ಆದಿವಾಸಿ ಬಾಲಕಿ ಮೇಲೆ ಹಲ್ಲೆ; ಕ್ರಮ ಕೈಗೊಳ್ಳಲು ಜಾರ್ಖಂಡ್ ಸಿಎಂ ಸೂಚನೆ
ರಾಂಚಿ, ಮೇ 23: ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಆದಿವಾಸಿ ಅಪ್ರಾಪ್ತ ಬಾಲಕಿಗೆ ಮನಬಂದಂತೆ ಕಾಲಿನಲ್ಲಿ ಒದೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಪಾಕುಡ್ ಮತ್ತು ದುಮ್ಕಾ ಜಿಲ್ಲೆಯ ಗಡಿ ಭಾಗದಲ್ಲಿ ನಡೆದಿದೆ. ಈ ಘಟೆನ ಕುರಿತಂತೆ ಮಾಹಿತಿ ತಿಳಿದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಹಲ್ಲೆ ಮಾಡಿರುವ ಬಾಲಕನ ವಿರುದ್ಧ ಕಠಿಣ ಕ್ರಮ ಜರುಗಿಸಲು ಆದೇಶ ಹೊರಡಿಸಿದ್ದಾರೆ.
ಈ ವೈರಲ್ ವಿಡಿಯೋದಲ್ಲಿ ಆದಿವಾಸಿ ಜನಾಂಗಕ್ಕೆ ಸೇರಿದ ಶಾಲಾ ಬಾಲಕಿಯೊಬ್ಬಳಿಗೆ ಅಪ್ರಾಪ್ತ ಬಾಲಕನೊಬ್ಬ ಮನಬಂದಂತೆ ಥಳಿಸಿದ್ದಾನೆ. ಬಾಲಕಿ ಕೆಳಗೆ ಬಿದ್ದರೂ ಕಾಲಿನಲ್ಲಿ ಸತತವಾಗಿ ಒದೆಯುತ್ತಿರುವುದನ್ನು ಕಾಣಬಹುದಾಗಿದೆ. ವಿಡಿಯೋದಲ್ಲಿರುವ ಬಾಲಕಿ ಪಾಕುಡ್ ಜಿಲ್ಲೆಯ ಶಾಲೆಗೆ ಸೇರಿದವಳೆಂದು ತಿಳಿದುಬಂದಿದೆ. ಬಾಲಕಿ ಹಲ್ಲೆ ಮಾಡುತ್ತಿರುವ ವಿಡಿಯೋವನ್ನು ಅಪರಿಚಿತರೊಬ್ಬರು ವಿಡಿಯೋ ಮಾಡಿದ್ದರು.
|
ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಖಂಡಿಸಿ ಬಾಲಕನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದರು. ನಂತರ ಈ ವಿಡಿಯೋ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಹೇಮಂತ್ ಸೋರೆನ್ ಪಾಕುಡ್ ಜಿಲ್ಲೆಯ ಪೊಲೀಸರಿಗೆ ತಕ್ಷಣವೇ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ಹೊರಡಿಸಿದ್ದಾರೆ. " ದಯವಿಟ್ಟು ಮೇಲ್ಕಂಡ ವಿಷಯದ ಬಗ್ಗೆ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸಿದ ನಂತರ ಮಾಹಿತಿ ನೀಡಿ" ಎಂದು ಸೋರೆನ್ ಜಾರ್ಖಂಡ್ ಪೊಲೀಸ್, ಪಾಕುಡ್ ಜಿಲ್ಲಾ ಪೊಲೀಸ್‌ಗೆ ಭಾನುವಾರ ಸೂಚನೆ ನೀಡಿದ್ದಾರೆ.
|
ತಡ ಮಾಡದೇ ತನಿಖೆಗೆ ಸೂಚನೆ
ಈ ಅಮಾನುಷ ಘಟನೆ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಟ್ವೀಟ್ ಮಾಡಿದ ನಂತರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಪಾಕುಡ್ ಠಾಣೆ ಪೊಲೀಸರಿಗೆ ವಿಳಂಬ ಮಾಡದೇ ತನಿಖೆ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಜಾರ್ಖಂಡ್ ಪೊಲೀಸ್ ಸಿಎಂ ಟ್ವೀಟ್‌ಗೆ ಉತ್ತರಿಸಿದ್ದಾರೆ. ಅಪ್ರಾಪ್ತೆಗೆ ಬಾಲಕನೊಬ್ಬ ಥಳಿಸುತ್ತಿರುವ ಘಟನೆ 15 ದಿನಗಳ ಹಿಂದೆ ನಡೆದಿದೆ. ಈ ಪ್ರಕರಣವು ದುಮ್ಕಾ ಜಿಲ್ಲೆಯ ಗೋಪಿಕಂದರ್ ಪೊಲೀಸ್ ಠಾಣಾ ವ್ಯಾಪ್ತಿಯ ಖರೌನಿ ಬಜಾರ್‌ಗೆ ಸಂಬಂಧಿಸಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ದುಮ್ಕಾ ಸಬ್ ಡಿವಿಜಿನಲ್ ಪೊಲೀಸ್ ಅಧಿಕಾರಿ ನೂರ್ ಮುಸ್ತಾಫ ತಿಳಿಸಿದ್ದಾರೆ.
|
ಒಂದೇ ಶಾಲೆಯ ವಿದ್ಯಾರ್ಥಿಗಳು
ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಗೆ ಹಲ್ಲೆ ಮಾಡಿರುವ ಬಾಲಕನನ್ನು ಬಂಧಿಸಲಾಗಿದೆ. ಗೋಪಿಕಂದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ತನಿಖೆಯಲ್ಲಿ ಈ ಹಲ್ಲೆ ಮಾಡಿರುವ ಬಾಲಕ ಮತ್ತು ಹಲ್ಲೆಗೊಳಗಾದ ಬಾಲಕಿ ಇಬ್ಬರು ಒಂದೇ ಶಾಲೆಯ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ ಎಂದು ಮುಸ್ತಾಫ ತಿಳಿಸಿದ್ದಾರೆ.

ಲವ್ ವಿಚಾರಕ್ಕೆ ಜಗಳ
ದುಮ್ಕಾ ಪೊಲೀಸ್ ಠಾಣೆಯ ಅಧಿಕಾರಿಗಳ ಪ್ರಕಾರ ಈ ಘಟನೆ ಮೇಲುನೋಟಕ್ಕೆ ಲವ್ ವಿಚಾರಕ್ಕಾಗಿ ನಡೆದಿರಬಹುದು ಅನುಮಾನವಿದೆ. ಬಾಲಕ ಮತ್ತು ಬಾಲಕಿ ಒಂದೇ ಆದಿವಾಸಿ ಸಮೂದಾಯಕ್ಕೆ ಸೇರಿದ್ದಾರೆ. ವಿಚಾರಣೆಗಾಗಿ ಅವರನ್ನು ಗೋಪಿಕಂದರ್ ಪೊಲೀಸ್ ಠಾಣೆಗೆ ಕರೆತರಲಾಗಿದೆ. ಬಾಲಕ ಅಪ್ರಾಪ್ತನಾಗಿರುವುದರಿಂದ ರಿಮ್ಯಾಂಡ್ ಹೋಮ್‌ಗೆ ಕಳುಹಿಸಲು ಸಿದ್ಧತೆ ನಡೆಸಲಾಗುತ್ತಿದೆ ಪೊಲೀಸರು ಮಾಹಿತಿ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications