ಮುಡಾ ಹಗರಣ ಪಾದಯಾತ್ರೆ ವೇಳೆ ಹೃದಯಾಘಾತದಿಂದ ಮಹಿಳೆ ಸಾವು!
ರಾಮನಗರ ಆಗಸ್ಟ್ 5: ಮುಡಾ ಹಗರಣ ವಿರೋಧಿಸಿ ಜೆಡಿಎಸ್- ಬಿಜೆಪಿ ನಡೆಸುತ್ತಿರುವ ಜಂಟಿ ಪಾದಯಾತ್ರೆಯಲ್ಲಿ ಜೆಡಿಎಸ್ ಕಾರ್ಯಕರ್ತೆ ಬೆಂಗಳೂರು ಮೂಲದ ಗೌರಮ್ಮ ಎಂಬಾಕೆ ಹೃದಾಯಘಾತದಿಂದ ಸಾವನ್ನಪ್ಪಿದ್ದಾರೆ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ಮೃತರ ಅಂತಿಮ ದರ್ಶನವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಡೆದುಕೊಂಡಿದ್ದಾರೆ.
ಇದೇ ವೇಳೆ ಮತ್ತೊಬ್ಬ ಪಾದಯಾತ್ರಿ ಸಹ ವಾಂತಿ ಮಾಡಿಕೊಂಡು ಆಸ್ವಸ್ಥರಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚನ್ನಪಟ್ಟ್ಣದಲ್ಲಿ ಪಾದಯಾತ್ರೆ ವೇಳೆ ಬಿಜೆಪಿ ಮುಖಂಡರೊಬ್ಬರು ಅಸ್ವಸ್ಥಗೊಂಡಿದ್ದರು.

ಬೆಂಗಳೂರಿನ ಜಯನಗರದ ಮಂಡಳ ಉಪಾಧ್ಯಕ್ಷ ಶಂಕರ್ ಅವರು ಪಾದಯಾತ್ರೆ ಮಾಡುವ ಸಂದರ್ಭದಲ್ಲಿ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಂಬುಲೆನ್ಸ್ ಮೂಲಕ ರಾಮನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಬಿ.ವೈ.ವಿಜಯೇಂದ್ರ ಮತ್ತು ಬಿಜೆಪಿ ಶಾಸಕರಾದ ಸಿಕೆ ರಾಮಮೂರ್ತಿ ಹಾಗೂ ರವಿಸುಬ್ರಹ್ಮಣ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಶಂಕರ್ ಅವರ ಆರೋಗ್ಯ ವಿಚಾರಿಸಿದರು.












Click it and Unblock the Notifications