'ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಮಾತ್ರ ಚುನಾವಣೆಗೆ ನಿಲ್ಲಲಿ ನೋಡೋಣ'
Recommended Video

ರಾಮನಗರ, ಏಪ್ರಿಲ್ 5 : ಕುಮಾರಸ್ವಾಮಿ ಅವರು ಚನ್ನಪಟ್ಟಣ ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿ. ಅವರ ಸ್ಪರ್ಧೆಯನ್ನು ನಾನು ಸ್ವಾಗತಿಸುತ್ತೇನೆ ಎನ್ನುವ ಮೂಲಕ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಸವಾಲು ಹಾಕಿದ್ದಾರೆ.
ರಾಮನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಯೋಗೇಶ್ವರ್, ಮಾಜಿ ಪ್ರಧಾನಿ ದೇವೇಗೌಡರ ಹಿರಿತನಕ್ಕೆ ಗೌರವ ಕೊಡುತ್ತೇನೆ. ಆದರೆ ಕ್ಷೇತ್ರದಲ್ಲಿ ನಾನು ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ಅವರು ಹಾಗೂ ಕುಮಾರಸ್ವಾಮಿ ಜನರಿಗೆ ತಪ್ಪು ಸಂದೇಶ ಕೊಡುತ್ತಿರುವುದು ಅಸಹ್ಯ ಎನಿಸುತ್ತದೆ ಎಂದರು.
ಇಷ್ಟು ಕಾಲ ಚನ್ನಪಟ್ಟಣ ಕ್ಷೇತ್ರದಲ್ಲಿ ಯಾರೊಬ್ಬರೂ ನೀರಾವರಿ ಯೋಜನೆ ಮಾಡುವ ಮನಸ್ಸು ಮಾಡಿರಲಿಲ್ಲ. ಆದರೆ ನಾನು ಮಾಡಿರುವ ನೀರಾವರಿ ಯೋಜನೆ ನೋಡಿ, ಅದರ ಹೆಸರಲ್ಲಿ ತಾವು ಅನುಕೂಲ ಪಡೆಯಲು ಎಲ್ಲರೂ ಮುಂದಾಗಿದ್ದಾರೆ ಎಂದು ಟೀಕಿಸಿದರು.
ಕುಮಾರಸ್ವಾಮಿ ಅವರು ನನ್ನ ಮೇಲೆ ಆರೋಪ ಮಾಡುತ್ತಾರೆ. "ಮೂವತ್ತು ಕೋಟಿ ಕೊಡ್ತೀನಿ, ನನ್ನ ವಿರುದ್ಧ ಡಮ್ಮಿ ಕ್ಯಾಂಡಿಡೇಟ್ ಹಾಕಿಕೊಡಿ" ಎಂದು ಯೋಗೇಶ್ವರ್ ಹೇಳ್ತಾರೆ ಎನ್ನುತ್ತಾರೆ. ಆದರೆ ಇದು ಶುದ್ಧ ಸುಳ್ಳು. ನಾನೇಕೆ ಕುಮಾರಸ್ವಾಮಿಗೆ ಹಣಕೊಡಲಿ? ಈ ಆರೋಪವನ್ನು ದಾಖಲೆ ಸಮೇತವಾಗಿ ಸಾಬೀತುಪಡಿಸಲಿ ಎಂದರು.

ದೇವೇಗೌಡರು- ಕುಮಾರಸ್ವಾಮಿ ಎಮೋಷನಲ್ ಬ್ಲ್ಯಾಕ್ ಮೇಲ್
ನಾನು ಎಂದೂ ಜೆಡಿಎಸ್ ಜೊತೆ ಹೊಂದಾಣಿಕೆ ರಾಜಕೀಯ ಮಾಡಿಲ್ಲ. ಇನ್ನು ಕುಮಾರಸ್ವಾಮಿ ಹಾಗೂ ದೇವೇಗೌಡರು ಚನ್ನಪಟ್ಟಣಕ್ಕೆ ಬಂದು ಎಮೋಷನಲ್ ಬ್ಲಾಕ್‌ಮೇಲ್ ಮಾಡ್ತಾರೆ. "ನನಗೆ ವಿಷವಾದರೂ ಕೊಡಿ, ಹಾಲನ್ನಾದರೂ ಕೊಡಿ" ಎನ್ನುತ್ತಾರೆ ಕುಮಾರಸ್ವಾಮಿ. ಆದರೆ ಇದೆಲ್ಲವೂ ಚನ್ನಪಟ್ಟಣದಲ್ಲಿ ನಡೆಯಲ್ಲ ಎಂದರು.

