ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನಕಪುರದ ಜನರಿಗೆ ಶಾಸಕ ಡಿ. ಕೆ. ಶಿವಕುಮಾರ್ ಪತ್ರ

|
Google Oneindia Kannada News

ರಾಮನಗರ, ಜನವರಿ 12 : ರಾಮನಗರದ ಕಪಾಲಿ ಬೆಟ್ಟದಲ್ಲಿ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರತಿಮೆ ನಿರ್ಮಾಣಕ್ಕೆ ಜಾಗ ನೀಡಿದ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಮೇಲೆ ಬಿಜೆಪಿ ನಾಯಕರು ಟೀಕಾ ಪ್ರಹಾರ ನಡೆಸುತ್ತಿದ್ದಾರೆ.

ಯೇಸು ಪ್ರತಿಮೆ ಬಗ್ಗೆ ಚರ್ಚೆ ನಡೆಯುತ್ತಿರುವುವಾಗಲೇ ಜನವರಿ 13ರ ಸೋಮವಾರ 'ಕನಕಪುರ ಚಲೋ' ಎಂಬ ಹೆಸರಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಡಿ. ಕೆ. ಶಿವಕುಮಾರ್ ತವರು ಕ್ಷೇತ್ರದ ಜನರಿಗೆ ಪತ್ರ ಬರೆದಿದ್ದಾರೆ.

ಯೇಸು ಪ್ರತಿಮೆ ನಿರ್ಮಾಣ; ಸಿಎಂ ಭೇಟಿಯಾದ ಕ್ರೈಸ್ತ ಪಾದ್ರಿಗಳ ನಿಯೋಗಯೇಸು ಪ್ರತಿಮೆ ನಿರ್ಮಾಣ; ಸಿಎಂ ಭೇಟಿಯಾದ ಕ್ರೈಸ್ತ ಪಾದ್ರಿಗಳ ನಿಯೋಗ

' ಕನಕಪುರದ ಮಹಾಜನರಲ್ಲಿ ಡಿ.ಕೆ. ಶಿವಕುಮಾರ್ ವಿನಮ್ರ ಮನವಿ' ಎಂದು ಪತ್ರ ಆರಂಭವಾಗುತ್ತದೆ. "ಕನಕಪುರದ ಮಹಾಜನರು ಶತ-ಶತಮಾನಗಳಿಂದಲೂ ಶಾಂತಿಪ್ರಿಯರು. ಮತೀಯ ಸಾಮರಸ್ಯಕ್ಕೆ ಹೆಸರಾದವರು" ಎಂದು ಪತ್ರದಲ್ಲಿ ಡಿ. ಕೆ. ಶಿವಕುಮಾರ್ ಉಲ್ಲೇಖಿಸಿದ್ದಾರೆ.

ಏಸು ಪ್ರತಿಮೆ ನಿರ್ಮಿಸಲು ಮುಂದಾದ ಡಿಕೆಶಿಗೆ ಬಿಎಸ್ವೈ ಪುತ್ರ ಕೇಳಿದ 3 ಪ್ರಶ್ನೆಗಳುಏಸು ಪ್ರತಿಮೆ ನಿರ್ಮಿಸಲು ಮುಂದಾದ ಡಿಕೆಶಿಗೆ ಬಿಎಸ್ವೈ ಪುತ್ರ ಕೇಳಿದ 3 ಪ್ರಶ್ನೆಗಳು

"ಕ್ಷೇತ್ರದ ಜನರು ತಾಳ್ಮೆ ಮತ್ತು ಸಂಯಮವನ್ನು ಕಾಪಾಡಿಕೊಳ್ಳಿ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡಬೇಡಿ. ಶಾಂತಿಗೆ ಭಂಗ ತರಬೇಡಿ ಎಂದು ಕೈಮುಗಿದು ವಿನಂತಿಸಿಕೊಳ್ಳುತ್ತೇನೆ" ಎಂದು ಡಿ. ಕೆ. ಶಿವಕುಮಾರ್ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಏಸು ಪ್ರತಿಮೆ ಟೀಕಿಸಿದವರಿಗೆ ತಿರುಗೇಟು ನೀಡಿದ ಡಿಕೆಶಿಏಸು ಪ್ರತಿಮೆ ಟೀಕಿಸಿದವರಿಗೆ ತಿರುಗೇಟು ನೀಡಿದ ಡಿಕೆಶಿ

ಸಹೋದರಭಾವದಿಂದ ಬದುಕಿದವರು

ಸಹೋದರಭಾವದಿಂದ ಬದುಕಿದವರು

ಕನಕಪುರ ಶಾಸಕ ಮತ್ತು ಮಾಜಿ ಸಚಿವ ಡಿ. ಕೆ. ಶಿವಕುಮಾರ್ ತಮ್ಮ ಪತ್ರದಲ್ಲಿ, "ಕನಕಪುರದ ಮಹಾಜನರು ಶತ-ಶತಮಾನಗಳಿಂದಲೂ ಶಾಂತಿಪ್ರಿಯರು. ಮತೀಯ ಸಾಮರಸ್ಯಕ್ಕೆ ಹೆಸರಾದವರು. ಜಾತಿ, ಮತ, ಧರ್ಮದ ಬೇಧವಿಲ್ಲದೆ ಸಹೋದರಭಾವದಿಂದ ಬದುಕಿದವರು, ಬದುಕುತ್ತಿರುವವರು. ಕೋಮುಸೌಹಾರ್ಧತೆಯಲ್ಲಿ ಇಡೀ ನಾಡಿಗೇ ಮಾದರಿಯಾದವರು" ಎಂದು ಹೇಳಿದ್ದಾರೆ.

