• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪೌರತ್ವ ಕಾಯ್ದೆ ಬೆಂಬಲಿಸಿ ರೇಷ್ಮೆ ನಗರದಲ್ಲಿ ನಾಳೆ ಜನಾಂದೋಲನ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜನವರಿ 03: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಾಳೆ ರೇಷ್ಮೆ ನಾಡು ರಾಮನಗರದಲ್ಲಿ ಜಿಲ್ಲಾ ಬಿಜೆಪಿ ಘಟಕ ವತಿಯಿಂದ ಬೃಹತ್ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ನಗರದ ಕೇಂಪೇಗೌಡ ವೃತದಿಂದ ಪ್ರಾರಂಭವಾಗುವ ಜನಾಂದೋಲನಾ ಮೆರವಣಿಗೆ ಪ್ರಮುಖ ರಸ್ತೆಗಳಾದ ಐಜೂರು ವೃತ್ತ, ಹಳೆ ಬಸ್ ನಿಲ್ದಾಣ ಮೂಲಕ ಸಾಗುವ ಮೆರವಣಿಗೆ ಅಂತಿಮವಾಗಿ ಜೂನಿಯರ್ ಕಾಲೇಜು ಮೈದಾನದ ಬಳಿ ಕೊನೆಗೂಳ್ಳಲಿದೆ.

 ಏಸುಗೆ ಡಿಕೆಶಿ ಫೋಟೊ; ಸಾಮಾಜಿಕ ಜಾಲತಾಣದಲ್ಲಿ ಏಸುಕುಮಾರ್ ಎಂದು ಕುಚೋದ್ಯ ಏಸುಗೆ ಡಿಕೆಶಿ ಫೋಟೊ; ಸಾಮಾಜಿಕ ಜಾಲತಾಣದಲ್ಲಿ ಏಸುಕುಮಾರ್ ಎಂದು ಕುಚೋದ್ಯ

ಈಗಾಗಲೇ ಜಿಲ್ಲೆಯ ನಾಲ್ಕು ತಾಲ್ಲೂಕು ಬಿಜೆಪಿ ಘಟಕಗಳಲ್ಲಿ ಪೂರ್ವಭಾವಿ ಸಭೆ ನಡೆಸಿ ಜನಾಂದೋಲನಕ್ಕೆ ಹೆಚ್ಚಿನ ಜನರನ್ನು ಸೇರಿಸುವ ಮೂಲಕ ಕೇಂದ್ರ ಸರ್ಕಾರ ನಿರ್ಧಾರಕ್ಕೆ ನೈತಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸರ್ವ ಪ್ರಯತ್ನಗಳು ಸಾಗಿವೆ. ಜನಾಂದೋಲನದಲ್ಲಿ ರಾಜ್ಯ ಮಟ್ಟದ ನಾಯಕರು ಭಾಗಿಯಾಗುತ್ತಾರೆ ಎಂದು ಜಿಲ್ಲಾ ಬಿಜೆಪಿ ಘಟಕದ ಪದಾಧಿಕಾರಿಗಳು ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸುವ ಈ ಜನಾಂದೋಲನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಪೌರತ್ವ ಕಾಯ್ದೆಯ ಬಗ್ಗೆ ಜನರಿಗಿರುವ ತಪ್ಪು ಅಭಿಪ್ರಾಯಗಳನ್ನು ತೊಡೆದುಹಾಕುವುದಾಗಿದೆ.

ಕಪಾಲ ಬೆಟ್ಟದ ಜಮೀನನ್ನು ಭೂ ರಹಿತ ರೈತರಿಗೆ ಹಂಚಿ ಎಂದ ಬಿಜೆಪಿ ನಿಯೋಗಕಪಾಲ ಬೆಟ್ಟದ ಜಮೀನನ್ನು ಭೂ ರಹಿತ ರೈತರಿಗೆ ಹಂಚಿ ಎಂದ ಬಿಜೆಪಿ ನಿಯೋಗ

ಕಾಯ್ದೆಯ ಅವಶ್ಯಕತೆಯನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಕಾಂಗ್ರೆಸ್ ಪಕ್ಷದ ಪೌರತ್ವ ವಿರೋಧಿ ಹೋರಾಟಕ್ಕೆ ಸೆಡ್ಡು ಹೊಡೆಯಲು ಜಿಲ್ಲಾ ಬಿಜೆಪಿ ಘಟಕ ಮುಂದಾಗಿದೆ.

English summary
District BJP Unit in Silk city Ramanagara tomorrow Held On Big Programme to support the central governments Citizenship Amendment Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X