ರಾಜ್ಯದ 150 ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಮುಂದಾದ ಟೊಯೊಟಾ
ರಾಮನಗರ, ಸೆಪ್ಟೆಂಬರ್ 12: ಬಿಡದಿ ಕೈಗಾರಿಕಾ ವಲಯದಲ್ಲಿರುವ ಏಷ್ಯಾದ ಅತಿದೊಡ್ಡ ಕಾರು ತಯಾರಿಕಾ ಕಾರ್ಖಾನೆ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಕರ್ನಾಟಕ ಸರ್ಕಾರದ ಸಹಭಾಗಿತ್ವದಲ್ಲಿ 30ಕ್ಕೂ ಅಂಗನವಾಡಿ ಕೇಂದ್ರಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದ ಬೆನ್ನಲ್ಲೇ 150 ಅಂಗನವಾಡಿ ಕೇಂದ್ರಗಳ ಅಭಿವೃದ್ದಿಗೆ ಮುಂದಾಗಿದೆ.
ದೇಶದ ಸುಸ್ಥಿರ ಭವಿಷ್ಯಕ್ಕಾಗಿ ಮಕ್ಕಳ ಸೃಜನಶೀಲ ಕಲಿಕೆ ಮತ್ತು ಅಭಿವೃದ್ಧಿಗೆ ವಾತಾವರಣವನ್ನು ಸೃಷ್ಟಿಸುವಲ್ಲಿ ಅಂಗನವಾಡಿ ಕೇಂದ್ರಗಳು ಹಾಗೂ ಅಂಗನವಾಡಿ ಶಿಕ್ಷಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗಾಗಿ ಮಾದರಿ ಅಂಗನವಾಡಿಗಳ ನಿರ್ಮಾಣ ಅತ್ಯಗತ್ಯವಾಗಿದೆ. ಈ ಹಿನ್ನಲೆಯಲ್ಲಿ ಟಯೊಟಾ ಕಂಪನಿ 23-24ರ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ರಾಮನಗರ ಜಿಲ್ಲೆಯ 150 ಅಂಗನವಾಡಿ ಕೇಂದ್ರಗಳಿಗೆ ಅಭಿವೃದ್ಧಿ ಕೈಗೊಂಡಿದೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 150 ಅಂಗನವಾಡಿ ಶಿಕ್ಷಕರ ಉಪಸ್ಥಿತಿಯಲ್ಲಿ ಈ ಮಹತ್ವದ ಮಾದರಿ ಅಂಗನವಾಡಿ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ರಾಮನಗರ ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಚಿಕ್ಕಸುಬ್ಬಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಾರಾಯಣಸ್ವಾಮಿ, ಟಿಕೆಎಂನ ಹಿರಿಯ ಉಪಾಧ್ಯಕ್ಷ, ನಿರ್ದೇಶಕ ಮತ್ತು ಮುಖ್ಯ ಸಂವಹನ ಅಧಿಕಾರಿ ಸುದೀಪ್ ಎಸ್ ದಾಲ್ವಿ, ಟಿಕೆಎಂನ ಸಿಎಸ್ಆರ್ ಮತ್ತು ಬಿಐಎ, ಇಎ-ಸ್ಟೇಟ್ ಉಪ ಪ್ರಧಾನ ವ್ಯವಸ್ಥಾಪಕ ರೋಶನ್ ಆರ್ ಉಪಸ್ಥಿತರಿದ್ದರು.
ಮಾದರಿ ಅಂಗನವಾಡಿಗಳ ವಿಶೇಷತೆ
ಈಗಾಗಲೇ ಟೊಯೊಟಾ ಅಭಿವೃದ್ಧಿಪಡಿಸಿರುವ ಮಾದರಿ ಅಂಗನವಾಡಿ ಕೇಂದ್ರಗಳಲ್ಲಿ ಆರಂಭಿಕ ಬಾಲ್ಯದ ಶಿಕ್ಷಣ ಮತ್ತು ಮಕ್ಕಳ ಅಭಿವೃದ್ಧಿಯನ್ನು ಗಮನಾರ್ಹವಾಗಿ ಸುಧಾರಿಸಿದೆ. ಇದು ಮಕ್ಕಳ ಸ್ನೇಹಿ ಅಂಗನವಾಡಿ ಕೇಂದ್ರಗಳು, ಚಟುವಟಿಕೆ ಆಧಾರಿತ ಕಲಿಕೆ, ಶಿಕ್ಷಕರ ಸಾಮರ್ಥ್ಯ ವರ್ಧನೆ ಮತ್ತು ಆರೋಗ್ಯ ಮತ್ತು ನೈರ್ಮಲ್ಯದ ಮೇಲೆ ಕೇಂದ್ರೀಕರಿಸುವ ಸಮಗ್ರ "4 ಸ್ತಂಭ ವಿಧಾನ" ಸೂತ್ರ ಅಳವಡಿಸಿಕೊಂಡಿದೆ.
ಅಂಗನವಾಡಿ ಕೇಂದ್ರಗಳನ್ನು ಸೌಂದರ್ಯ ಮತ್ತು ಮೂಲಸೌಕರ್ಯಗಳೊಂದಿಗೆ ಮಕ್ಕಳ ಸ್ನೇಹಿ ಸ್ಥಳಗಳಾಗಿ ಪರಿವರ್ತಿಸುತ್ತದೆ. ಇದು ನವೀನ ಚಟುವಟಿಕೆ ಆಧಾರಿತ ಕಲಿಕೆಯನ್ನು ಪರಿಚಯಿಸುತ್ತದೆ. ಮಕ್ಕಳನ್ನು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಲು ವಯಸ್ಸಿಗೆ ತಕ್ಕಂತೆ ನಿರ್ದಿಷ್ಟ ಕಲಿಕಾ ಉಪಕರಣಗಳನ್ನು ಒದಗಿಸುತ್ತದೆ. ಇದು ಹಾಜರಾತಿ ಸುಧಾರಣೆ ಹಾಗೂ ಮಕ್ಕಳ ಪಾಲ್ಗೊಳ್ಳುವಿಕೆ ಹೆಚ್ಚಳಕ್ಕೆ ಕಾರಣವಾಗಿದೆ.

