ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ: ವೈದ್ಯಕೀಯ ಉತ್ಪನ್ನ ನೀಡಲು ಟೊಯೊಟಾ ಕಿರ್ಲೋಸ್ಕರ್ ಒಪ್ಪಿಗೆ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಮೇ 1: ಕೋವಿಡ್ ಎರಡನೇ ಅಲೆಯನ್ನು ಹತ್ತಿಕ್ಕುವ ಉದ್ದೇಶದಿಂದ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರು ಟೊಯೊಟಾ ಕಿರ್ಲೋಸ್ಕರ್ ಕಂಪನಿ ಜತೆ ಶುಕ್ರವಾರ ಮಹತ್ವದ ಸಮಾಲೋಚನೆ ನಡೆಸಿದರು.

Recommended Video

ಸಿಎಂ ಬಿಎಸ್ ವೈ ಖಾಸಗಿ ಆಸ್ಪತ್ರೆ ರೌಂಡ್ಸ್ | Oneindia Kannada

ವರ್ಚುವಲ್ ವೇದಿಕೆ ಮೂಲಕ ಟೊಯೊಟಾ ಕಂಪನಿಯ ಉಪಾಧ್ಯಕ್ಷ ವಿಕ್ರಂ ಕಿರ್ಲೋಸ್ಕರ್ ಜತೆ ಚರ್ಚೆ ನಡೆಸಿದ ಡಿಸಿಎಂ, ರಾಮನಗರ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆಗೆ ಅಗತ್ಯವಾದ ನೆರವನ್ನು ಕಂಪನಿ ವತಿಯಿಂದ ನೀಡುವಂತೆ ಕೋರಿದರು.

ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರ ಮನವಿಗೆ ಕೂಡಲೇ ಸ್ಪಂದಿಸಿದ ವಿಕ್ರಂ ಕಿರ್ಲೋಸ್ಕರ್, ತತ್‌ಕ್ಷಣವೇ 1 ಕೋಟಿ ರೂ. ಮೌಲ್ಯದ ವೈದ್ಯಕೀಯ ಉತ್ಪನ್ನಗಳನ್ನು ರಾಮನಗರ ಜಿಲ್ಲೆಗೆ ನೀಡುವುದಾಗಿ ಭರವಸೆ ನೀಡಿದರು.

Ramanagara: Toyota Kirloskar Has Agreed To Provide Medical Products

ಕಂಪನಿಯ ಜತೆ ರಾಮನಗರ ಜಿಲ್ಲಾಡಳಿತ ನಿರಂತರವಾಗಿ ಸಂಪರ್ಕದಲ್ಲಿರುತ್ತದೆ ಎಂದು ಈ ಸಂದರ್ಭದಲ್ಲಿ ಡಿಸಿಎಂ ಅವರು ಟೊಯೊಟಾ ಕಿರ್ಲೋಸ್ಕರ್ ಪ್ರತಿನಿಧಿಗಳಿಗೆ ತಿಳಿದರು. ಸಭೆಯಲ್ಲಿ ಟೊಯೊಟಾ ಕಿರ್ಲೋಸ್ಕರ್ ವತಿಯಿಂದ ಸಂದೀಪ್‌ ಶಾಂತಾರಾಂ ದಲ್ವಿ, ಬಿಡದಿ ಕೈಗಾರಿಕಾ ಪ್ರದೇಶದ ಅಧ್ಯಕ್ಷ ಹೆಗಡೆ ಮುಂತಾದವರು ಭಾಗಿಯಾಗಿದ್ದರು.

ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿಸಿಎಂ ಅವರು, "ಕೋವಿಡ್ ನಿರ್ವಹಣೆಯಲ್ಲಿ ಖಾಸಗಿ ಸಹಭಾಗಿತ್ವವನ್ನು ಹೆಚ್ಚಿಸುವ ಪ್ರಯತ್ನದ ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗಿದೆ. ಟೊಯೊಟಾ ಕಿರ್ಲೋಸ್ಕರ್ ಕಡೆಯಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ರಾಮನಗರ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಲಪಡಿಸಲು ಅವರ ನೆರವು ಕೇಳಿದ್ದೇವೆ' ಎಂದರು.

Ramanagara: Toyota Kirloskar Has Agreed To Provide Medical Products

ಮಾಗಡಿ ಮತ್ತು ಕನಕಪುರದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷಾ ಘಟಕಗಳ ಸ್ಥಾಪನೆ, ರಾಮನಗರ ಜಿಲ್ಲೆಗೆ 50 ವೆಂಟಿಲೇಟರ್‌ಗಳು ಮತ್ತು 50 ಪ್ಯಾರಾ ಮಲ್ಟಿ ಮಾನಿಟರ್‌ಗಳು, ಆಕ್ಸಿಜನ್ ಜನರೇಟರ್‌ಗಳು, 200 ಆಕ್ಸಿಜನ್ ಬೆಡ್‌ಗಳು ಬೇಕೆಂದು ನಾವು ಮನವಿ ಮಾಡಿದ್ದೇವೆ. ಈ ಎಲ್ಲ ಬೇಡಿಕೆಗಳಿಗೆ ಕಂಪನಿ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಡಿಸಿಎಂ ತಿಳಿಸಿದರು.

ನಗರದ ಎಂ.ಎಸ್ ರಾಮಯ್ಯ, ಮೈಸೂರು ರಸ್ತೆಯ ರಾಜರಾಜೇಶ್ವರಿ ಮತ್ತು ಕನಕಪುರ ರಸ್ತೆಯ ದಯಾನಂದ ಸಾಗರ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗಳಿಗೆ ತುರ್ತಾಗಿ ಆಕ್ಸಿಜನ್ ಬೆಡ್‌ಗಳ ಅಗತ್ಯವಿದೆ. ಈ ಆಸ್ಪತ್ರೆಗಳಲ್ಲಿ ನುರಿತ ವೈದ್ಯಕೀಯ ಸಿಬ್ಬಂದಿ ಇದ್ದು, ಇಂಥ ಹಾಸಿಗೆಗಳ ಮೇಲೆ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಉತ್ತಮ ಚಿಕಿತ್ಸೆ ದೊರೆಯಲಿದೆ. ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ಕೊಡಿಸುವುದು ಸರಕಾರದ ಉದ್ದೇಶವಾಗಿದೆ ಎಂದು ಡಾ.ಅಶ್ವಥ್ ನಾರಾಯಣ ಅವರು ಹೇಳಿದರು.

English summary
DCM Ashwath Narayana discussed with Toyota's Vice President Vikram Kirloskar, requested that the company provide the necessary assistance to maintain Covid in the Ramanagar district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X