• search
 • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಮೂವರ ಸ್ಥಿತಿ ಗಂಭೀರ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ನವೆಂಬರ್ 17: ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಗಡಿಯ ರಾಜೀವ್ ಗಾಂಧಿನಗರದಲ್ಲಿ ನಡೆದಿದೆ.

ಪಟ್ಟಣದ ರಾಜೀವ್ ಗಾಂಧಿ ನಗರದ ನಿವಾಸಿ ದೊರೆ ಮತ್ತು ಅವರ ಪತ್ನಿ ಜಗನ ಮಂಗಳವಾರ ತರಕಾರಿ ವ್ಯಾಪಾರ ಮಾಡಲು ತೆರಳಿದ್ದಾರೆ. ಮಧ್ಯಾಹ್ನ ಇವರ ಮಗ ಪಕ್ಕದ ಮನೆಯ ಇಬ್ಬರೊಂದಿಗೆ ಸೇರಿ ಅಡುಗೆ ಮಾಡಲು ಗ್ಯಾಸ್ ಆನ್ ಮಾಡಿ ಬೆಂಕಿಪೊಟ್ಟಣ ಹುಡುಕುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಕಿಶೋರ್ (14), ಚಂದ್ರು (14), ದರ್ಶನ್ (17) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗ್ಯಾಸ್ ಟ್ಯಾಂಕರ್ ನಿಂದ ಅನಿಲ ಸೋರಿಕೆ; ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗ್ಯಾಸ್ ಟ್ಯಾಂಕರ್ ನಿಂದ ಅನಿಲ ಸೋರಿಕೆ; ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ

   ವಿದ್ಯಾರ್ಥಿಗಳು ಕೋರೋನಾಗೆ ತಲೆ ಕೆಡ್ಸ್ಕೋತಿಲ್ಲ!! | Oneindia Kannada

   ಸ್ಫೋಟದಿಂದ ಮನೆಯ ಗೋಡೆ, ಶೀಟ್ ಸಂಪೂರ್ಣ ಜಖಂಗೊಂಡಿದ್ದು ಮನೆಯಲ್ಲಿದ್ದ ಫ್ರಿಜ್, ಫ್ಯಾನ್, ಪಾತ್ರೆ ಸಾಮಗ್ರಿಗಳೆಲ್ಲಾ ಸುಟ್ಟು ಕರಕಲಾಗಿವೆ. ಸ್ಥಳೀಯರು ಇವರನ್ನು ತಕ್ಷಣವೇ ಪಟ್ಟಣದ ಸರ್ಕಾರಿ‌ ಅಸ್ಪತ್ರೆಗೆ ದಾಖಲಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.

   English summary
   Three were injured when a gas cylinder exploded accidentally in Rajiv Gandhi Nagar at Magadi of ramanagar,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X