ಅಂಗನವಾಡಿ ಶಿಕ್ಷಕರಿಗೆ ಅವರು ಪೋಷಿಸುವ ಮಕ್ಕಳ ಮನಸ್ಸುಗಳಿಗೆ ಪ್ರಯೋಜನವಾಗುವಂತೆ ಶಿಕ್ಷಕರ ಬೋಧನಾ ಕೌಶಲ್ಯಗಳನ್ನು ಹೆಚ್ಚಿಸುತ್ತದೆ. ಆರೋಗ್ಯಕರ ಅಡುಗೆ ತಯಾರಿಕೆ ಸೇರಿದಂತೆ ಆರೋಗ್ಯ ಮತ್ತು ನೈರ್ಮಲ್ಯ ಚಟುವಟಿಕೆಗಳಿಗೆ ಒತ್ತು ನೀಡಲಾಗಿದೆ. ಕಿಚನ್ ಗಾರ್ಡನ್ಸ್ ಪರಿಕಲ್ಪನೆಯನ್ನು ಉತ್ತೇಜಿಸುವುದು ಹಣ್ಣುಗಳು ಮತ್ತು ತರಕಾರಿಗಳ ತಾಜಾ ಪೂರೈಕೆ ಸೇರಿದಂತೆ ಈ 4 ಸ್ತಂಭಗಳ ಅನುಷ್ಠಾನದಿಂದ ಉತ್ತಮ ಫಲಿತಾಂಶ ಬಂದಿದೆ.
ಟೊಯೊಟಾ ನಡೆ ಶ್ಲಾಘನೀಯ
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಪ್ರಭಾರ) ಮತ್ತು ಮುಖ್ಯ ಯೋಜನಾಧಿಕಾರಿ ಚಿಕ್ಕ ಸುಬ್ಬಯ್ಯ , 'ಟೊಯೊಟಾ ಅಂಗನವಾಡಿ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಆರಂಭಿಕ ಬಾಲ್ಯದ ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಮಕ್ಕಳ ಅಭಿವೃದ್ಧಿ ಮಗುವಿನ ಆರೋಗ್ಯಕರ ಬೆಳವಣಿಗೆಯ ಅಡಿಪಾಯವನ್ನು ರೂಪಿಸುವುದರ ಜೊತೆಗೆ ಪ್ರಮುಖ ಕಲಿಕೆ, ಭಾವನಾತ್ಮಕ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುತ್ತೇವೆ. ಮಕ್ಕಳ ಮನಸ್ಸಿಗೆ ಬಲವಾದ ಶೈಕ್ಷಣಿಕ ಅಡಿಪಾಯವನ್ನು ಹಾಕುವ ಸಾಮರ್ಥ್ಯ ಹೆಚ್ಚಾಗಿದೆ. ಇದಕ್ಕಾಗಿ ನವೀನ ಬೋಧನಾ ತಂತ್ರಗಳೊಂದಿಗೆ ಶಿಕ್ಷಕರನ್ನು ಸಜ್ಜುಗೊಳಿಸುತ್ತಿರುವುದು ಶ್ಲಾಘನೀಯ' ಎಂದರು.
ಮಕ್ಕಳ ಉಜ್ವಲ ಭವಿಷ್ಯ ರೂಪಿಸುವುದು ನಮ್ಮ ಗುರಿ
ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಹಿರಿಯ ಉಪಾಧ್ಯಕ್ಷ, ನಿರ್ದೇಶಕ ಮತ್ತು ಮುಖ್ಯ ಸಂವಹನ ಅಧಿಕಾರಿ ಸುದೀಪ್ ಎಸ್ ದಾಲ್ವಿ ಮಾತನಾಡಿ, 'ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಟೊಯೊಟಾ ಅಂಗನವಾಡಿ ಅಭಿವೃದ್ಧಿ ಕಾರ್ಯಕ್ರಮಕ್ಕೆ (ಟಿಎಡಿಪಿ) ಕೈಜೋಡಿಸಿರುವುದಕ್ಕೆ ಸಂತೋಷಪಡುತ್ತೇವೆ. ಈ ಕಾರ್ಯಕ್ರಮವು ಮಕ್ಕಳು ಮತ್ತು ಸಮುದಾಯಗಳ ಜೀವನದ ಮೇಲೆ ಮಹತ್ವದ ಛಾಪು ಮೂಡಿಸುತ್ತದೆ. ಮಕ್ಕಳ ಆರೋಗ್ಯಕರ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸುವ ನಮ್ಮ ದೃಷ್ಟಿಕೋನದಿಂದ ಸಮುದಾಯ, ರಾಜ್ಯ ಮತ್ತು ದೇಶಕ್ಕೆ ಪ್ರಯೋಜನವಾಗುತ್ತದೆ. ನಮ್ಮ ನಿರಂತರ ಪ್ರಯತ್ನಗಳು ಮುಂಬರುವ ವರ್ಷಗಳಲ್ಲಿ ಮಕ್ಕಳ ಜೀವನದ ಮೇಲೆ ಆಳವಾದ ಸಕಾರಾತ್ಮಕ ಪರಿಣಾಮಗಳನ್ನು ಬೀರುತ್ತವೆ ಎಂದು ನಮಗೆ ವಿಶ್ವಾಸವಿದೆ' ಎಂದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications