Get Updates
Get notified of breaking news, exclusive insights, and must-see stories!

Ramanagara Water Crisis: ಈ ಜಿಲ್ಲೆಯ 108 ಹಳ್ಳಿಗಳಲ್ಲಿ ಕುಡಿವ ನೀರಿನ ಆತಂಕ

ರಾಮನಗರ ಫೆಬ್ರವರಿ 28: ಮಂಗಾರು ಮಳೆ ಸಂಪೂರ್ಣ ಕ್ಷೀಣಿಸಿದ ಪರಿಣಾಮ ರಾಮನಗರದಲ್ಲಿ ಬೆಳೆ ಹಾನಿ ಜೊತೆಗೆ ಕೆರೆಕಟ್ಟೆಗಳು ಬರಿದಾಗುತ್ತಿವೆ. ಮಾರ್ಚ್ ತಿಂಗಳಲ್ಲಿ 108 ಗ್ರಾಮಗಳಲ್ಲಿ ಕಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಇದ್ದು, ಮೇವಿನ ಸಮಸ್ಯೆ ಕಂಡು ಬಂದಿಲ್ಲ.

ರಾಮನಗರ ಟೌನ್‌ನ ಕೆಲ ವಾರ್ಡುಗಳು ಹಾಗೂ ಮಾಗಡಿ ತಾಲೂಕು ನೇತನಹಳ್ಳಿಯ ಉಡುವೆಗೆರೆ ಗ್ರಾಮ, ಚನ್ನಪಟ್ಟಣ ತಾಲೂಕಿನ ನೀಲಸಂದ್ರ ಗ್ರಾಪಂನ ದೊಡ್ಡಹಳ್ಳಿ, ಹಾರೋಹಳ್ಳಿ ತಾಲೂಕಿನ ಕೊಟ್ಟಗಾಳು ಗ್ರಾಮ ಪಂಚಾಯತ್ನ ಗೊಲ್ಲಹಳ್ಳಿ, ಕನಕಪುರ ತಾಲೂಕಿನ ಅಳ್ಳಿ ಮಾರನಗಳ್ಳಿ ಗ್ರಾಪಂನ ಬೇವುದೊಡ್ಡಿ, ಕೋಡಿಹಳ್ಳಿ ಗ್ರಾಪಂನಕೋಡಿಪುರ, ಹೊಸದೊಡ್ಡಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ.

There is concern about drinking water in 108 villages of this ramanagara district

ಈ ಗ್ರಾಮಗಳ ಪೈಕಿ ಒಂದು ಹಳ್ಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದರೆ, ಉಳಿದ ಹಳ್ಳಿಗಳ ಖಾಸಗಿ ಬೋರ್‌ವೆಲ್‌ಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ.

ಇಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ 108 ಗ್ರಾಮಗಳನ್ನು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಗುರುತಿಸಿದೆ.

ರಾಮನಗರ ನಗರಸಭೆ ವ್ಯಾಪ್ತಿಯ ಒಂಬತ್ತು ವಾರ್ಡುಗಳಿಗೆ ನಗರಸಭೆ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ಇದು ಸಾಕಾಗುತ್ತಿಲ್ಲ. ಹೀಗಾಗಿ 22 ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆ ಮಾಡಲು ಸಿದ್ಧತೆಗಳು ನಡೆದಿವೆ. ಇನ್ನು ಕನಕಪುರ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬೇವುವೊಡ್ಡಿ ಗ್ರಾಮಕ್ಕೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದು ನೀರಿನ ಸಮಸ್ಯೆ ಎದುರಾಗುವ ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸಲು ಸಿರ್ದಧತೆ ಮಾಡಿಕೊಂಡಿದೆ.

There is concern about drinking water in 108 villages of this ramanagara district

ರಾಮನಗರ ಜಿಲ್ಲೆ ಬಯಲುಸೀಮೆಯ ಪ್ರದೇಶವಾಗಿದ್ದು ಯಾವುದೇ ನದಿ ಮೂಲವನ್ನು ಹೊಂದಿಲ್ಲ. ಹೀಗಾಗಿ ನೀರಿನ ಸಮಸ್ಯೆಯನ್ನು ಎದುರಿಸುತ್ತಿದೆ. ಸದ್ಯಕ್ಕೆ ಜಲಮೂಲವಾಗಿರುವ ಸಣ್ಣ ಜಲಾಶಯಗಳು ಮತ್ತು ಕೆರೆಕಟ್ಟೆಗಳು ಬರಿದಾಗುತ್ತಿವೆ. ಇದರಿಂದಾಗಿ ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗುವ ಆತಂಕ ಸೃಷ್ಟಿಯಾಗಿದೆ.

