Bengaluru-Mysuru expressway: ಮೋದಿಯವರು ಮಾಡಿದ್ದು ರಸ್ತೆ ಲೋಕಾರ್ಪಣೆಯೋ ಅಥವಾ ಟೋಲಾರ್ಪಣೆಯೋ?: ನಿಖಿಲ್‌ ಪ್ರಶ್ನೆ

ನರೇಂದ್ರ ಮೋದಿಯವರು ಮಾಡಿದ್ದು ಬೆಂಗಳೂರು-ಮೈಸೂರು ಹೆದ್ದಾರಿ ಲೋಕಾರ್ಪಣೆಯೋ ಅಥವಾ ಟೋಲಾರ್ಪಣೆಯೋ ಎಂದು ನಿಖಿಲ್‌ ಕುಮಾರಸ್ವಾಮಿ ವ್ಯಂಗ್ಯವಾಡಿದರು.

ರಾಮನಗರ, ಮಾರ್ಚ್‌, 16: ಬೆಂಗಳೂರು-ಮೈಸೂರು ಹೆದ್ದಾರಿಯ ಅನಧಿಕೃತ ಟೋಲ್ ಸಂಗ್ರಹಣೆ ವಿರೋಧಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮೋದಿಯವರು ಮಾಡಿದ್ದು ರಸ್ತೆ ಲೋಕಾರ್ಪಣೆಯೋ ಅಥವಾ ಟೋಲಾರ್ಪಣೆಯೋ ಎಂದು ವ್ಯಂಗ್ಯವಾಡಿದರು.

ಇತ್ತೀಚೆಗಷ್ಟೇ ನರೇಂದ್ರ ಮೋದಿಯವರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಅನ್ನು ಉದ್ಘಾಟನೆ ಮಾಡಿದ್ದರು. ಇದೀಗ ಇದೇ ಹೆದ್ದಾರಿಯ ಟೋಲ್‌ ಸಂಗ್ರಹವನ್ನು ವಿರೋಧಿಸಿ ಜೆಡಿಎಸ್‌ ಕಾರ್ಯಕರ್ತರು ಕಣಮಿಣಿಕಿ ಟೋಲ್‌ ಬಳಿ ಪ್ರತಿಭಟನೆ ಮಾಡಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ,ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದು ರಸ್ತೆ ಲೋಕಾರ್ಪಣೆಯೋ ಅಥವಾ ಟೋಲಾರ್ಪಣೆಯೋ ಎಂದು ಹೇಳುವ ಮೂಲಕ ವ್ಯಂಗ್ಯವಾಡಿದರು.

What did say Nikhil Kumaraswamy about Bengaluru-Mysuru Expressway inauguration?

ಮೂಲಭೂತ ಸೌಕರ್ಯವನ್ನೂ ಕಲ್ಪಿಸಿಲ್ಲ

ನಾವು ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಕೆಲಸವನ್ನು ಮಾಡುತ್ತಿದ್ದೇವೆ. ಗರ್ಭಿಣಿ ಸ್ತ್ರೀಯರಿಗೆ ಪ್ರೈಮರಿ ಹೆಲ್ತ್ ಕೇರ್ ಸೆಂಟರ್ ಇಲ್ಲ, ಆ್ಯಂಬುಲೆನ್ಸ್​ ವ್ಯವಸ್ಥೆ ಇಲ್ಲ. ಹೀಗೆ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಇಲ್ಲಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಇಲ್ಲಿ ಯಾವುದೇ ಮೂಲಭೂತ ಸೌಕರ್ಯವನ್ನೂ ಕಲ್ಪಿಸಿಲ್ಲ. ಟೋಲ್ ಬಳಿ ಪೂರಕವಾದ ಹೋಟೆಲ್ , ಶೌಚಾಲಯ, ಆಸ್ಪತ್ರೆಗಳಿಗೆ ಸ್ಥಳಾವಕಾಶವೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನಧೀಕೃತ ಟೋಲ್ ಸಂಗ್ರಹ

ಇದು ಅನಧೀಕೃತ ಟೋಲ್ ಸಂಗ್ರಹ ಕೇಂದ್ರವಾಗಿದ್ದು, ಪ್ರಯಾಣಿಕರಿಂದಲೂ ನಿಗದಿತ ದರಕ್ಕಿಂತ ಹೆಚ್ಚುವರಿ ಸುಂಕ ವಸೂಲಿ ಮಾಡಿ ಅನ್ಯಾಯವೆಸಗಲಾಗುತ್ತಿದೆ. ಆದ್ದರಿಂದ ನಾವು ಸಾರ್ವಜನಿಕರ ಧ್ವನಿಯಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಮಾಗಡಿ ಶಾಸಕ ಎ.ಮಂಜುನಾಥ್ ಮಾತನಾಡಿ, ಅವೈಜ್ಞಾನಿಕ ರಸ್ತೆ ನಿರ್ಮಿಸಿ ಅನಿಯಮಿತ ಟೋಲ್ ಸಂಗ್ರಹದ ಹೆಸರಲ್ಲೇ ಹಗಲು ದರೋಡೆ ಮಾಡುತ್ತಿದ್ದಾರೆ. ಅಲ್ಲದೆ ಇದನ್ನು ಪ್ರತಾಪ್ ಸಿಂಹ ಅವರು ಸಮರ್ಥಿಕೊಳ್ಳುತ್ತಿದ್ದಾರೆ. ಇದು ಅವರಿಗೆ ಅವಿವೇಕದ ಪರಮಾವದಿಯಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದೇ ಸಂದರ್ಭದಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

What did say Nikhil Kumaraswamy about Bengaluru-Mysuru Expressway inauguration?

ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ 200ಕ್ಕೂ ಹೆಚ್ಚು ಪೋಲಿಸರನ್ನು ನಿಯೋಜನೆ ಮಾಡಲಾಯಿತು. ಸ್ಥಳದಲ್ಲಿ ಕೆಲ ಕ್ಷಣಗಳ ಕಾಲ ಆತಂಕದ ವಾತಾವರಣ ನಿಮರ್ಮಾಣವಾಗಿದ್ದು, ಪೋಲೀಸರ ತಕ್ಷಣ ಮದ್ಯಪ್ರವೇಶ ಮಾಡಿದ್ದರಿಂದ ಪರಿಸ್ಥಿತಿ ತಿಳಿಯಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+