ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತೊಟ್ಟಿಲು ತೂಗಿ ಅಳುತ್ತಿದ್ದ ಮಗು ಮಲಗಿಸಿದ ಬಸವಣ್ಣ, ವಿಡಿಯೋ ವೈರಲ್

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ನವೆಂಬರ್ 21: ಎತ್ತೊಂದು ತೊಟ್ಟಿಲನ್ನು ತೂಗುತ್ತಾ ಅಳುತ್ತಿರುವ ಮಗುವನ್ನು ಮಲಗಿಸುತ್ತಿರುವ ಅಚ್ಚರಿಯ ವಿಡಿಯೋವೊಂದು ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

ಪೊಳಲಿ ರಾಜರಾಜೇಶ್ವರಿ ದೇವಾಲಯದ ಧ್ವಜಸ್ತಂಭ ಪ್ರತಿಷ್ಠೆ ವೇಳೆ ಪವಾಡ!ಪೊಳಲಿ ರಾಜರಾಜೇಶ್ವರಿ ದೇವಾಲಯದ ಧ್ವಜಸ್ತಂಭ ಪ್ರತಿಷ್ಠೆ ವೇಳೆ ಪವಾಡ!

Recommended Video

Deepavali 2019 : ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸುವುದು ಯಾಕೆ? ಪಟಾಕಿಯಿಂದ ಎಷ್ಟೆಲ್ಲಾ ಮಾರಕ ಗೊತ್ತೆ?

ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Video Of An Ox Going Viral In Social Media

ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ ಇತಿಹಾಸವಿರುವ ಬಸವೇಶ್ವರ ದೇವಾಲಯದಲ್ಲಿ ಎರಡು ವರ್ಷಗಳ ಹಿಂದೆ ಈ ಬಸವನನ್ನು ಬಿಡಲಾಗಿತ್ತು. ಅಂದಿನಿಂದಲೂ ದೈವಿ ಸ್ವರೂಪಿ ಬಸಪ್ಪ ಎಂದೇ ಹೆಸರುವಾಸಿಯಾಗಿರುವ ಈ ಎತ್ತು ಹಲವು ಪವಾಡಗಳನ್ನು ಸೃಷ್ಟಿಸಿದ್ದು, ಜಮೀನು ವ್ಯಾಜ್ಯ, ದೇವಾಲಯಕ್ಕೆ ಪೂಜಾರಿಗಳನ್ನು ಗೊತ್ತು ಮಾಡುವುದು, ಭೀತಿ ಶಂಕೆ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಹೊರ ಜಿಲ್ಲೆಗಳಿಗೆ ತೆರಳಿ ತನ್ನ ಪವಾಡದಿಂದ ಸಮಸ್ಯೆಗಳನ್ನು ಪರಿಹರಿಸಿರುವುದಾಗಿ ಭಕ್ತರು ತಿಳಿಸುತ್ತಾರೆ.

Video Of An Ox Going Viral In Social Media

ಅಂತೆಯೇ ಡಣ್ಣಾಯಕನಪುರ ಗ್ರಾಮದಲ್ಲಿ ಕುಟುಂಬವೊಂದರ ಸಮಸ್ಯೆ ಪರಿಹರಿಸಲು ತೆರಳಿದ್ದ ಬಸಪ್ಪ ಅದೇ ಮನೆಯ ಮಗುವನ್ನು ತೊಟ್ಟಿಲು ತೂಗಿ ಮಲಗಿಸಿ ತನ್ನ ಕೊಂಬಿಗೆ ಕಟ್ಟಿದ್ದ ಹಣವನ್ನು ತೊಟ್ಟಿಲಿಗೆ ಹಾಕಿದೆ. ತೊಟ್ಟಿಲಿಗೆ ಹಾಕಿದ್ದ ಹಣವನ್ನು ವಾಪಸ್ಸು ಪಡೆಯದೇ ಅದೇ ಹಣದಲ್ಲಿ ಮಗುವಿಗೆ ಮೀಸಲಿಡುವಂತೆ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆಯಂತೆ.

English summary
video of an ox which make the baby sleep going viral everywhere
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X