ಕನಕಪುರ ಚಲೋ

ಕನಕಪುರ ಚಲೋ

"ಕಪಾಲಬೆಟ್ಟದ ಯೇಸುಪ್ರತಿಮೆ ನಿರ್ಮಾಣ ವಿರೋಧಿಸುವ ನೆಪದಲ್ಲಿ ಕೆಲವು ಮತೀಯ ಶಕ್ತಿಗಳು ಪ್ರಯತ್ನಿಸುತ್ತಿವೆ. ಸುಳ್ಳು ಕಾರಣ, ಕಟ್ಟುಕತೆಗಳನ್ನು ಸೃಷ್ಟಿಸುತ್ತಿವೆ. ವದಂತಿಗಳನ್ನು ಹರಡುತ್ತಿವೆ. ಇದೇ ಜನವರಿ 13 ರಂದು ಕನಕಪುರ ಚಲೋ ಹೆಸರಿನಲ್ಲಿ ಕೋಮುಸಾಮರಸ್ಯ ಹಾಳು ಮಾಡಿ, ಗಲಭೆ, ಹಿಂಸಾಚಾರಕ್ಕೆ ಪ್ರೇರಣೆ ನೀಡುವುದು ಈ ಮತೀಯ ಶಕ್ತಿಗಳ ಹುನ್ನಾರವಾಗಿದೆ" ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ಪ್ರಚೋದನೆಗೆ ಒಳಗಾಗಬೇಡಿ

ಪ್ರಚೋದನೆಗೆ ಒಳಗಾಗಬೇಡಿ

"ಆದರೆ, ಅವರಿಗೆ ಗೊತ್ತಿಲ್ಲ, ಕನಕಪುರದ ಮಹಾಜನತೆ ಅದೆಷ್ಟು ಪ್ರಬುದ್ಧರು, ಇಲ್ಲಿ ನೂರಾರು ವರ್ಷಗಳಿಂದ ಎಲ್ಲ ಕೋಮು ಮತ್ತು ಧರ್ಮದ ಜನರು ಅಣ್ಣ-ತಮ್ಮಂದಿರಂತೆ ಬದುಕುತ್ತಿದ್ದಾರೆ ಎಂಬುದು. ಹೀಗಾಗಿ ಕನಕಪುರ ಚಲೋ ಹೆಸರಿನಲ್ಲಿ ಮತೀಯ ಶಕ್ತಿಗಳು ನೀಡುವ ಯಾವುದೇ ಪ್ರಚೋದನೆಗೆ ಕನಕಪುರದ ಮಹಾಜನತೆ ಒಳಗಾಗಬೇಡಿ" ಎಂದು ಡಿ. ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

ಶಾಂತಿಭಂಗ ತರಬೇಡಿ

ಶಾಂತಿಭಂಗ ತರಬೇಡಿ

"ಅವರು ಎಷ್ಟೇ ಕೆರಸಿಳಿದರೂ ಸಹನೆ ಕಳೆದುಕೊಳ್ಳಬೇಡಿ. ತಾಳ್ಮೆ ಮತ್ತು ಸಂಯಮವನ್ನು ಕಾಪಾಡಿಕೊಳ್ಳಿ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡಬೇಡಿ. ಶಾಂತಿಗೆ ಭಂಗ ತರಬೇಡಿ ಎಂದು ಕೈಮುಗಿದು ವಿನಂತಿಸಿಕೊಳ್ಳುತ್ತೇನೆ" ಎಂದು ಡಿ. ಕೆ. ಶಿಕುಮಾರ್ ಪತ್ರದಲ್ಲಿ ಹೇಳಿದ್ದಾರೆ.

ಸಂಚನ್ನು ಹಿಮ್ಮೆಟ್ಟಿಸೋಣ

ಸಂಚನ್ನು ಹಿಮ್ಮೆಟ್ಟಿಸೋಣ

"ಕನಕಪುರದ ಜನತೆ ಮತೀಯ ಶಕ್ತಿಗಳ ವಿರುದ್ಧ ಒಗ್ಗಟ್ಟಿನಿಂದ ನಿಲ್ಲುತ್ತಾರೆ, ಕೋಮುಶಕ್ತಿಗಳ ಯಾವುದೇ ಪ್ರೇರಣೆ, ಹುನ್ನಾರಗಳಿಗೂ ಬಲಿಯಾಗುವುದಿಲ್ಲ. ಭ್ರಾತೃತ್ವವನ್ನು ಎತ್ತಿ ಹಿಡಿಯುತ್ತಾರೆ, ಸಾಮರಸ್ಯ, ಸೌಹಾರ್ಧತೆ ಕಾಪಾಡುತ್ತಾರೆಂಬ ಅದಮ್ಯ ವಿಶ್ವಾಸ, ನಂಬಿಕೆ ನನ್ನದು. ನಾವೆಲ್ಲರೂ ಶಾಂತಿಯಿಂದಲೇ ವಿಕೃತ ಮನಸ್ಸಿನ ಕೋಮುಶಕ್ತಿಗಳ ಸಂಚನ್ನು ಹಿಮ್ಮೆಟ್ಟಿಸೋಣ" ಎಂದು ಕರೆ ನೀಡಿದ್ದಾರೆ.

English summary
Yesu Krista statue at Kapali Betta in Ramanagara district sparks controversy. Here are the letter to people by the Kanakapur MLA D.K.Shivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X