ಕೋವಿಡ್ ಸೋಂಕಿನಿಂದ ಪತಿ ಸಾವು: ಮನನೊಂದ ಪತ್ನಿ ಆತ್ಮಹತ್ಯೆ!
ರಾಮನಗರ, ಮೇ 21: ಪ್ರೀತಿಸಿ ಮದುವೆಯಾದ ಪತಿ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದರಿಂದ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಕನಕಪುರದಲ್ಲಿ ನಡೆದಿದೆ.
ಪತಿಯ ಅಗಲಿಕೆಯಿಂದ ಮನನೊಂದು ನೇಣಿಗೆ ಕೊರಳೊಡ್ಡಿದ ಬೆಸ್ಕಾಂ ವಿಭಾಗೀಯ ಕಚೇರಿಯಲ್ಲಿ ಸಹಾಯಕಿಯಾಗಿದ್ದ ನಂದಿನಿ (28) ಮೂರು ತಿಂಗಳ ಗರ್ಭಿಣಿಯಾಗಿದ್ದು, ಗುರುವಾರ ಮಧ್ಯಾಹ್ನ ಪ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಳೆದ ಕೆಲ ದಿನಗಳ ಹಿಂದೆ ಮೃತ ನಂದಿನಿಯ ಅತ್ತೆಗೆ ಕೊರೊನಾ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು. ತಾಯಿಯ ಸಂಪರ್ಕದಲ್ಲಿ ಸತೀಶ್ ನಾಲ್ಕು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದರು. ಇದರಿಂದ ಮನನೊಂದಿದ್ದ ನಂದಿನಿ ಖಿನ್ನತೆಗೆ ಒಳಗಾಗಿದ್ದರು.

ಮೃತ ನಂದಿನಿಯ ತಂದೆ ಶಾಂತಮಲ್ಲಪ್ಪ ಅವರು ಕೆಇಬಿಯಲ್ಲಿ ಲೈನ್‌ಮನ್ ಆಗಿದ್ದು, ಕೆಲಸದಲ್ಲಿ ಇರುವಾಗಲೇ ತೀರಿಕೊಂಡ ಹಿನ್ನೆಲೆಯಲ್ಲಿ ಅನುಕಂಪದ ಆಧಾರದ ಮೇಲೆ ನಂದಿನಿ ಅವರಿಗೆ 3 ವರ್ಷಗಳ ಹಿಂದೆ ಬೆಸ್ಕಾಂನಲ್ಲಿ ತಂದೆಯ ಕೆಲಸ ಸಿಕ್ಕಿತ್ತು.
ಕಳೆದ ಎರಡು ವರ್ಷದ ಹಿಂದೆ ಮೈಸೂರು ಮೂಲದ ಉದ್ಯಮಿ ಸತೀಶ್ ಎಂಬುವರನ್ನು ಪ್ರೀತಿಸಿ ವಿವಾಹವಾಗಿದ್ದರು. ಕನಕಪುರದ ಬಸವೇಶ್ವರ ನಗರದಲ್ಲಿ ಮನೆ ಮಾಡಿಕೊಂಡು ನಂದಿನಿ ಮತ್ತು ಸತೀಶ್ ದಂಪತಿ ನೆಲೆಸಿದ್ದರು. ಇನ್ನು ಸತೀಶ್ ತಾಯಿ ಮೈಸೂರಿನಲ್ಲಿ ನೆಲೆಸಿದ್ದರು.
Recommended Video
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications