ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಟೊಯೋಟಾ ಸಮಸ್ಯೆ ಇತ್ಯರ್ಥಕ್ಕೆ ಗಡುವುಕೊಟ್ಟ ಸರ್ಕಾರ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಫೆಬ್ರವರಿ 09; ರಾಮನಗರದ ಬಿಡದಿಯಲ್ಲಿರುವ ಟೊಯೋಟಾ ಕಾರು ತಯಾರಿಕಾ ಘಟಕದಲ್ಲಿ ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವೆ ಬಿಕ್ಕಟ್ಟು ಉಂಟಾಗಿದೆ. ಸರ್ಕಾರ ಸಮಸ್ಯೆ ಇತ್ಯರ್ಥ ಪಡಿಸಲು ಆಡಳಿತ ಮಂಡಳಿಗೆ ಎರಡು ದಿನಗಳ ಗಡುವು ನೀಡಿದೆ.

ಕಾರು ತಯಾರಿಕಾ ಘಟಕದ ಕಾರ್ಮಿಕರು 92 ದಿನಗಳಿಂದ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಈಗ ಕಾರ್ಖಾನೆಯ ಬಿಕ್ಕಟ್ಟು ಅಂತ್ಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ತ್ರಿಪಕ್ಷೀಯಾ ಸಭೆಯಲ್ಲಿ ಸರ್ಕಾರದ ಪ್ರತಿನಿಧಿಗಳು ಆಡಳಿತ ಮಂಡಳಿಗೆ ಸಮಸ್ಯೆ ಇತ್ಯರ್ಥಕ್ಕೆ ಎರಡು ದಿನಗಳ ಗಡುವು ನೀಡಿದ್ದಾರೆ.

ಕಾರ್ಮಿಕರ ಬಿಕ್ಕಟ್ಟು ಪರಿಹಾರಕ್ಕೆ ಒಂದು ದಿನ ಕೇಳಿದ ಟೊಯೋಟಾ ಕಾರ್ಮಿಕರ ಬಿಕ್ಕಟ್ಟು ಪರಿಹಾರಕ್ಕೆ ಒಂದು ದಿನ ಕೇಳಿದ ಟೊಯೋಟಾ

ಸರ್ಕಾರದ ಪ್ರತಿನಿಧಿಗಳು, ಟೊಯೋಟಾ ಕಾರ್ಮಿಕರು ಮತ್ತು ಟೊಯೋಟಾ ಆಡಳಿತ ಮಂಡಳಿಯ ನಡುವೆ ಬೆಂಗಳೂರಿನ ಖನಿಜ ಭವನದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಕಾರ್ಮಿಕರ ಮತ್ತು ಆಡಳಿತ ಮಂಡಳಿಯ ಸಮಸ್ಯೆ ಅಲಿಸಿದ ನಂತರ ಅಂತಿಮವಾಗಿ ಕಾರ್ಖಾನೆಯ ಆಡಳಿತ ಮಂಡಳಿಗೆ ಸಮಸ್ಯೆ ಇತ್ಯರ್ಥಕ್ಕೆ ಎರಡು ದಿನಗಳ ಗಡವು ನೀಡಲಾಯಿತು.

ಟೊಯೋಟಾ ಕಾರ್ಮಿಕರಿಗೆ ಶುಭ ಸುದ್ದಿ ನೀಡಿದ ಸಚಿವರು ಟೊಯೋಟಾ ಕಾರ್ಮಿಕರಿಗೆ ಶುಭ ಸುದ್ದಿ ನೀಡಿದ ಸಚಿವರು

Two Days Time To Resolve Toyota Workers Protest

ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ , ಬೆಂಗಳೂರು ಸಂಸದ ಡಿ. ಕೆ. ಸುರೇಶ್, ಮಾಗಡಿ ಶಾಸಕ ಎ. ಮಂಜುನಾಥ್ ಮತ್ತು ಎಂಎಲ್‌ಸಿ ಸಿ. ಎಂ. ಲಿಂಗಪ್ಪ ಸೇರಿದಂತೆ ಹಲವು ಉಪಸ್ಥಿತರಿದ್ದರು.

ಪ್ರತಿಭಟನೆ; ಟೊಯೋಟಾ ಕಾರ್ಮಿಕರನ್ನು ಭೇಟಿಯಾದ ಸಿದ್ದರಾಮಯ್ಯ ಪ್ರತಿಭಟನೆ; ಟೊಯೋಟಾ ಕಾರ್ಮಿಕರನ್ನು ಭೇಟಿಯಾದ ಸಿದ್ದರಾಮಯ್ಯ

ಕಳೆದ ವಾರ ವಿಧಾನಸಭೆ ಕಲಾಪದಲ್ಲಿ ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕ ಜಿ. ಕರುಣಾಕರ ರೆಡ್ಡಿ ಕಾರ್ಮಿಕರ ಪ್ರತಿಭಟನೆ ಬಗ್ಗೆ ವಿಷಯ ಪ್ರಸ್ತಾಪಿಸಿದ್ದರು. ಆಗ ಉತ್ತರ ನೀಡಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, "ಖುದ್ದಾಗಿ ನಾನು ಕಾರ್ಖಾನೆಗೆ ಭೇಟಿ ನೀಡಿ ವಿವಾದ ಇತ್ಯರ್ಥ ಮಾಡಲು ಪ್ರಯತ್ನ ನಡೆಸಿದ್ದೆ. ಬೆಂಗಳೂರಲ್ಲಿ ಸಭೆ ನಡೆಸಿದಾಗ ಕಾರ್ಮಿಕ ಮುಖಂಡರು ಹಾಜರಾಗಲಿರಲಿಲ್ಲ" ಎಂದು ಹೇಳಿದ್ದರು.

"3,415 ಕಾರ್ಮಿಕರ ಪೈಕಿ 1896 ಮಂದಿ ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ವಿವಾದವನ್ನು ಇತ್ಯರ್ಥಪಡಿಸುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಾಗುತ್ತದೆ" ಎಂದು ಸದನಕ್ಕೆ ಸಚಿವರು ಮಾಹಿತಿ ನೀಡಿದ್ದರು.

Recommended Video

ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಉದಯ-ವಿರೂಪಾಕ್ಷೇಶ್ವರನ ದರ್ಶನ ಪಡೆದ ಆನಂದ್ ಸಿಂಗ್ | Oneindia Kannada

ಬಳಿಕ ಸಚಿವರು ಬಿಡದಿಗೆ ಭೇಟಿ ನೀಡಿ ಆಡಳಿತ ಮಂಡಳಿ, ಕಾರ್ಮಿಕರ ಜೊತೆ ಪ್ರತ್ಯೇಕ ಸಭೆ ನಡೆಸಿದ್ದರು. ಈ ಸಭೆಯ ನಂತರ ಸೋಮವಾರ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿದೆ.

English summary
Karnataka government directed Toyota Kirloskar unit to resolve the problem in two days. Workers in Bidadi, Ramanagara protesting from past 92 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X