• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮನಗರದಲ್ಲಿ ಬಳ್ಳಾರಿ ಕಾರ್ಮಿಕರ ಕ್ವಾರಂಟೈನ್ ಗೆ ಸಿದ್ಧತೆ; ಗ್ರಾಮಸ್ಥರ ಪ್ರತಿಭಟನೆ

By ರಾಮನಗರ ಪ್ರತಿನಿಧಿ
|

ರಾಮನಗರ, ಮೇ 08: ರಾಮನಗರದಲ್ಲಿ ಬಳ್ಳಾರಿ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಸಿದ್ಧತೆ ನಡೆಸುತ್ತಿದ್ದ ಸಂಗತಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ರಾಮನಗರ ತಾಲ್ಲೂಕಿನ ಕೆಂಪೇಗೌಡನದೊಡ್ಡಿ ಗ್ರಾಮದ ದೇವರಾಜು ಅರಸು ವಸತಿ ನಿಲಯದಲ್ಲಿ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಆರೋಗ್ಯ ಇಲಾಖೆ ಮುಂದಾಗಿತ್ತು. ಆದರೆ ಈ ಸಂಗತಿ ತಿಳಿಯುತ್ತಿದ್ದಂತೆ ಕೆಂಪೇಗೌಡನದೊಡ್ಡಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಪಾದರಾಯನಪುರದಿಂದ ರಾಮನಗರಕ್ಕೆ ಕೈದಿಗಳನ್ನು ಸ್ಥಳಾಂತರಿಸಿದ್ದಾಗಲೂ ಜಿಲ್ಲೆಯಲ್ಲಿ ಆತಂಕ ಎದುರಾಗಿತ್ತು. ಇದೀಗ ಬಳ್ಳಾರಿ ಮೂಲದ 25ಕ್ಕೂ ಹೆಚ್ಚು ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಸಿದ್ಧತೆ ನಡೆಸುತ್ತಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ವಸತಿ ನಿಲಯ ಗ್ರಾಮದಲ್ಲೇ ಇರುವುದರಿಂದ ನಮ್ಮ ಗ್ರಾಮದವರಿಗೆ ಸಮಸ್ಯೆಯಾಗುತ್ತದೆ. ಯಾವುದೇ ಕಾರಣಕ್ಕೂ ಇಲ್ಲಿ ಕ್ವಾರಂಟೈನ್ ಮಾಡಬಾರದು ಎಂದು ಪಟ್ಟು ಹಿಡಿದಿದ್ದಾರೆ. ವಸತಿ ನಿಲಯದ ರಸ್ತೆ ತಡೆ ಹಿಡಿದು ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

English summary
District health department has arranged quarantine of 25 ballari workers in hostel. Kempegowdanadoddi of ramanagar villagers protested against it today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X