ಜಿಲ್ಲೆಯಲ್ಲಿನ ಕೆರೆಕಟ್ಟೆಗಳಲ್ಲಿ ನೀರು ಸಂಪೂರ್ಣ ಸಂಗ್ರಹವಾಗದೆ ಕಾಡು ಪ್ರಾಣಿ, ಜಾನುವಾರುಗಳು ಕುಡಿಯುವ ನೀರಿಗೆ ಪರದಾಡುತ್ತಿವೆ. ಮುಂಗಾರು ಮಳೆಯ ಪ್ರಮಾಣ ವಾಡಿಕೆಗಿಂತ ಸಂಪೂರ್ಣ ಕುಸಿತ ಕಂಡಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡಬಹುದಾದ ಚನ್ನಪಟ್ಟಣ ನಗರಸಭೆಯಲ್ಲಿ ಎರಡು ವಾರ್ಡ್,ರಾಮನಗರ ನಗರಸಭೆಯಲ್ಲಿ 19 ವಾರ್ಡು ಹಾಗೂ ಹಾರೋಹಳ್ಳಿ ಪಟ್ಟಣ ಪಂಚಾಯತಿಯಲ್ಲಿ 3 ವಾರ್ಡಗಳನ್ನು ಗುರುತಿಸಲಾಗಿದೆ.

ಅಲ್ಲದೆ, ಕನಕಪುರ ತಾಲೂಕಿನಲ್ಲಿ 18, ಚನ್ನಪಟ್ಟಣ ತಾಲೂಕಿನಲ್ಲಿ 10, ರಾಮನಗರ ತಾಲೂಕಿನಲ್ಲಿ 32, ಹಾಗೂ ಮಾಗಡಿ ತಾಲೂಕಿನಲ್ಲಿ 44 ಹಳ್ಳಿಗಳು ಹಾಗೂ ಹಾರೋಹಳ್ಳಿ ತಾಲೂಕಿನಲ್ಲಿ 04 ಸೇರಿದಂತೆ ಒಟ್ಟು 108 ಗ್ರಾಮಗಳನ್ನು ಗುರುತಿಸಿದ್ದು, ಅಲ್ಲಿ ಬೋರ್‌ ವೆಲ್‌ಗಳನ್ನು ಕೊರೆಸಿ ನೀರು ಪೂರೈಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

24 ವಾರಗಳಿಗೆ ಬೇಕಾದಷ್ಟು ಮೇವು

20ನೇ ಗಣತಿ ಪ್ರಕಾರ ಜಿಲ್ಲೆಯಲ್ಲಿ 207146 ದನ ಮತ್ತು ಎಮ್ಮೆಗಳು ಹಾಗೂ 278118 ಕುರಿ ಮತ್ತು ಮೇಕೆಗಳಿವೆ. ಇದರಲ್ಲಿ ದನ-ಎಮ್ಮೆಗೆ ದಿನಕ್ಕೆ 6 ಕೆಜಿ, ಕುರಿ-ಮೇಕೆಗೆ 0.5 ಕೆಜಿ ಮೇವಿನಂತೆ ವಾರಕ್ಕೆ 13,873 ಟನ್ ಮೇವು ಬೇಕಾಗುತ್ತದೆ. ಈಗ 344164 ಟನ್ ಮೇವು ಲಭ್ಯವಿದ್ದು, ವಾರಕ್ಕೆ 18346 ಟನ್ ಮೇವು ವಾರದಲ್ಲಿ 4794 ಟನ್ ಮೇವು ಉತ್ಪಾದನೆ ಆಗುತ್ತಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಫೆಬ್ರವರಿ ತಿಂಗಳವರೆಗೆ 24 ವಾರಗಳಿಗೆ ಸಾಕಾಗುವಷ್ಟು ಅಂದರೆ 330612 ಟನ್ ಮೇವು ಲಭ್ಯವಿದೆ.

ಕಳೆದ ಜನವರಿಯಲ್ಲೇ ಜಿಲ್ಲೆಯಲ್ಲಿ ಉಷ್ಣಾಂಶದ ಪ್ರಮಾಣ ಏರುಗತಿಯಲ್ಲಿತ್ತು, ಹೆಚ್ಚುತ್ತಿರುವ ಬಿಸಿಲಿನಿಂದ ಜಲಮೂಲಗಳಾದ ಕೆರೆಕಟ್ಟೆಗಳು ಬರಿದಾಗುತ್ತಿವೆ. ಅಂತರ್ಜನ ಮಟ್ಟವೂ ಗಂಭೀರ ಸ್ಥಿತಿಗೆ ತಲುಪುವಂತಾಗಿದೆ. ಸಮಸ್ಯೆ ಕಂಡುಬಂರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ಮೇವಿನ ಕೊರತೆ ನೀಗಿಸಲು ಟೆಂಡರ್ ಪ್ರಕ್ರಿಯೆಯೂ ನಡೆಯುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+