ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಖಾಸಗಿ ಶಾಲೆಯ ಆನ್ಲೈನ್ ಕ್ಲಾಸ್ ಗೆ ಸೆಡ್ಡು ಹೊಡೆದ ಸರ್ಕಾರದ ವಿದ್ಯಾಗಮ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಆಗಸ್ಟ್ 20: ಕೊರೊನಾ ವೈರಸ್ ಭೀತಿಯಿಂದಾಗಿ ಶಾಲೆಗಳು ಇನ್ನೂ ಪ್ರಾರಂಭವಾಗಿಲ್ಲ. ಖಾಸಗಿ ಶಾಲೆಗಳು ಮಾತ್ರ ಆನ್ ಲೈನ್ ಕ್ಲಾಸ್ ಮೂಲಕ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಇನ್ನು ಗ್ರಾಮೀಣ ಮಟ್ಟದ ಸರ್ಕಾರಿ ಶಾಲೆಯ ಮಕ್ಕಳಿಗೆ ಅವರು ಇರುವಲ್ಲಿಗೆ ಶಿಕ್ಷಕರೇ ತೆರಳಿ ಪಾಠ ಮಾಡುವ ಸರ್ಕಾರದ ವಿದ್ಯಾಗಮ ಯೋಜನೆ ಖಾಸಗಿ ಶಾಲೆಯ ಆನ್ ಲೈನ್ ಕ್ಲಾಸ್ ಗೆ ಸೆಡ್ಡು ಹೊಡೆಯುವಂತಿದೆ.

Recommended Video

ಮತ್ತೆ ಸ್ವಚ್ಛ ನಗರ ಗೌರವ ಮುಡಿಗೆರಿಸಿಕೊಂಡ ಮೈಸೂರು! | Oneindia Kannada

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಶಿಕ್ಷಕರೇ ಮನೆ ಮನೆಗೆ ಹೋಗಿ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಪಾಠ ಹೇಳಿಕೊಡುತ್ತಿದ್ದು, ವಿದ್ಯಾಗಮ ಎಂಬ ವಿನೂತನ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ರೂಪಿಸಿದೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಬಂಧಿಸಿದ ರಾಮನಗರ ಪೊಲೀಸ್ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಬಂಧಿಸಿದ ರಾಮನಗರ ಪೊಲೀಸ್

ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಕರೇ ವಿದ್ಯಾರ್ಥಿಗಳು ಇರುವಲ್ಲಿಗೆ ತೆರಳಿ ಪಾಠ ಹೇಳಿಕೊಡುತ್ತಿದ್ದಾರೆ. ಜಗಲಿಕಟ್ಟೆ, ದೇವಸ್ಥಾನದ ಆವರಣ, ಮನೆಗಳ ಪಟಸಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನ ಕೇಂದ್ರಗಳಾಗಿವೆ.

Vidyagama Scheme Getting A Good Response In Ramanagara District

ಶಾಲೆಗಳು ಆರಂಭಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿನ ದೊಡ್ಡ ಪಡಸಾಲೆಗಳು, ದೇವಸ್ಥಾನದ ಆವರಣ, ಅರಳಿಕಟ್ಟೆಯಲ್ಲಿ ಮಕ್ಕಳನ್ನು ಕೂರಿಸಿಕೊಂಡು ಮಾಸ್ಕ್ ಹಾಕಿಸಿ, ಸಾಮಾಜಿಕ ಅಂತರ ಕಾಪಾಡುವ ಮೂಲಕ ಮಕ್ಕಳಿಗೆ ಬೋಧನೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ವಚ್ಛತೆ ಬಗ್ಗೆ ಹಾಗೂ ಕೊರೊನಾ ವೈರಸ್ ವಿರುದ್ಧ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ರಾಮನಗರ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆರಾಮನಗರ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

Vidyagama Scheme Getting A Good Response In Ramanagara District

ಕೊರೊನಾ ವೈರಸ್ ಎಫೆಕ್ಟ್ ನಿಂದ ಶಾಲೆಗಳು ಬಂದ್ ಮಾಡಿ ನಾಲ್ಕು ತಿಂಗಳು ಕಳೆದಿವೆ. ಮಕ್ಕಳ ಸ್ಥಿತಿ ಗತಿಯನ್ನು ಸುಧಾರಿಸುವಲ್ಲಿ ಶಿಕ್ಷಣ ಇಲಾಖೆಯು ರೂಪಿಸಿರುವ ವಿದ್ಯಾಗಮ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮಕ್ಕಳ ಭವಿಷ್ಯ ಹಾಗೂ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಅನುಕೂಲವಾಗಿದೆ.

Vidyagama Scheme Getting A Good Response In Ramanagara District

ಗ್ರಾಮೀಣ ಭಾಗದಿಂದ ಪಟ್ಟಣದ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ ಮಕ್ಕಳು ಗ್ರಾಮೀಣ ಬಾಗದ ನೆಟ್ ವರ್ಕ್, ವಿದ್ಯುತ್ ಮತ್ತು ಇನ್ನಿತರ ತಾಂತ್ರಿಕ ಸಮಸ್ಯೆಗಳು ಆನ್ ಲೈನ್ ಕ್ಲಾಸ್ ಗಳಿಂದ ವಂಚಿತರಾಗಿದ್ದ ಖಾಸಗಿ ಶಾಲೆಯ ಮಕ್ಕಳು ಕೂಡಾ ಇಲ್ಲಿ ಬಂದು ಪಾಠ ಕೇಳುತ್ತಿದ್ದಾರೆ ಎಂದು ಶಿಕ್ಷಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ .

English summary
In most of the villages of Channapatna taluk in Ramanagara district, teachers are going to Students home and teaching a lesson.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X