Breaking: ಹಣದ ಜೊತೆ ಸಿಕ್ಕಿಬಿದ್ದ ಶಾಸಕರು ಕಾಂಗ್ರೆಸ್‌ನಿಂದ ಅಮಾನತು
ರಾಂಚಿ, ಜುಲೈ 31: ಶನಿವಾರ ಪಶ್ಚಿಮ ಬಂಗಾಳದಲ್ಲಿ ಹಣದ ರಾಶಿಯೊಂದಿಗೆ ಸಿಕ್ಕಿಬಿದ್ದಿದ್ದ ಜಾರ್ಖಂಡ್‌ನ ಮೂವರು ಶಾಸಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಭಾನುವಾರ (ಜುಲೈ.31) ಅಮಾನತುಗೊಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಜಾರ್ಖಂಡ್ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ, "ಮೂವರು ಶಾಸಕರನ್ನು ಶಾಸಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ" ಎಂದು ಹೇಳಿದರು.
ರಾಜ್ಯ ಸರ್ಕಾರವನ್ನು ಪತನಗೊಳಿಸಲು ಈ ಮೂವರು ನಾಯಕರಿಗೆ ಹಣ ನೀಡಲಾಗಿದೆ ಎಂದು ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ದೋಷಿಸಿತ್ತು. ಆದರೆ ಈ ಹಣ ಜಾರ್ಖಂಡ್ ಮುಕ್ತಿ ಮೋರ್ಚಾ-ಕಾಂಗ್ರೆಸ್ ಮೈತ್ರಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಹೇಳಿದೆ.

"ಮುಂದಿನ ದಿನಗಳಲ್ಲಿ ಯಾವುದೇ ಸಾರ್ವಜನಿಕ ಪ್ರತಿನಿಧಿಯಾಗಲಿ, ಪಕ್ಷದ ಪದಾಧಿಕಾರಿಯಾಗಲಿ, ಕಾರ್ಯಕರ್ತರಾಗಲಿ ಎಲ್ಲರ ಮಾಹಿತಿಯೂ ನಮ್ಮ ಬಳಿ ಇದೆ, ಯಾರೇ ಈ ಸಂಬಂಧ ಪ್ರಕರಣದಲ್ಲಿ ಶಾಮೀಲಾಗಿದ್ದರೂ ಅವರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಲಿದೆ" ಎಂದು ಅವಿನಾಶ್ ಪಾಂಡೆ ಭರವಸೆ ನೀಡಿದರು.
ಪಕ್ಷದಿಂದ ಅಮಾನತುಗೊಂಡ ಜಮ್ತಾರಾ ಶಾಸಕ ಇರ್ಫಾನ್ ಅನ್ಸಾರಿ, ಖಿಜ್ರಿ ಶಾಸಕ ರಾಜೇಶ್ ಕಚ್ಚಪ್ ಮತ್ತು ಕೊಲೆಬೀರಾ ಶಾಸಕ ನಮನ್ ಬಿಕ್ಸಲ್ ಕೊಂಗರಿ ಅವರನ್ನು ಹೌರಾ ಗ್ರಾಮಾಂತರ ಪೊಲೀಸರು ಹಣದ ಮೂಲದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

"ತಮ್ಮದಲ್ಲದ ಯಾವುದೇ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವುದು ಬಿಜೆಪಿಯ ಸ್ವಭಾವವಾಗಿದೆ. ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಸರ್ಕಾರದ ವಿರುದ್ಧವೂ ಅದೇ ರೀತಿ ಮಾಡಲಾಗುತ್ತಿದೆ. ಶಾಸಕರಿಗೆ ಹಣ ನೀಡಿರುವ ಏಕೈಕ ಕಾರಣ. ಸರಕಾರ ಬೀಳುವಂತೆ ಮಾಡುವುದು" ಎಂದು ಜಾರ್ಖಂಡ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಬಂಧು ಟಿರ್ಕಿ ಈ ಹಿಂದೆ ಆರೋಪಿಸಿದ್ದರು.












Click it and Unblock the Notifications