ಬೈಕ್‌ಗೆ ಡಿಕ್ಕಿಯಾದ ರಾಮನಗರ ನಗರಸಭೆ ಆಯುಕ್ತರ ಕಾರು: ಮಹಿಳೆ ಸಾವು

ರಾಮನಗರ, ಆಗಸ್ಟ್‌ 08: ಬೈಕ್‌ಗೆ ಹಿಂಬದಿಯಿಂದ ಕಾರು ಗುದ್ದಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲಾಧಿಕಾರಿಗಳ ಸಂಕಿರ್ಣದ ಮುಂಭಾಗದಲ್ಲಿ ನಡೆದಿದೆ. ಬೈಕ್‌ನಲ್ಲಿ‌ ತೆರಳುತ್ತಿದ್ದ ಮಹಿಳೆ ಸಿದ್ದಿಕ್ ಅಂಜುಮ್ (22) ಮೃತ ದುರ್ದೈವಿ.

ರಾಮನಗರ ನಗರಸಭೆ ಆಯುಕ್ತ ನಾಗೇಶ್ ಚಾಲಾಯಿಸುತ್ತಿದ್ದ ಕಾರು ಬೆಂಗಳೂರಿನಿಂದ ಮೈಸೂರು ಕಡೆ ಹೋಗುತ್ತಿದ್ದ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್‌ನಲ್ಲಿದ್ದ ಮತ್ತೋರ್ವರ ಸ್ಥಿತಿ ಗಂಭೀರವಾಗಿದೆ. ಸದ್ಯ ಗಾಯಾಳುವನ್ನು ರಾಮನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಮೃತದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ.

Woman Dies In Bike And Car Collision At Ramanagara

ಘಟನೆ ಸಂಬಂಧ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನಗರಸಭೆ ಆಯುಕ್ತ ನಾಗೇಶ್ ಕಾರು ವಶಕ್ಕೆ ಪಡೆದಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದ ಕಾರು: ಮಹಿಳೆ ಸ್ಥಳದಲ್ಲೇ ದಾರುಣ ಸಾವು

ಇನ್ನು ರಾಮನಗರದಲ್ಲಿ ಅಪಘಾತಗಳು ಹೆಚ್ಚುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಐ-20 ಕಾರು ರಸ್ತೆಯ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮ್ಮಣ್ಣನದೊಡ್ಡಿ ಬಳಿಯ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ.

ಘಟನೆಯಲ್ಲಿ ಮಂಜುಳಾ ಎನ್ನುವವರು ಮೃತಪಟ್ಟಿದ್ದು, ಕಾರು ಓಡಿಸುತ್ತಿದ್ದ ಮಂಜುಳಾ ಪತಿ ಕೃಷ್ಣಮೂರ್ತಿಗೆ ಗಂಭೀರ ಗಾಯಗಳಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತಕ್ಕೊಳಗಾದ ದಂಪತಿ ರಾಮನಗರ ತಾಲೂಕಿನ ತಿಬ್ಬೇಗೌಡನದೊಡ್ಡಿ ಗ್ರಾಮದವರು ಎಂದು ತಿಳಿದು ಬಂದಿದೆ.

ಇನ್ನು ಅಪಘಾತದಲ್ಲಿ ಮೃತಪಟ್ಟ ಕೃಷ್ಣಮೂರ್ತಿ ಅವರ ಪತ್ನಿ ಮಂಜುಳಾ ಮರಣೋತ್ತರ ಪರೀಕ್ಷೆ ರಾಮನಗರದ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ನಡೆದಿದೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+