ಡಿಕೆಶಿಗೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಿಸುವುದು ಸವಾಲು, ಏಕೆ?
ಬೆಂಗಳೂರು, ಜೂನ್ 25: ಲೋಕಸಭೆ ಚುನಾವಣೆ 2024ರ ಬಳಿಕ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಕುತೂಹಲಕ್ಕೆ ಕಾರಣವಾಗಿದೆ. ಎಚ್. ಡಿ. ಕುಮಾರಸ್ವಾಮಿ, ಡಿ. ಕೆ. ಶಿವಕುಮಾರ್‌ಗೆ ಚನ್ನಪಟ್ಟಣ ಪ್ರತಿಷ್ಠೆಯಾಗಿದೆ.
ಚನ್ನಪಟ್ಟಣದ ಶಾಸಕರಾಗಿದ್ದ ಎಚ್. ಡಿ. ಕುಮಾರಸ್ವಾಮಿ ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದರು. ಚುನಾವಣೆಯಲ್ಲಿ ಗೆದ್ದ ಬಳಿಕ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಉಪ ಚುನಾವಣೆ ನಡೆಯಬೇಕಿದೆ.

ಮುಂಬರುವ ಚನ್ನಪಟ್ಟಣ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಎಲ್ಲರ ಪ್ರಶ್ನೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಿ. ಪಿ. ಯೋಗೀಶ್ವರ್ ಕಣಕ್ಕಳಿಯಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಡಿ. ಕೆ. ಶಿವಕುಮಾರ್ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗಳಿಸಿದ್ದೇನು?; ರಾಮನಗರ ಜಿಲ್ಲೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಇಬ್ಬರಿಗೂ ತವರು ಜಿಲ್ಲೆಯ. ಚನ್ನಪಟ್ಟಣ ಎಚ್. ಡಿ. ಕುಮಾರಸ್ವಾಮಿ ತವರು ಕ್ಷೇತ್ರ. ಆದರೆ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ.
2004ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿ. ಪಿ. ಯೋಗೀಶ್ವರ 64,162 ಮತಗಳನ್ನು ಪಡೆದು ಜಯಗಳಿಸಿದ್ದರು. 2008ರ ಚುನಾವಣೆಯಲ್ಲಿ ಪುನಃ ಯೋಗೀಶ್ವರ 69,356 ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾದರು.
ಆದರೆ 2013ರ ಚುನಾವಣೆಯಲ್ಲಿ ಯೋಗೀಶ್ವರ ಸಮಾಜವಾದಿ ಅಭ್ಯರ್ಥಿಯಾಗಿ ಕಣಕ್ಕಿಳಿದರು. 80,099 ಮತಗಳನ್ನು ಪಡೆದು ಜಯಗಳಿಸಿದ ಅವರು ಕಾಂಗ್ರೆಸ್‌ನ ಸಾದರ್ ಅಲಿ ಖಾನ್ (8,134), ಜೆಡಿಎಸ್‌ನ ಅನಿತಾ ಕುಮಾರಸ್ವಾಮಿ (73,635 ಮತ) ಸೋಲಿಸಿದರು.
2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದ ಯೋಗೀಶ್ವರ್ 66,465 ಮತಗಳನ್ನು ಪಡೆದು ಸೋತರು. ಜೆಡಿಎಸ್‌ನ ಎಚ್. ಡಿ. ಕುಮಾರಸ್ವಾಮಿ 87,995 ಮತಗಳನ್ನು ಪಡೆದು ಗೆದ್ದರು. ಕಾಂಗ್ರೆಸ್‌ನ ಎಚ್. ಎಂ. ರೇವಣ್ಣ 30,208 ಮತಗಳನ್ನು ಪಡೆದು ಸೋಲು ಕಂಡರು.
2023ರ ಚುನಾವಣೆಯಲ್ಲಿ ಯೋಗೀಶ್ವರ ಬಿಜೆಪಿ ಅಭ್ಯರ್ಥಿಯಾಗಿ 80,677 ಮತಗಳನ್ನು ಪಡೆದು ಸೋತರು. ಜೆಡಿಎಸ್‌ನ ಎಚ್. ಡಿ. ಕುಮಾರಸ್ವಾಮಿ 96,592 ಮತಗಳನ್ನು ಪಡೆದು ಜಯಗಳಿಸಿದರು. ಕಾಂಗ್ರೆಸ್‌ನ ಗಂಗಾಧರ್ 15,374 ಮತಗಳನ್ನು ಮಾತ್ರ ಪಡೆದರು.
ಚನ್ನಪಟ್ಟಣದಲ್ಲಿ ಸಿ. ಪಿ. ಯೋಗೀಶ್ವರ ಪಕ್ಷಕ್ಕಿಂತ ವೈಯಕ್ತಿಕ ವರ್ಚಸ್ಸು ಹೊಂದಿದ್ದಾರೆ. ಆದ್ದರಿಂದ ಈ ಬಾರಿಯ ಉಪ ಚುನಾವಣೆಯಲ್ಲಿ ಅವರು ಅಭ್ಯರ್ಥಿಯಾದರೆ ಗೆಲುವು ಖಚಿತ ಎಂಬುದು ಸುದ್ದಿ. ಅವರು ಮೈತ್ರಿಕೂಟದ ಅಭ್ಯರ್ಥಿಯಾದರೆ ಕ್ಷೇತ್ರದ ಜೆಡಿಎಸ್‌ನ ಪ್ರಭಾವವೂ ಅವರಿಗೆ ಸಿಗಲಿದ್ದು, ಚುನಾವಣೆಯಲ್ಲಿ ಅನುಕೂಲವಾಗಲಿದೆ.
ಕಾಂಗ್ರೆಸ್ ಕಳೆದ ಮೂರು ಚುನಾವಣೆಗಳಿಂದ ಚನ್ನಪಟ್ಟಣದಲ್ಲಿ ಪ್ರಭಾವ ಕಳೆದುಕೊಂಡಿದೆ. ಈಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಡಿ. ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ. ಆದ್ದರಿಂದ ಚನ್ನಪಟ್ಟಣದಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಅವರು ಪಣ ತೊಟ್ಟಿದ್ದಾರೆ.
ಯೋಗೀಶ್ವರ ಹಾಲಿ ವಿಧಾನ ಪರಿಷತ್ ಸದಸ್ಯರು. ಬಿಜೆಪಿಯಿಂದ ಅವರು ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದು, 2026ರ ತನಕ ಅವಧಿ ಇದೆ. ಈಗ ಅವರು ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕಾದರೆ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications