ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿರುದ್ಧ ವಿಶಿಷ್ಟ ಹೋರಾಟ

Posted By: ramesh ramakirshna
Subscribe to Oneindia Kannada

ರಾಮನಗರ, ಮಾರ್ಚ್ 10: ಕೇಂದ್ರ ಸರಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಮುಂದಾಗಿರುವ ಹಿನ್ನಲೆಯಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಖಾಲಿ ಬಿಂದಿಗೆ ಹಿಡಿದು ಶುಕ್ರವಾರ ಪ್ರತಿಭಟನೆ ನಡೆಸಿದರು.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದ ನೂರಾರು ಮಂದಿ ಪ್ರತಿಭಟನಾಕಾರರು ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿಯ ಚರ್ಚ್ ಸರ್ಕಲ್ ನಲ್ಲಿ ಖಾಲಿ ಕೊಡ ಹಿಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನಿರ್ವಹಣಾ ಮಂಡಳಿ: ನಾರಿಮನ್ ಸಲಹೆ ಪಡೆದು ಮುಂದಿನ ಹೆಜ್ಜೆ

ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ, ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಕಾಲ ಮಿತಿ ಹೇರಿಲ್ಲದಿದ್ದರೂ ಕೇಂದ್ರ ಸರ್ಕಾರ ಮಾತ್ರ ತ್ವರಿತವಾಗಿ ಮಂಡಳಿ ರಚನೆ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು.

Unique fight against the Cauvery Water Management Board in Ramanagara

"ಶುಕ್ರವಾರ ನವದೆಹಲಿಯಲ್ಲಿ ಕೇಂದ್ರ ಸರ್ಕಾರ ಕಾವೇರಿ ನದಿ ಪಾತ್ರದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಸಭೆ ಕರೆದಿದೆ. ಈ ಸಭೆಯಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಬಗ್ಗೆ ಒಪ್ಪಿಗೆ ಸಿಕ್ಕಿದರೆ ರಾಜ್ಯಕ್ಕೆ ಬಹುದೊಡ್ಡ ನಷ್ಟವಾಗಲಿದೆ. ರಾಜ್ಯದ ಎಲ್ಲಾ ಜಲಾಶಯಗಳ ಬೀಗ ಕೇಂದ್ರ ಸರ್ಕಾರದ ಕೈಸೇರಲಿದೆ," ಎಂದು ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್‌ಗೌಡ ಆತಂಕ ವ್ಯಕ್ತಪಡಿಸಿದ್ದಾರೆ.

Unique fight against the Cauvery Water Management Board in Ramanagara

ಈ ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಕೇಂದ್ರ ಸರ್ಕಾರಕ್ಕೆ ನಿರ್ವಹಣಾ ಮಂಡಳಿ ರಚನೆ ಮಾಡದಂತೆ ಮನವರಿಕೆ ಮಾಡಿಕೊಡಬೇಕೆಂದು ಅವರು ಒತ್ತಾಯಿಸಿದರು. ಹಾಗೇ ಒಂದು ವೇಳೆ ನಿರ್ವಹಣಾ ಮಂಡಳಿ ರಚನೆಯಾದರೆ ರಾಜ್ಯಾದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The activists of the Kasturi Karnataka Janapara Vedike protested on Friday against the formation of the Cauvery Water Management Board in Ramanagara district.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