ಚಿಕ್ಕಬಳ್ಳಾಪುರ ಎಷ್ಟನೇ ಕಣ್ಣು?
ಚನ್ನಪಟ್ಟಣ ಹಾಗೂ ರಾಮನಗರ ನನ್ನ ಎರಡು ಕಣ್ಣು ಎನ್ನುತ್ತಾರೆ. ಆದರೆ ಚಿಕ್ಕಬಳ್ಳಾಪುರ ಅವರ ಎಷ್ಟನೇ ಕಣ್ಣು ಎಂದು ಕುಟುಕಿದರು. ನಾನು ಮಾಡಿದ ನೀರಾವರಿ ಯೋಜನೆ ಬಗ್ಗೆ ಕುಮಾರಸ್ವಾಮಿ ಟೀಕೆ ಮಾಡುತ್ತಾರೆ. ಆದರೆ ಅವರು ಮುಖ್ಯಮಂತ್ರಿ ಆಗಿದ್ದಾಗ ರಾಮನಗರ ಕ್ಷೇತ್ರಕ್ಕೆ ನೀರಾವರಿ ಯೋಜನೆಯನ್ನು ಯಾಕೆ ಮಾಡಿಲ್ಲ ಎಂದು ಪ್ರಶ್ನೆ ಮಾಡಿದರು.

ಜೆಡಿಎಸ್ ಪಕ್ಷಕ್ಕೆ ಇಪ್ಪತ್ತೈದು ಸ್ಥಾನಗಳಷ್ಟೆ
ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಇಪ್ಪತ್ತೈದು ಸ್ಥಾನಗಳಷ್ಟೆ ಜೆಡಿಎಸ್ ಪಕ್ಷಕ್ಕೆ ಬರೋದು ಎಂದು ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಹೇಳಿದ್ದಾರೆ. ಅವರ ಮಾತಿಗೆ ನಾನು ಸಮ್ಮತಿ ಸೂಚಿಸುತ್ತೇನೆ. ಅವರ ಅನುಭವದ ಅಧಾರದ ಮೇಲೆ ಹೇಳಿದ್ದಾರೆ. ಅವರ ಮಾತು ಸತ್ಯವಾಗಲಿದೆ ಎಂದರು.

ಕುಮಾರಸ್ವಾಮಿ ಗೆಸ್ಟ್ ಲೆಕ್ಚರರ್ ಥರ ಬರ್ತಾರೆ
ಚನ್ನಪಟ್ಟಣ ಕ್ಷೇತ್ರಕ್ಕೆ ಸದಾ ಜನರೊಂದಿಗಿರುವ ಜನನಾಯಕ ಬೇಕು. ಆದರೆ ಕುಮಾರಸ್ವಾಮಿ ರೀತಿ ವರ್ಷಕ್ಕೊಮ್ಮೆ ಗೆಸ್ಟ್ ಲೆಕ್ಚೆರರ್ ರೀತಿ ಬರುವ ಶಾಸಕ ಬೇಕಾಗಿಲ್ಲ ಎಂದು ವ್ಯಂಗ್ಯವಾಡಿದರು. ರಾಮನಗರ ಕ್ಷೇತ್ರದ ಜನತೆ ಹತ್ತು ವರ್ಷಗಳಿಂದಲೂ ಕುಮಾರಸ್ವಾಮಿಗೆ ಗುಲಾಮರಾಗಿದ್ದಾರೆ. ಚನ್ನಪಟ್ಟಣದ ಜೆಡಿಎಸ್ ಮುಖಂಡರ ಬಗ್ಗೆಯೂ ಕುಮಾರಸ್ವಾಮಿ ಹಾಗೂ ದೇವೇಗೌಡರ ಮನಸ್ಸಿನಲ್ಲಿ ಗೌರವವಿಲ್ಲ ಎಂದರು.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications