. ಪ್ರಮುಖವಾಗಿ ದೇಶ ಎದುರಿಸುತ್ತಿರುವ ಕೋವಿಡ್ ನಿವಾರಣೆ ಲಸಿಕೆ ಅಭಿಯಾನಕ್ಕೆ 35 ಸಾವಿರ ರುಪಾಯಿ ಕೋಟಿ ಬಿಡುಗಡೆ ಮಾಡಲಾಗಿದ್ದು ಖುಷಿಯ ವಿಚಾರ ಎಂದು ತಿಳಿಸಿದರು.

The Union Budget Is Complementary To The Nation’s Economic Reform: Minister CP Yogeshwar

ಕೇಂದ್ರ ಬಜೆಟ್ 2021: ಜನಪರ ಹೊರತು ಜನಪ್ರಿಯ ಬಜೆಟ್ ಅಲ್ಲಕೇಂದ್ರ ಬಜೆಟ್ 2021: ಜನಪರ ಹೊರತು ಜನಪ್ರಿಯ ಬಜೆಟ್ ಅಲ್ಲ

ಒಟ್ಟಾರೆ ಕೃಷಿ, ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯ, ಕೈಗಾರಿಕೆಗಳ ಬೆಳವಣಿಗೆ, ಪ್ರವಾಸೋದ್ಯಮ ಸೇರಿದಂತೆ ಆದ್ಯತಾ ವಲಯಗಳಿಗೆ ವಿಶೇಷ ಒತ್ತು ನೀಡಲಾಗಿದೆ. ಈ ಆಯವ್ಯಯವನ್ನು ತಾವು ಸ್ವಾಗತಿಸಲಿದ್ದು, ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಸಿಪಿ ಯೋಗೇಶ್ವರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Recommended Video

ಚುನಾವಣಾ ರಾಜ್ಯಕ್ಕೆ ಮಾತ್ರ ಸೀಮಿತವಾದ ಬಜೆಟ್ !! | Oneindia Kannada

English summary
Tourism Minister CP Yogeshwar lauded the budget presented by Union Finance Minister Nirmala Sitharaman as a supplement to the country's economic reforms.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X