ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಚ್ಚರಿ ಮೂಡಿಸಿದ ಸಿ. ಪಿ. ಯೋಗೇಶ್ವರ್ ಅಭಿಮಾನಿಗಳ ಬ್ಯಾನರ್!

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜನವರಿ 13: ಚನ್ನಪಟ್ಟಣದ ಮಾಜಿ ಶಾಸಕ, ವಿಧಾನ ಪರಿಷತ್ ಸದಸ್ಯ ಸಿ. ಪಿ. ಯೋಗೇಶ್ವರ್ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರಲಿದ್ದಾರೆ. ಬುಧವಾರ ಮಧ್ಯಾಹ್ನ ರಾಜಭವನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧಿಕೃತವಾಗಿ ಸಂಪುಟ ಸೇರುವವರ ಹೆಸರನ್ನು ಘೋಷಣೆ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅಭಿಮಾನಿಗಳು ಸ್ವಾಗತ ಬ್ಯಾನರ್‌ಗಳನ್ನು ಹಾಕುತ್ತಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಸಿಎಂ ಯಡಿಯೂರಪ್ಪ ಸರ್ಕಾರಕ್ಕೆ ಗಂಡಾಂತರ?ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಸಿಎಂ ಯಡಿಯೂರಪ್ಪ ಸರ್ಕಾರಕ್ಕೆ ಗಂಡಾಂತರ?

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಸಿ. ಪಿ. ಯೋಗೇಶ್ವರ್ ಅವರಿಗೆ ಅಭಿನಂದನೆ ಸಲ್ಲಿಸಿ ಬ್ಯಾನರ್‌ಗಳನ್ನು ಹಾಕಲಾಗಿದೆ. ಆದರೆ, ಅಧಿಕೃತವಾಗಿ ಹೆಸರು ಘೋಷಣೆಯಾಗುವ ಮೊದಲೇ ಬ್ಯಾನರ್ ಹಾಕಿದ್ದು ಅಚ್ಚರಿಗೆ ಕಾರಣವಾಗಿತ್ತು.

ಕುಮಾರಸ್ವಾಮಿ V/S ಯೋಗೇಶ್ವರ ಮಾತಿನ ಮಲ್ಲಯುದ್ಧ! ಕುಮಾರಸ್ವಾಮಿ V/S ಯೋಗೇಶ್ವರ ಮಾತಿನ ಮಲ್ಲಯುದ್ಧ!

Yogeshwar Supporters Banners In Chennapatna

ಹಿಂದೆಯೂ ಕರ್ನಟಕದಲ್ಲಿ ಬಿಜೆಪಿ ಸರ್ಕಾರ ಬಂದಾಗ ಸಿ. ಪಿ. ಯೋಗೇಶ್ವರ್ ಮಂತ್ರಿಯಾಗುತ್ತಾರೆ ಎಂದು ಸ್ವಾಗತ ಕೋರಿ ಬ್ಯಾನರ್ ಹಾಕಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಅವರ ಹೆಸರು ಪಟ್ಟಿಯಿಂದ ಹೊರಗುಳಿದಿತ್ತು.

ಯೋಗೇಶ್ವರಗೆ ಸಚಿವ ಸ್ಥಾನ; ಜಿ. ಎಚ್. ತಿಪ್ಫಾರೆಡ್ಡಿ ಗರಂ! ಯೋಗೇಶ್ವರಗೆ ಸಚಿವ ಸ್ಥಾನ; ಜಿ. ಎಚ್. ತಿಪ್ಫಾರೆಡ್ಡಿ ಗರಂ!

ಆಗ ಸಿ. ಪಿ. ಯೋಗೇಶ್ವರ್ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ಸಚಿವರಾಗುತ್ತಾರೆ ಎಂದು ಬ್ಯಾನರ್ ಕಟ್ಟಿ ನಗೆಪಾಟಲಿಗೆ ಒಳಗಾಗಿದ್ದರು. ಆದರೆ, ಈ ಬಾರಿ ಸ್ವತಃ ಯಡಿಯೂರಪ್ಪ ನೂತನ ಸಚಿವರ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ.

ಚುನಾವಣೆಯಲ್ಲಿ ಸೋಲು: ಸಿ. ಪಿ. ಯೋಗೇಶ್ವರ್ 2018ರ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ 66,465 ಮತಗಳನ್ನು ಪಡೆದು ಸೋಲು ಕಂಡಿದ್ದರು. ಹೆಚ್. ಡಿ. ಕುಮಾರಸ್ವಾಮಿ 87,995 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು.

ಚುನಾವಣೆಯಲ್ಲಿ ಸೋತ ಸಿ. ಪಿ. ಯೋಗೇಶ್ವರ್ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು. ಆದ್ದರಿಂದ, ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನೇಮಕ ಮಾಡಲಾಗಿತ್ತು. ಈಗ ಸಚಿವ ಸ್ಥಾನವನ್ನು ನೀಡಲಾಗುತ್ತಿದೆ.

English summary
C. P. Yogeshwar will join chief minister B. S. Yediyurappa cabinet today. In Chennapatna his supporters put a banner for getting minister post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X