ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಎರಡು ಕಣ್ಣು'ಗಳಿಗೆ 2 ಸಾವಿರ ಕೋಟಿ ಕೊಡುವುದಾಗಿ ಘೋಷಿಸಿದ ಎಚ್ ಡಿಕೆ

By ರಾಮನಗರ ಪ್ರತಿನಿಧಿ
|
Google Oneindia Kannada News

Recommended Video

'ಎರಡು ಕಣ್ಣು'ಗಳಿಗೆ 2 ಸಾವಿರ ಕೋಟಿ ಕೊಡುವುದಾಗಿ ಘೋಷಿಸಿದ ಎಚ್ ಡಿಕೆ | Oneindia kannada

ರಾಮನಗರ, ಜುಲೈ 23: ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರಗಳು ನನಗೆ ಎರಡು ಕಣ್ಣು. ಈ ಎರಡು ಕ್ಷೇತ್ರದ ಅಭಿವೃದ್ಧಿಗೆ ಈ ವರ್ಷ ಎರಡು ಸಾವಿರ ಕೋಟಿ ಖರ್ಚು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ ನಗರೋತ್ಥಾನ ಯೋಜನೆಯ ಮೂವತ್ತು ಕೋಟಿ ಮೌಲ್ಯದ ಕಾಮಗಾರಿಗಳಿಗೆ ತಮ್ಮ ಪತ್ನಿ ಅನಿತಾ ಅವರೊಂದಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರದ ಜನತೆ ಋಣ ನನ್ನ ಮೇಲೆ ಇದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ನನ್ನ ಗುರಿ ಎಂದರು.

ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಉಚಿತ ಬಸ್‌ಪಾಸ್‌: ಕುಮಾರಸ್ವಾಮಿಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಉಚಿತ ಬಸ್‌ಪಾಸ್‌: ಕುಮಾರಸ್ವಾಮಿ

ರಾಮನಗರ ಮತ್ತು ಚನ್ನಪಟ್ಟಣವನ್ನು ಅವಳಿ ನಗರವನ್ನಾಗಿ ಘೋಷಣೆ ಮಾಡಿ, ದಿನದ ಇಪ್ಪತ್ನಾಲ್ಕು ಗಂಟೆ ಕುಡಿಯುವ ನೀರು ಒದಗಿಸಲಾಗುವುದು. ರಾಮನಗರ - ಚನ್ನಪಟ್ಟಣ ಹೆದ್ದಾರಿ ಮಧ್ಯ ಐನೂರು ಎಕರೆ ಪ್ರದೇಶದಲ್ಲಿ ರೇಷ್ಮೆ ಸೂಪರ್ ಮಾರುಕಟ್ಟೆ ನಿರ್ಮಾಣ ಮಾಡಿ, ರೈತರಿಗೆ ಅನುಕೊಲ ಕಲ್ಪಿಸುತ್ತೇನೆ ಎಂದು ತಿಳಿಸಿದರು.

Will spend 2 thousand crore to Ramanagara and Channapatna

ಹಾಲು ಉತ್ಪಾದಕರಿಗೆ ಸಹಾಯ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ನೂತನವಾಗಿ ಐದು ಮೆಗಾ ಡೇರಿ ಸ್ಥಾಪನೆ ಮಾಡಲಾಗುವುದು. ಈ ಸಂಬಂಧ ಕೇಂದ್ರ ಸಚಿವರೊಂದಿಗೆ ಮಾತುಕತೆ ಆಗಿದೆ ಎಂದರು.

ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ ಸೆಪ್ಟೆಂಬರ್‌ ವರೆಗೆ ಬಿಡಬೇಕಿದ್ದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲಾಗಿದೆ. ಸದ್ಯಕ್ಕೆ ಕಾವೇರಿ ನೀರಿನ ಹಂಚಿಕೆ ವಿರುದ್ದ ನಮಗೂ ತಮಿಳುನಾಡಿಗೆ ಆಗುವ ಸಂಘರ್ಷ ಈ ವರ್ಷ ತಪ್ಪಿದೆ ಎಂದು ಹೇಳಿದರು.

ಈ ಕಾರ್ಯಕ್ರಮದ ನಂತರ ಅನಿತಾ ಅವರ ಸಮೇತರಾಗಿ ದೇವರಹೊಸಳ್ಳಿ ಗ್ರಾಮದಲ್ಲಿರುವ ಸಂಜೀವರಾಯ ಸ್ವಾಮಿ ದೇವಾಲಯಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ಗ್ರಾಮಸ್ಥರ ಬೇಡಿಕೆಯಾದ ಸಮುದಾಯ ಭವನ ನಿರ್ಮಿಸಿಕೊಡುವುದಾಗಿ ತಿಳಿಸಿದರು.

English summary
I will spend 2 thousand crore to Ramanagara and Channapatna, said chief minister and Channapatna MLA HD Kumarasamy on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X