ರಾಮನಗರದಲ್ಲಿ ಗಾಂಜಾ ಮಾರುತ್ತಿದ್ದ ಮಹಿಳೆಯ ಬಂಧನ
ರಾಮನಗರ, ಜನವರಿ 26: ಗಾಂಜಾ ಸೊಪ್ಪು ಅಕ್ರಮವಾಗಿ ಬೆಳೆಯುವುದು ಮತ್ತು ಮಾರಾಟ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಿದ್ದರೂ, ಮತ್ತೆ ಗಾಂಜಾ ಮಾರಾಟ ಜಾಲ ಪತ್ತೆಯಾಗಿದೆ.
ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮಹಿಳೆಯನ್ನು ಬಂಧಸಿ ಗಾಂಜಾ ಸೊಪ್ಪು ವಶಪಡಿಸಿಕೊಂಡಿರುವ ಘಟನೆ ರಾಮನಗರ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ರಾಮನಗರದ ಹುಣಸನಹಳ್ಳಿ ರಸ್ತೆಯ ಕೆಇಬಿ ಪ್ಲಾಟ್ ಪಕ್ಕದ ಕಾಂಪೌಂಡ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನಗರ ಪೊಲೀಸ್ ಠಾಣೆಯ ಪೊಲೀಸರು, ಗಾಂಜಾ ಮಾರುತ್ತಿದ್ದ ಉಸ್ನಾನ ಬಾನು (32) ಮತ್ತು ವಾಸೀಂ ಅಕ್ರಂ (26) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು 820 ಗ್ರಾಂ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳ ವಿರುದ್ಧ ಎನ್ಡಿಪಿಎಸ್ (NDPS) ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.











Click it and Unblock the Notifications