ಸ್ಮಶಾನಕ್ಕಾಗಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಶವವಿಟ್ಟು ಪ್ರತಿಭಟನೆ

ರಾಮನಗರ, ಅಕ್ಟೋಬರ್ 24: ಸ್ಮಶಾನಕ್ಕೆ ಜಾಗ ನೀಡುವಂತೆ ಆಗ್ರಹಿಸಿ ಅಂತ್ಯ ಸಂಸ್ಕಾರಕ್ಕೆ ತೆಗೆದುಕೊಂಡು ಹೋಗಬೇಕಿದ್ದ ಶವವನ್ನು ಹೊತ್ತು ತಂದ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂಭಾಗವಿಟ್ಟು ಪ್ರತಿಭಟನೆ ನಡೆಸಿದ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರ ತಾಲ್ಲೂಕಿನ ಸಿಂಗ್ರಭೋವಿದೊಡ್ಡಿ ಗ್ರಾಮದ ನರಸಮ್ಮ(70) ಮಂಗಳವಾರ ಬೆಳಿಗ್ಗೆ ಮೃತಪಟ್ಟಿದರು. ಆದರೆ ಮೃತ ದೇಹವನ್ನ ಅಂತ್ಯಸಂಸ್ಕಾರ ಮಾಡಲು ಸ್ಮಶಾನವಿಲ್ಲದೇ ಗ್ರಾಮಸ್ಥರು ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ.

Villagers protest with dead body for cemetery in-front of DC office in Ramanagara

ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಅಂತ್ಯ ಸಂಸ್ಕಾರಕ್ಕೆ ತೆಗೆದುಕೊಂಡು ಹೋಗುತ್ತಿದ್ದ ಶವವನ್ನ ನೇರವಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಹೊತ್ತು ತಂದಿದ್ದಾರೆ. ಅಲ್ಲದೇ ಕಚೇರಿ ಮುಂಭಾಗದಲ್ಲಿ ಶವವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಇನ್ನೂ ಗ್ರಾಮದಲ್ಲಿನ ಸ್ಮಶಾನದ ಜಾಗವನ್ನು ಈಗಾಗಲೇ ಬೆಂಗಳೂರು-ಮೈಸೂರು ಹೆದ್ದಾರಿಯ ಬೈಪಾಸ್ ರಸ್ತೆಗಾಗಿ ಭೂಸ್ವಾಧೀನ ಹೆಸರಲ್ಲಿ ವಶಪಡಿಸಿಕೊಳ್ಳಲಾಗಿದೆ. ಆದರೆ ಸ್ವಾಧೀನಪಡಿಸಿಕೊಂಡ ಸ್ಮಶಾನಕ್ಕೆ ಬದಲಾಗಿ ಬೇರೆಡೆ ಜಾಗ ನೀಡುವಂತಹ ಕೆಲಸವನ್ನು ಮಾಡಿಲ್ಲ.

ತಾತ್ಕಾಲಿಕವಾಗಿ ಶವ ಹೂಳಲು ಸಾರ್ವಜನಿಕರಿಗೆ ತಿಳಿಸಲಾಗಿತ್ತು. ಆನಂತರ ಜಾಗ ನೀಡುವುದಾಗಿ ತಿಳಿಸಿದ್ದರು. ಅದರೆ ಸ್ಮಶಾನಕ್ಕಾಗಿ ಹಲವಾರು ಬಾರಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಕ್ಕೆ ಮನವಿ ಮಾಡಿದರೂ ಅಧಿಕಾರಿಗಳು ಯಾವುದಕ್ಕೂ ಸ್ಪಂದಿಸಿರಲಿಲ್ಲ.

Villagers protest with dead body for cemetery in-front of DC office in Ramanagara

ಇದರಿಂದ ಬೇಸತ್ತ ಗ್ರಾಮಸ್ಥರು ಶವವನ್ನ ನೇರವಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ತಂದು, ಜಿಲ್ಲಾಧಿಕಾರಿ ಕಚೇರಿ ಗೇಟ್ ಮುಂಭಾಗ ಶವವನ್ನಿಟ್ಟು ಸ್ಮಶಾನದ ಜಮೀನು ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ನಂತರ ಸ್ಥಳಕ್ಕೆ ಭೇಟಿ ನೀಡಿದ ಅಪರ ಜಿಲ್ಲಾಧಿಕಾರಿ ಪ್ರಶಾಂತ್ ಗ್ರಾಮಸ್ಥರನ್ನ ಸಮಾಧಾನಪಡಿಸಿ ಕೂಡಲೇ ಸ್ಮಶಾನಕ್ಕೆ ಸೂಕ್ತ ಜಾಗವನ್ನು ಗುರುತಿಸಿ ನೀಡಲಾಗುವುದು ಎಂದು ತಿಳಿಸಿದರು. ಬಳಿಕ ಪ್ರತಿಭಟನೆ ಕೈ ಬಿಟ್ಟು ಗ್ರಾಮಸ್ಥರು ಶವದೂಂದಿಗೆ ಗ್ರಾಮಕ್ಕೆ ತೆರಳಿ ಖಾಸಗಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+