ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈದ್ಯರ ಹಲ್ಲೆ ಮಾಡಿದ್ದ ಪಾದರಾಯನಪುರ ಪುಂಡರಲ್ಲಿ ಕೊರೊನಾ ಸೋಂಕು ಪತ್ತೆ!

|
Google Oneindia Kannada News

ಬೆಂಗಳೂರು, ಏ. 23: ಬೆಂಗಳೂರಿನ ಪಾದರಾಯನಪುರದಲ್ಲಿ ವೈದ್ಯರು ಹಾಗೂ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಪುಂಡರಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಇರುವುದು ಇದೀಗ ದೃಢಪಟ್ಟಿದೆ. ಬೆಂಗಳೂರಿನ ಪಾದರಾಯನಪುರದಲ್ಲಿ ವೈದ್ಯರು ಹಾಗೂ ಪೊಲೀಸರ ಮೆಲೆ ಹಲ್ಲೆ ಮಾಡಿದ್ದವನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ಹೀಗೆ ಸ್ಥಳಾಂತರಗೊಂಡಿದ್ದ 121 ಜನರಲ್ಲಿ ಇಬ್ಬರಿಗೆ ಕೊರೊನಾ ವೈರಸ್‌ ಇರುವುದು ದೃಢಪಟ್ಟಿದೆ.

ವಿದೇಶಿ ತಬ್ಲಿಘಿಗಳಿಗೆ ಆಶ್ರಯ: ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ದೂರು ದಾಖಲುವಿದೇಶಿ ತಬ್ಲಿಘಿಗಳಿಗೆ ಆಶ್ರಯ: ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ದೂರು ದಾಖಲು

ಈ ಹಿಂದೆ ಬೆಂಗಳೂರಿನ ಪಾದರಾಯನಪುರ ವಾರ್ಡ್‌ನಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದರಿಂದ ಮೊದಲ ಹಂತದ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‌ಗೆ ಕರೆದುಕೊಂಡು ಹೋಗಲು ವೈದ್ಯರು, ಪೊಲೀಸರು ಹೋದಾಗ ಅವರ ಮೇಲೆ ಮಾರಣಾಂತಿಕ ಹಲ್ಲೆಯಾಗಿತ್ತು. ಹಲ್ಲೆ ಮಾಡಿದ್ದ 121 ಜನರನ್ನು ಬೆಂಗಳೂರಿನಿಂದ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿತ್ತು. ರಾಮನಗರ ಜಿಲ್ಲಾ ಕಾರಾಗೃಹದಲ್ಲಿದ್ದ ಖೈದಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿತ್ತು.

ರಾಮನಗರಕ್ಕೆ ಕೊರೊನಾ ಲಗ್ಗ ಇಡಲು ಸರ್ಕಾರವೇ ಕಾರಣ ಎಂದ ಎಚ್ ಡಿಕೆರಾಮನಗರಕ್ಕೆ ಕೊರೊನಾ ಲಗ್ಗ ಇಡಲು ಸರ್ಕಾರವೇ ಕಾರಣ ಎಂದ ಎಚ್ ಡಿಕೆ

Two out of the 124 people who were evacuated confirmed that they had the coronavirus

ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದ 121 ಶಂಕಿತರಲ್ಲಿ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವುದರಿಂದ ಅವರನ್ನು ಬೆಂಗಳೂರಿನ ಹಜ್‌ಭವನಕ್ಕೆ ಸ್ಥಳಾಂತರ ಮಾಡಲು ಇದೀಗ ಸಿದ್ಧತೆಗಳು ನಡೆದಿದ್ದು, ಕೆಲಹೊತ್ತಿನಲ್ಲಿ ಸ್ಥಳಾಂತರ ಮಾಡಲಾಗುವುದು ಎಂದು ರಾಮನಗರ ಜಿಲ್ಲಾಡಳಿತದಿಂದ ಮಾಹಿತಿ ಸಿಕ್ಕಿದೆ. ಕೊರೊನಾ ವೈರಸ್ ಪತ್ತೆಯಾಗಿರುವ ಇಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಿ, ಚಿಕಿತ್ಸೆ ಕೊಡಲಾಗುತ್ತದೆ ಎಂಬ ಮಾಹಿತಿಯಿದೆ. ಪಾದರಾಯನಪುರ ಪುಂಡರನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡುವುದನ್ನು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಮೊದಲೇ ವಿರೋಧಿಸಿದ್ದರು.

English summary
It has now been confirmed that two of the assailants who attacked doctors and police in Padarayanapur have two corona virus infection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X