ಕಾರ್ಖಾನೆಯಲ್ಲಿ ಆಸಿಡ್ ಬಿದ್ದು ಗಾಯಗೊಂಡಿದ್ದ ಕಾರ್ಮಿಕ ಸಾವು
ಕನಕಪುರ, ಜನವರಿ 10: ಕನಕಪುರದ ಮೆಗಾ ಡೈರಿಯಲ್ಲಿ ಐದು ದಿನಗಳ ಹಿಂದೆ ರಾಸಾಯನಿಕ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕ ಚಿಕಿತ್ಸೆ ಫಲಿಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ತಾಲ್ಲೂಕಿನ ಶಿವನಹಳ್ಳಿ ಬಳಿ ನೂತನ ಮೆಗಾ ಡೈರಿಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ನಲ್ಲಹಳ್ಳಿ ಗ್ರಾಮದ ವಾಸಿ ಮೋಹನ್ (21) ಮೃತ ಕಾರ್ಮಿಕ. ಇದೇ ಜನವರಿ 5ರಂದು ಹಾಲಿನ ಟ್ಯಾಂಕ್ ಸ್ವಚ್ಛ ಮಾಡುವ ವೇಳೆ ರಾಸಾಯನಿಕ ಮಿಶ್ರಿತ ಆಸಿಡ್ ಬಿದ್ದು ಮೋಹನ್ ಗಂಭೀರವಾಗಿ ಗಾಯಗೊಂಡಿದ್ದ. ಆಸಿಡ್ ನಿಂದ ಸುಟ್ಟ ಗಾಯಗಳಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮೆಗಾ ಡೈರಿಯಲ್ಲಿ ಸೂಕ್ತ ಭದ್ರತೆ ಇಲ್ಲ, ಮೋಹನ್ ಸಾವಿಗೆ ಡೈರಿ ಆಡಳಿತ ಮಂಡಳಿಯೇ ಕಾರಣ ಎಂದು ಆರೋಪಿಸಿ ಕಾರ್ಮಿಕರು ಕಾರ್ಖಾನೆ ಮುಂದೆ ಮೌನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications