ಮದುವೆಯಿಂದ ಹಿಂದಿರುಗುವಾಗ ಅಪಘಾತ: ಮೂವರು ಸ್ಥಳದಲ್ಲೇ ಸಾವು
ರಾಮನಗರ, ಜೂನ್ 23: ಮದುವೆ ಮನೆಯಿಂದ ಹಿಂದಿರುಗುವಾಗ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರದ ಹುಚ್ಚಹನುಮೇಗೌಡನ ಪಾಳ್ಯದಲ್ಲಿ ನಡೆದಿದೆ.
ಇವರೆಲ್ಲ ಮಾಗಡಿಯ ಕರೇನಹಳ್ಳಿಯ ಮದವೆಗೆ ಹೋಗಿದ್ದರು. ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಸಂಬಂಧಿಕರ, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆ ಮನೆಯಿಂದ ಮುಂಜಾನೆ ಬರುವಾಗ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಶ್ರೀಪತಿಹಳ್ಳಿಯ ನರಸಮ್ಮ (65), ತಾಳೆಕೆರೆಯ ಜಯಲಕ್ಷ್ಮಮ್ಮ (42) ಮತ್ತು ಕಾಮಸಾಗರದ ಕುಮಾರ್ (25) ಮೃತರು. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.












Click it and Unblock the Notifications