ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಕುಮಾರ ಶ್ರೀಗಳ 111 ಅಡಿ ಪುತ್ಥಳಿ ಶಂಕುಸ್ಥಾಪನೆಗೆ ಸಜ್ಜಾಗಿದೆ ವೀರಾಪುರ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ನವೆಂಬರ್ 7: ತ್ರಿವಿಧ ದಾಸೋಹದ ಮೂಲಕ ಸಾರ್ಥಕ 111 ವರ್ಷ ಪೂರೈಸಿದ, ತುಮಕೂರಿನ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಹುಟ್ಟೂರು ಕುದೂರು ಹೋಬಳಿಯಲ್ಲಿನ ವೀರಾಪುರದಲ್ಲಿ ನವೆಂಬರ್ 8, ಶುಕ್ರವಾರ ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ. ಶ್ರೀಗಳ 111 ಅಡಿ ಎತ್ತರದ ಬೃಹತ್ ಪ್ರತಿಮೆಗೆ ನಾಳೆ ಶಂಕುಸ್ಥಾಪನೆ ಕಾರ್ಯ ನೆರವೇರಲಿದೆ.

ಸಿಎಂ ಯಡಿಯೂರಪ್ಪನವರು ಶಂಕುಸ್ಥಾಪನೆ ನೆರವೇರಿಸಲಿದ್ದು, ಈಗಾಗಲೇ ವೀರಾಪುರದಲ್ಲಿ ಸಕಲ ರೀತಿಯಲ್ಲೂ ಸಿದ್ಧತೆ ನಡೆಯುತ್ತಿದೆ.

ರಾಮನಗರದಲ್ಲಿ ಶಿವಕುಮಾರ ಶ್ರೀಗಳ 111 ಅಡಿ ಪುತ್ಥಳಿ ನಿರ್ಮಾಣರಾಮನಗರದಲ್ಲಿ ಶಿವಕುಮಾರ ಶ್ರೀಗಳ 111 ಅಡಿ ಪುತ್ಥಳಿ ನಿರ್ಮಾಣ

Veerapura Is Ready For Shivakumar Swamiji Statue Foundation Function

ಕಳೆದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಶ್ರೀಗಳ ಹುಟ್ಟೂರನ್ನು ಸಾಂಸ್ಕೃತಿಕ ಹಾಗೂ ಪಾರಂಪರಿಕಾ ಗ್ರಾಮವಾಗಿ ಮಾಡಬೇಕೆಂದು ಚಿಂತನೆ ನಡೆಸಿ 25 ಕೋಟಿ ರೂಪಾಯಿ ಹಣವನ್ನು ಘೋಷಣೆ ಮಾಡಿತ್ತು. ಈಗ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಹಣ ಬಿಡುಗಡೆಯಾಗಿದ್ದು, ಶ್ರೀಗಳ 111 ಅಡಿ ಎತ್ತರದ ಬೃಹತ್ ಪ್ರತಿಮೆಯನ್ನು 16 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡುವುದಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಜೊತೆಗೆ ಉದ್ಯಾನವನ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಲು ಚಿಂತನೆ ನಡೆಸಿದೆ.

Veerapura Is Ready For Shivakumar Swamiji Statue Foundation Function

ಇಂದು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್ ಎ ಶೆಟ್ಟಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಶ್ರೀಗಳ ಪ್ರತಿಮೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಸರಿಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುತ್ತಾರೆಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ. 1 ಸಾವಿರಕ್ಕೂ ಹೆಚ್ಚು ಜನ ಪೊಲೀಸರು ಕಾರ್ಯಕ್ರಮಕ್ಕೆ ನಿಯೋಜನೆಗೊಂಡಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

English summary
The 111 feet high statue of Dr Shivakumar swamiji foundation function will be held in his hometown Veerapur on november 8,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X